Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 19:4 - ಕನ್ನಡ ಸತ್ಯವೇದವು J.V. (BSI)

4 ಇದಲ್ಲದೆ ಐಗುಪ್ತ್ಯರನ್ನು ಕ್ರೂರನಾದ ಒಡೆಯನ ಕೈಗೆ ಒಪ್ಪಿಸುವೆನು; ಭಯಂಕರನಾದ ರಾಜನು ಅವರನ್ನಾಳುವನು ಎಂದು ಸೇನಾಧೀಶ್ವರನಾದ ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇದಲ್ಲದೆ ಐಗುಪ್ತ್ಯರನ್ನು ಕ್ರೂರವಾದ ಒಡೆಯನ ಕೈಗೆ ಒಪ್ಪಿಸುವೆನು. ಭಯಂಕರನಾದ ರಾಜನು ಅವರನ್ನು ಆಳುವನು” ಎಂದು ಸೇನಾಧೀಶ್ವರನಾದ ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ಇದಲ್ಲದೆ ಈಜಿಪ್ಟಿನವರನ್ನು ಕ್ರೂರ ಅರಸನ ವಶಕ್ಕೆ ಒಪ್ಪಿಸುವೆನು. ರಾಜನು ದಬ್ಬಾಳಿಕೆಯಿಂದ ಅವರನ್ನು ಆಳುವನು. ಇದು ಸರ್ವಶಕ್ತ ಸರ್ವೇಶ್ವರನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸರ್ವಶಕ್ತನೂ ಒಡೆಯನೂ ಆಗಿರುವ ಯೆಹೋವನು ಹೇಳುವುದೇನೆಂದರೆ: “ನಾನು ಈಜಿಪ್ಟನ್ನು ಕಠಿಣನಾದ ಒಡೆಯನಿಗೆ ಒಪ್ಪಿಸುವೆನು. ಬಲಿಷ್ಠ ಒಡೆಯನು ಅವರನ್ನು ಆಳುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಈಜಿಪ್ಟಿನವರನ್ನು ಕ್ರೂರನಾದ ಒಡೆಯನ ಕೈಗೆ ಒಪ್ಪಿಸುವೆನು. ಭಯಂಕರನಾದ ರಾಜನು ಅವರನ್ನಾಳುವನು, ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 19:4
9 ತಿಳಿವುಗಳ ಹೋಲಿಕೆ  

ಅಶ್ಶೂರದ ಅರಸನು ಐಗುಪ್ತದ ಸೆರೆಯವರನ್ನೂ ಕೂಷಿನ ಕೈದಿಗಳನ್ನೂ ಅವರು ದೊಡ್ಡವರಾಗಲಿ ಚಿಕ್ಕವರಾಗಲಿ ಬಟ್ಟೆ ಕೆರಗಳಿಲ್ಲದೆ ಬರಿಕುಂಡಿಯವರಾಗಿ ಐಗುಪ್ತದ ಮಾನಭಂಗಕ್ಕೋಸ್ಕರ ಸೆರೆಗೆ ನಡೆಯುವಂತೆ ಮಾಡುವನು.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತದೇಶವನ್ನು ಕೊಡುವೆನು; ಅವನು ಅದರ ಜನ ಯಾವತ್ತನ್ನು ಒಯ್ದು ಆ ದೇಶವನ್ನು ಸೂರೆಮಾಡಿ ಕೊಳ್ಳೆಹೊಡೆಯುವನು; ಅದೇ ಅವನ ಸೈನ್ಯಕ್ಕೆ ಸಂಬಳ.


ಅವರ ಪ್ರಾಣವನ್ನು ಹುಡುಕುವ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮತ್ತು ಅವನ ಸೇವಕರ ಕೈಗೆ ಕೊಟ್ಟುಬಿಡುವೆನು; ಅನಂತರ ಅಲ್ಲಿ ಪೂರ್ವಕಾಲದ ಹಾಗೆ ಜನರು ವಾಸಿಸುವರು. ಇದು ಯೆಹೋವನ ನುಡಿ.


ಐಗುಪ್ತ್ಯರನ್ನು ಐಗುಪ್ತ್ಯರ ಮೇಲೆಯೇ ಎಬ್ಬಿಸುವೆನು; ಅಣ್ಣತಮ್ಮಂದಿರು, ನೆರೆಹೊರೆಯವರು, ಪಟ್ಟಣ ಪಟ್ಟಣಗಳು, ರಾಷ್ಟ್ರ ರಾಷ್ಟ್ರಗಳು ಪರಸ್ಪರವಾಗಿ ಹೋರಾಡುವವು.


ನೀನು ನನ್ನನ್ನು ಶತ್ರುಗಳ ಕೈಕೆಳಗೆ ಬೀಳಿಸಲಿಲ್ಲ; ನಿರಾತಂಕಸ್ಥಾನದಲ್ಲಿ ನನ್ನನ್ನು ನಿಲ್ಲಿಸಿದಿ.


ದೇವರು ದಾವೀದನನ್ನು ನನ್ನ ಕೈಗೆ ಒಪ್ಪಿಸಿದನು. ಅವನು ಅಗುಳಿಕದಗಳಿಂದ ಭದ್ರವಾಗಿರುವ ಪಟ್ಟಣವನ್ನು ಪ್ರವೇಶಿಸಿದ್ದಾನಲ್ಲಾ; ಅವನು ಅಲ್ಲಿಂದ ತಪ್ಪಿಸಿಕೊಳ್ಳಲಾರನು ಅಂದುಕೊಂಡು


ನಾನು ನದೀಶಾಖೆಗಳನ್ನು ಬತ್ತಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು; ಹೌದು, ದೇಶವನ್ನೂ ಅದರಲ್ಲಿನ ಸಮಸ್ತವನ್ನೂ ಅನ್ಯರ ಕೈಯಿಂದ ಹಾಳುಮಾಡಿಸುವೆನು; ಯೆಹೋವನಾದ ನಾನೇ ನುಡಿದಿದ್ದೇನೆ.


ಆದರೂ ಅದು ಗಡೀಪಾರಾಗಿ ಸೆರೆಹೋಯಿತು; ಅದರ ಮಕ್ಕಳನ್ನು ಪ್ರತಿ ಬೀದಿಯ ಕೊನೆಯಲ್ಲಿ ಬಂಡೆಗೆ ಅಪ್ಪಳಿಸಿಬಿಟ್ಟರು; ಅದರ ಘನವಂತರಿಗೋಸ್ಕರ ಚೀಟುಹಾಕಿದರು, ಅದರ ಮಹನೀಯರೆಲ್ಲರನ್ನು ಸಂಕೋಲೆಗಳಿಂದ ಬಂಧಿಸಿದರು.


ಆಗ ಯೆಹೋವನು ಹೀಗೆ ಹೇಳಿದನು - ನನ್ನ ಸೇವಕನಾದ ಯೆಶಾಯನು ಐಗುಪ್ತದ ಮತ್ತು ಕೂಷಿನ ನಾಶನಕ್ಕೆ ಸೋಜಿಗದ ಗುರುತಾಗಿ ಮೂರು ವರುಷ ಬಟ್ಟೆ ಕೆರಗಳಿಲ್ಲದೆ ನಡೆದ ಪ್ರಕಾರ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು