Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 2:13 - ಕನ್ನಡ ಸತ್ಯವೇದವು J.V. (BSI)

13 ಎತ್ತರವಾಗಿ ಬೆಳೆದಿರುವ ಲೆಬನೋನಿನ ಸರ್ವದೇವದಾರು ವೃಕ್ಷಗಳು, ಬಾಷಾನಿನ ಎಲ್ಲಾ ಅಲ್ಲೋನ್ ಮರಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ ಮತ್ತು ಬಾಷಾನಿನ ಎಲ್ಲಾ ಅಲ್ಲೋನ ಮರಗಳ ಮೇಲೆಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲ ದೇವದಾರು ವೃಕ್ಷಗಳಿಗೆ, ಬಾಷಾನಿನ ಎಲ್ಲಾ ಅಲ್ಲೋನ್ ಮರಗಳಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆ ಅಹಂಕಾರದ ಜನರು ಲೆಬನೋನಿನ ದೇವದಾರು ಮರಗಳಂತಿರುವರು. ಬಾಷಾನಿನ ಮಹಾದೇವದಾರು ಮರಗಳಂತಿರುವರು. ಆದರೆ ಯೆಹೋವನು ಅವರನ್ನು ಶಿಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳೂ ಹಾಗೂ ಬಾಷಾನಿನ ಎಲ್ಲಾ ಏಲಾ ಮರಗಳ ಮೇಲೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 2:13
9 ತಿಳಿವುಗಳ ಹೋಲಿಕೆ  

ಹೌದು, ತುರಾಯಿಮರಗಳೂ ಲೆಬನೋನಿನ ದೇವದಾರು ವೃಕ್ಷಗಳೂ ನೀನು ಬಿದ್ದುಕೊಂಡ ಮೇಲೆ ಕಡಿಯುವವನು ಯಾವನೂ ನಮ್ಮ ತಂಟೆಗೆ ಬಂದಿಲ್ಲವೆಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.


ಆದಕಾರಣ ನಾನು ಯೆಹೂದದ ಮೇಲೆ ಬೆಂಕಿಯನ್ನು ಸುರಿಸುವೆನು; ಅದು ಯೆರೂಸಲೇವಿುನ ಅರಮನೆಗಳನ್ನು ನುಂಗಿಬಿಡುವದು.


ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ - ನನ್ನ ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು ವೃಕ್ಷಗಳನ್ನೂ ಶ್ರೇಷ್ಠವಾದ ತುರಾಯಿ ಮರಗಳನ್ನೂ ಕಡಿದು ಬಿಟ್ಟಿದ್ದೇನೆ; ಅಲ್ಲಿನ ಬಹುದೂರದ ಶಿಖರವನ್ನೂ ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ;


ಯೆಹೋವನ ಗರ್ಜನೆಗೆ ದೇವದಾರುವೃಕ್ಷಗಳು ದಡಲ್ ಎಂದು ಮುರಿದು ಬೀಳುತ್ತವೆ; ಯೆಹೋವನು ಲೆಬನೋನ್ ಪರ್ವತದಲ್ಲಿನ ಮಹಾ ದೇವದಾರುಗಳನ್ನೂ ಮುರಿದುಬಿಡುತ್ತಾನೆ.


ದೇಶವು ಪ್ರಲಾಪಿಸಿ ಕುಗ್ಗುತ್ತದೆ, ಲೆಬನೋನ್ ನಾಚಿಕೊಂಡು ಒಣಗುತ್ತದೆ. ಶಾರೋನ್ ಬೆಂಗಾಡಾಗಿದೆ, ಬಾಷಾನ್ ಮತ್ತು ಕರ್ಮೆಲ್ [ತಳಿರುಗಳನ್ನು] ಉದುರಿಸಿಬಿಟ್ಟಿವೆ.


ಬಾಷಾನಿನ ಅಲ್ಲೋನ್ ಮರದಿಂದ ನಿನ್ನ ಹುಟ್ಟುಗಳನ್ನು ರೂಪಿಸಿ ಕಿತ್ತೀಮ್ ದ್ವೀಪದ ತಿಲಕದ ಹಲಿಗೆಯಿಂದ ನಿನ್ನ ಮೇಲ್ಮಾಳಿಗೆಯನ್ನು ಕಟ್ಟಿ ದಂತದಿಂದ ಕೆತ್ತಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು