Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 2:21 - ಕನ್ನಡ ಸತ್ಯವೇದವು J.V. (BSI)

21 ಯೆಹೋವನು ಭೂಮಂಡಲವನ್ನು ಕಂಪನ ಮಾಡುವದಕ್ಕೆ ಏಳುವಾಗ ಆತನ ಭಯಂಕರತನಕ್ಕೂ ಅತ್ಯುನ್ನತಮಹಿಮೆಗೂ ಹೆದರಿ ಬಂಡೆಗಳ ಸಂದುಗೊಂದುಗಳಲ್ಲಿಯೂ ಚೂಪಾದ ಶಿಲೆಗಳ ಸೀಳುಗಳಲ್ಲಿಯೂ ನುಗ್ಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆಹೋವನು ಭೂಮಂಡಲವನ್ನು ನಡುಗಿಸಲು ಏಳುವಾಗ, ಆತನ ಭಯಂಕರಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಸಂದುಗೊಂದುಗಳಲ್ಲಿಯೂ, ಚೂಪಾದ ಶಿಖರಗಳ ಕಡಿದಾದ ಸ್ಥಳಗಳಿಗೂ ನುಗ್ಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಭೂಮಂಡಲವನ್ನು ಕಂಪನಗೊಳಿಸಲು ಸ್ವಾಮಿ ಎದ್ದಾಗ ಅವರ ಭಯಂಕರ ಕೋಪಕ್ಕೆ ಅಂಜಿ, ಅವರ ಮಹೋನ್ನತ ಮಹಿಮೆಗೆ ಹೆದರಿ, ನುಗ್ಗುವರು ಜನರು ಕಲ್ಲುಬಂಡೆಗಳ ಸಂದುಗೊಂದುಗಳಲ್ಲಿ, ಶಿಲೆಗಳ ಸೀಳುಪಾಳುಗಳಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಜನರು ಬಿಸಾಡಿ, ಸಂದುಗೊಂದುಗಳಲ್ಲಿ ಅಡಗಿಕೊಳ್ಳುವರು. ಯೆಹೋವನಿಗೂ ಆತನ ಮಹಾಶಕ್ತಿಗೂ ಹೆದರಿ ಅವರು ಹಾಗೆ ಮಾಡುವರು. ಯೆಹೋವನು ಎದ್ದು ಭೂಮಿಯನ್ನು ಅಲುಗಾಡಿಸುವ ಸಮಯದಲ್ಲಿ ಇವೆಲ್ಲಾ ಸಂಭವಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೆಹೋವ ದೇವರು ಭೂಮಿಯನ್ನು ನಡುಗಿಸಲು ಎದ್ದಾಗ, ಯೆಹೋವ ದೇವರ ಭಯಕ್ಕೂ, ಅವರ ಮಹಿಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ, ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಜನರು ನುಗ್ಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 2:21
12 ತಿಳಿವುಗಳ ಹೋಲಿಕೆ  

ಯೆಹೋವನು ಭೂಮಂಡಲವನ್ನು ಕಂಪನ ಮಾಡುವದಕ್ಕೆ ಏಳುವಾಗ ಮನುಷ್ಯರು ಆತನ ಭಯಂಕರತನಕ್ಕೂ ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಗವಿಗಳಲ್ಲಿಯೂ ನೆಲದ ಹಳ್ಳಕೊಳ್ಳಗಳಲ್ಲಿಯೂ ಸೇರಿಕೊಳ್ಳುವರು.


ಗವಿಯೊಳಗೆ ನುಗ್ಗು, ಯೆಹೋವನ ಭಯಂಕರತನಕ್ಕೂ ಅತ್ಯುನ್ನತ ಮಹಿಮೆಗೂ ಹೆದರಿ ದೂಳಿನಲ್ಲಿ ಅವುತುಕೋ!


ಬಂಡೆಯ ಬಿರುಕುಗಳಲ್ಲಿಯೂ ಜರಿಯ ಮರೆಯಲ್ಲಿಯೂ ಇರುವ ನನ್ನ ಪರಿವಾಳವೇ! ನಿನ್ನ ರೂಪು ನನಗೆ ಕಾಣಿಸು, ನಿನ್ನ ದನಿ ಕೇಳಿಸು; ನಿನ್ನ ದನಿ ಎಷ್ಟೋ ಇಂಪು, ನಿನ್ನ ರೂಪು ಎಷ್ಟೋ ಅಂದ.


ಅವರು ಭಯಂಕರವಾದ ಡೊಂಗರಗಳಲ್ಲಿ ವಾಸಿಸತಕ್ಕವರು, ಭೂವಿುಯಲ್ಲಿಯೂ ಬಂಡೆಗಳಲ್ಲಿಯೂ ಸಿಕ್ಕುವ ಡೊಗರುಗಳೇ ಅವರ ಮನೆಗಳು.


ನನ್ನ ಪ್ರಭಾವವು ನಿನ್ನೆದುರಾಗಿ ದಾಟಿಹೋಗುವ ಕಾಲದಲ್ಲಿ ನಾನು ಈ ಬಂಡೆಯ ಸಂದಿನಲ್ಲಿ ನಿನ್ನನ್ನು ಇರಿಸಿ ನಿನ್ನ ಮುಂದೆ ದಾಟಿಹೋಗುವ ತನಕ ನಿನ್ನ ಮೇಲೆ ಕೈ ಮುಚ್ಚುವೆನು;


ಭೂಲೋಕವನ್ನು ಸ್ಥಳದೊಳಗಿಂದ ಕದಲಿಸಿ ಅದರ ಸ್ತಂಭಗಳನ್ನು ನಡುಗಿಸುತ್ತಾನೆ.


ಭಯದ ಸಪ್ಪಳದಿಂದ ಓಡಿಹೋಗುವವನು ಗುಂಡಿಯಲ್ಲಿ ಬೀಳುವನು, ಗುಂಡಿಯನ್ನು ಹತ್ತಿಬರುವವನು ಬಲೆಗೆ ಸಿಕ್ಕುವನು. ನೋಡು, ಆಕಾಶದ ದ್ವಾರಗಳು ತೆರೆದಿವೆ, ಭೂವಿುಯ ಅಸ್ತಿವಾರಗಳು ಕಂಪಿಸುತ್ತಿವೆ.


ಯೆಹೋವನು ಹೀಗನ್ನುತ್ತಾನೆ - ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿಕೊಳ್ಳುವೆನು, ಕೂಡಲೆ ಉನ್ನತೋನ್ನತನಾಗುವೆನು.


ಯೆಹೋವನು ಹೀಗನ್ನುತ್ತಾನೆ - ಇಗೋ, ನನ್ನ ಜನರನ್ನು ಹಿಡಿಯುವದಕ್ಕೆ ಬಹುಮಂದಿ ಬೆಸ್ತರನ್ನು ಕರೆಯಿಸುವೆನು; ಆಮೇಲೆ ಎಲ್ಲಾ ಬೆಟ್ಟಗುಡ್ಡಗಳಿಂದಲೂ ಬಂಡೆಗಳ ಸಂದುಗೊಂದುಗಳಿಂದಲೂ ಅವರನ್ನು ಹೊರಡಿಸಿ ಬೇಟೆಯಾಡುವದಕ್ಕೆ ಬಹುಜನ ಬೇಡರನ್ನು ಕರೆಯಿಸುವೆನು.


ಅವರು ಧೈರ್ಯಗುಂದಿದವರಾಗಿ ತಮ್ಮ ತಮ್ಮ ಕೋಟೆಗಳಿಂದ ನಡುಗುತ್ತಾ ಬರುವರು.


ಅವೆಲ್ಲಾ ಬಂದು ಕಡಿದಾದ ಡೊಂಗರಗಳಲ್ಲಿಯೂ ಬಂಡೆಗಳ ಸಂದುಗೊಂದುಗಳಲ್ಲಿಯೂ ಎಲ್ಲಾ ಮುಳ್ಳುಪೊದೆಗಳಲ್ಲಿಯೂ ಗೋಮಾಳಗಳಲ್ಲಿಯೂ ಮುತ್ತಿಕೊಳ್ಳುವವು.


ಇಸ್ರಾಯೇಲಿಗೆ ಪಾಪಾಸ್ಪದವಾದ ಆವೆನಿನ ಪೂಜಾಸ್ಥಾನಗಳು ನಾಶವಾಗುವವು; ಮುಳ್ಳುಗಿಡಗಳೂ ಕಳೆಗಳೂ ಅಲ್ಲಿನ ಯಜ್ಞವೇದಿಗಳ ಮೇಲೆ ಹುಟ್ಟುವವು; ಅಲ್ಲಿನ ಜನರು - ಬೆಟ್ಟಗಳೇ, ನಮ್ಮನ್ನು ಮುಚ್ಚಿಕೊಳ್ಳಿರಿ, ಗುಡ್ಡಗಳೇ, ನಮ್ಮ ಮೇಲೆ ಬೀಳಿರಿ ಎಂದು ಕೂಗಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು