Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 20:5 - ಕನ್ನಡ ಸತ್ಯವೇದವು J.V. (BSI)

5 ಆಗ [ನನ್ನ ಜನರು] ತಾವು ನಿರೀಕ್ಷಿಸಿಕೊಂಡಿದ್ದ ಕೂಷಿನ ನಿವಿುತ್ತವಾಗಿಯೂ ಕೊಚ್ಚಿಕೊಂಡಿದ್ದ ಐಗುಪ್ತದ ವಿಷಯವಾಗಿಯೂ ಬೆಚ್ಚಿಬೆರಗಾಗಿ ನಾಚಿಕೆಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ನನ್ನ ಜನರು ತಾವು ನಿರೀಕ್ಷಿಸಿಕೊಂಡಿದ್ದ ಕೂಷಿನ ನಿಮಿತ್ತವಾಗಿಯೂ, ಕೊಚ್ಚಿಕೊಂಡಿದ್ದ ಐಗುಪ್ತದ ವಿಷಯವಾಗಿಯೂ ಬೆಚ್ಚಿಬೆರಗಾಗಿ ನಾಚಿಕೆಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸುಡಾನನ್ನು ನೆಚ್ಚಿಕೊಂಡಿದ್ದವರು ಮತ್ತು ಈಜಿಪ್ಟನ್ನು ಕುರಿತು ಕೊಚ್ಚಿಕೊಳ್ಳುತ್ತಿದ್ದವರು ನಾಚಿಕೆಪಟ್ಟು ನಿರಾಶೆಗೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಜನರು ಇಥಿಯೋಪ್ಯದ ಕಡೆಗೆ ಸಹಾಯಕ್ಕಾಗಿ ನೋಡುವರು. ಅವರು ಕಂಗೆಟ್ಟು ಹೋಗುವರು. ಈಜಿಪ್ಟಿನ ಮಹಿಮೆಯನ್ನು ಗಮನಿಸಿದವರು ಈಗ ನಾಚಿಕೆಯಲ್ಲಿ ಬೀಳುವರು” ಎನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ನನ್ನ ಜನರು ಅವನು ನಿರೀಕ್ಷಿಸಿಕೊಂಡಿದ್ದ ಕೂಷಿನ ನಿಮಿತ್ತವಾಗಿಯೂ, ಕೊಚ್ಚಿಕೊಳ್ಳುತ್ತಿದ್ದ ಈಜಿಪ್ಟಿನ ವಿಷಯವಾಗಿಯೂ, ನಿರಾಶರಾಗಿ ನಾಚಿಕೆಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 20:5
17 ತಿಳಿವುಗಳ ಹೋಲಿಕೆ  

ಸಹಾಯವನ್ನೂ ಪ್ರಯೋಜನವನ್ನೂ ಮಾಡಲಾರದೆ ನಾಚಿಕೆಯನ್ನೂ ಅವಮಾನವನ್ನೂ ಉಂಟುಮಾಡುವ ವ್ಯರ್ಥವಾದ ಈ ಜನಾಂಗದ ವಿಷಯವಾಗಿ ಎಲ್ಲರೂ ಲಜ್ಜೆಪಡುವರು.


ಆದಕಾರಣ ಫರೋಹನ ಆಶ್ರಯದಿಂದ ನಿಮಗೆ ನಾಚಿಕೆ, ಐಗುಪ್ತವನ್ನು ಮರೆಹೊಗುವದರಿಂದ ಅವಮಾನ.


ಆದಕಾರಣ ಮನುಷ್ಯಮಾತ್ರದವರ ವಿಷಯದಲ್ಲಿ ಯಾರೂ ಹಿಗ್ಗದಿರಲಿ. ಯಾಕಂದರೆ ಸಮಸ್ತವೂ ನಿಮ್ಮದು;


ಯೆಹೋವನು ಹೀಗನ್ನುತ್ತಾನೆ - ಮಾನವಮಾತ್ರದವರಲ್ಲಿ ಭರವಸವಿಟ್ಟು ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ತನು.


ಜಜ್ಜಿದ ದಂಟಿಗೆ ಸಮಾನವಾಗಿರುವ ಐಗುಪ್ತದಲ್ಲಿ ಭರವಸವಿಟ್ಟಿರುತ್ತೀಯಷ್ಟೆ. ಒಬ್ಬನು ಅಂಥ ದಂಟಿನ ಮೇಲೆ ಕೈಯೂರಿಕೊಳ್ಳುವದಾದರೆ ಅದು ಅವನ ಕೈಯನ್ನು ತಿವಿದು ಒಳಗೆ ಹೋಗುತ್ತದಲ್ಲವೇ! ಐಗುಪ್ತದ ಅರಸನಾದ ಫರೋಹನಲ್ಲಿ ಭರವಸವಿಟ್ಟವರಿಗೆ ಅದೇ ಗತಿಯಾಗುವದು.


ಜಜ್ಜಿದ ದಂಟಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತೀಯಷ್ಟೆ. ಒಬ್ಬನು ಅಂಥ ಕೋಲನ್ನು ಊರಿಕೊಳ್ಳುವದಾದರೆ ಅದು ಅವನ ಕೈಯನ್ನು ತಿವಿದು ಒಳಕ್ಕೆ ಹೋಗುತ್ತದೆ! ಐಗುಪ್ತದ ಅರಸನಾದ ಫರೋಹನಲ್ಲಿ ಭರವಸವಿಟ್ಟವರಿಗೆ ಅದೇ ಗತಿಯಾಗುವದು.


ಐಗುಪ್ತದ ಸಹಾಯವು ವ್ಯರ್ಥವೇ ವ್ಯರ್ಥ; ಆದದರಿಂದ ನಾನು ಅದಕ್ಕೆ ಸುಮ್ಮನೆ ಬಿದ್ದಿರುವ ಜಂಬದ ಮೃಗವೆಂದು ಹೆಸರಿಟ್ಟಿದ್ದೇನೆ.


ಉಸಿರು ಮೂಗಿನಲ್ಲಿರುವ ತನಕ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಯಾವ ಗಣನೆಗೆ ಬಂದಾನು?


ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸಪಡುತ್ತಾರೆ; ಆದರೆ ಇಸ್ರಾಯೇಲ್ಯರ ಸದಮಲಸ್ವಾವಿುಯ ಕಡೆಗೆ ದೃಷ್ಟಿಯಿಡುವದಿಲ್ಲ, ಯೆಹೋವನನ್ನು ಆಶ್ರಯಿಸುವದಿಲ್ಲ;


ಇದೂ ನಿನಗೆ ಅಸಾಧ್ಯವಾಗುವದಾದರೆ ನನ್ನ ಒಡೆಯನ ಸೇನಾಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವದು ಹೇಗೆ? ರಥಾಶ್ವಬಲಗಳಿಗಾಗಿ ಐಗುಪ್ತ್ಯರನ್ನು ನಂಬಿರುತ್ತೀಯೆಂದು ಕಾಣುತ್ತದೆ.


ಅಷ್ಟರಲ್ಲಿ ಕೂಷಿನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಹೊರಟಿದ್ದಾನೆಂಬ ಸುದ್ದಿಯನ್ನು ಅಶ್ಶೂರದ ಅರಸನು ಕೇಳಿ -


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ನೋ ಪಟ್ಟಣದಲ್ಲಿನ ಆಮೋನ್ ದೇವತೆ, ಫರೋಹ, ಐಗುಪ್ತ, ಐಗುಪ್ತದ ದೇವತೆಗಳು, ಅಲ್ಲಿನ ಅರಸರು, ಅಂತು ಫರೋಹನನ್ನೂ, ಅವನಲ್ಲಿ ನಂಬಿಕೆಯಿಟ್ಟವರನ್ನೂ ದಂಡಿಸಿ


ಐಗುಪ್ತವು ಇನ್ನು ಇಸ್ರಾಯೇಲ್ ವಂಶದವರ ಭರವಸವಾಗದು; ಮತ್ತು ಅದರ ಕಡೆಗೆ ಕಣ್ಣೆತ್ತುವ ದೇವದ್ರೋಹದ ನೆನಪು ಇಸ್ರಾಯೇಲ್ಯರಲ್ಲಿ ಐಗುಪ್ತದಿಂದ ಇನ್ನು ಹುಟ್ಟದು. ನಾನೇ ಯೆಹೋವನು ಎಂದು ಅವರಿಗೆ ಮನದಟ್ಟಾಗುವದು.


ಕೂಷ್ ಮತ್ತು ಐಗುಪ್ತವು ಅದರ ಅಪಾರಬಲ; ಪೂಟರೂ ಲೂಬ್ಯರೂ ಅದಕ್ಕೆ ಸಹಾಯಕರು.


ಕೂಷಿನವರೇ, ನೀವು ಸಹ ನನ್ನ ಖಡ್ಗದಿಂದ ಹತರಾಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು