ಯೆಶಾಯ 20:6 - ಕನ್ನಡ ಸತ್ಯವೇದವು J.V. (BSI)6 ಆ ದಿನದಲ್ಲಿ ಈ ಕರಾವಳಿಯಲ್ಲಿ ವಾಸಿಸುವವರು - ಹಾ, ಅಶ್ಶೂರದ ಅರಸನಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೆವೋ ಅವರಿಗೇ ಈ ಗತಿ ಬಂತಲ್ಲಾ; ನಮ್ಮಂಥವರಿಗೆ ಹೇಗೆ ರಕ್ಷಣೆಯಾದೀತು ಎಂದು ಅಂದುಕೊಳ್ಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆ ದಿನದಲ್ಲಿ ಈ ತೀರದಲ್ಲಿ ವಾಸಿಸುವವರು ಹೇಳುವುದೇನೆಂದರೆ, “ಇಗೋ, ಅಶ್ಶೂರದ ಅರಸರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೆವೋ ಅವರಿಗೆ ಈ ಗತಿ ಬಂತಲ್ಲಾ ಮತ್ತು ನಾವು ತಪ್ಪಿಸಿಕೊಳ್ಳುವುದು ಹೇಗೆ?” ಎಂದು ಅಂದುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆ ದಿನದಂದು (ಫಿಲಿಷ್ಟಿಯದ) ಕರಾವಳಿಯಲ್ಲಿ ವಾಸಿಸುವರು. ‘ಅಯ್ಯೋ ಅಸ್ಸೀರಿಯರ ಅರಸನಿಂದ ನಾವು ಬಿಡುಗಡೆಯಾಗಬೇಕೆಂದು ಯಾರ ಆಶ್ರಯವನ್ನು ನಿರೀಕ್ಷಿಸಿಕೊಂಡಿದ್ದೇವೋ ಅವರಿಗೇ ಈ ಗತಿ ಬಂತಲ್ಲಾ; ಇನ್ನು ನಮ್ಮಂಥವರು ಉದ್ಧಾರವಾಗುವುದು ಹೇಗೆ?’ ಎಂದುಕೊಳ್ಳುವರು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಸಮುದ್ರ ತೀರದಲ್ಲಿ ವಾಸಿಸುವವರು ಹೀಗೆ ಹೇಳುವರು: “ಆ ದೇಶದವರು ನಮಗೆ ಸಹಾಯ ಮಾಡುವರೆಂದು ಅವರನ್ನು ನಂಬಿದೆವು. ಅಶ್ಶೂರದ ಅರಸನಿಂದ ನಮ್ಮನ್ನು ಕಾಪಾಡುವಂತೆ ನಾವು ಅವರ ಬಳಿಗೆ ಓಡಿಹೋದೆವು. ಆದರೆ ಈಗ ನೋಡಿ, ಆ ದೇಶದವರು ಸೋತು ಹೋಗಿ ವೈರಿವಶವಾಗಿದ್ದಾರೆ. ಈಗ ನಾವು ಪಾರಾಗಲು ಹೇಗೆ ಸಾಧ್ಯ?” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆ ದಿನದಲ್ಲಿ ಕರಾವಳಿಯ ನಿವಾಸಿಗಳು, ‘ಇಗೋ, ಅಸ್ಸೀರಿಯದ ಅರಸರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ, ನಿರೀಕ್ಷಿಸಿದ್ದೆವೋ ಅವರಿಗೆ ಈ ಗತಿ ಬಂತಲ್ಲಾ ಮತ್ತು ನಾವು ತಪ್ಪಿಸಿಕೊಳ್ಳುವುದು ಹೇಗೆ?’ ಎಂದುಕೊಳ್ಳುವರು.” ಅಧ್ಯಾಯವನ್ನು ನೋಡಿ |