Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 21:5 - ಕನ್ನಡ ಸತ್ಯವೇದವು J.V. (BSI)

5 ಔತಣಕ್ಕೆ ಸಿದ್ಧಪಡಿಸಿಕೊಂಡು ಚಾಪೆಗಳನ್ನು ಹಾಸಿಕೊಂಡು ಉಂಡು ಕುಡಿಯುತ್ತಿದ್ದಾರಲ್ಲಾ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಬಳಿಯಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಔತಣಕ್ಕೆ ಸಿದ್ಧಪಡಿಸಿಕೊಂಡು, ಚಾಪೆಗಳನ್ನು ಹಾಸಿಕೊಂಡು ತಿಂದು, ಕುಡಿಯುತ್ತಾರೆ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಹಚ್ಚಿ ಸಿದ್ಧವಾಗಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಔತಣ ಸಿದ್ಧವಾಗಿದೆ, ಚಾಪೆ ಹಾಸಿದ್ದಾರೆ. ಅತಿಥಿಗಳು ಭೋಜನ ಮಾಡುತ್ತಾ ಕುಡಿಯುತ್ತಾ ಇದ್ದಾರೆ. ಇದೋ, ಇದ್ದಕ್ಕಿದ್ದಂತೆ ಕೂಗೊಂದು ಕೇಳಿಬರುತ್ತಿದೆ : “ಪ್ರಭುಗಳೇ, ಎದ್ದೇಳಿ, ಗುರಾಣಿಗಳನ್ನು ಅಣಿಗೊಳಿಸಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಜನರಾದರೋ, “ಊಟ ಬಡಿಸಿರಿ! ತಿನ್ನೋಣ, ಕುಡಿಯೋಣ” ಎಂದು ಹೇಳುತ್ತಿದ್ದಾರೆ. ಅದೇ ಸಮಯದಲ್ಲಿ ಸೈನಿಕರು, “ಕಾವಲುಗಾರರನ್ನು ಇರಿಸಿರಿ, ಸೇನಾಪತಿಗಳೇ ಎದ್ದೇಳಿರಿ, ನಿಮ್ಮ ಗುರಾಣಿಗಳನ್ನು ಉಜ್ಜಿ ನಯಗೊಳಿಸಿರಿ” ಎಂದು ಹೇಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಔತಣ ಸಿದ್ಧವಾಗಿದೆ. ಬುರುಜಿನ ಮೇಲೆ ಕಾವಲಿರು. ಉಣ್ಣು, ಕುಡಿ, ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಹಚ್ಚಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 21:5
12 ತಿಳಿವುಗಳ ಹೋಲಿಕೆ  

ನಾನು ಅದರ ಪ್ರಧಾನರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಬಲಿಷ್ಠರು, ಇವರೆಲ್ಲರಿಗೂ ತಲೆಗೇರ ಕುಡಿಸುವೆನು; ಅವರು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವರು ಎಂದು ಸೇನಾಧೀಶ್ವರನಾದ ಯೆಹೋವನಾಮಧೇಯದ ರಾಜಾಧಿರಾಜನು ಅನ್ನುತ್ತಾನೆ.


ಅವರು ಉರಿಗೊಂಡಿರುವಾಗ ನಾನು ಅವರಿಗೆ ಔತಣವನ್ನು ಸಿದ್ಧಪಡಿಸಿ ಅವರು ಅದರಿಂದ ಸಂಭ್ರಮಪಟ್ಟು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವಂತೆ ತಲೆಗೇರ ಕುಡಿಸುವೆನು. ಇದು ಯೆಹೋವನ ನುಡಿ.


ನಾನು ಎಫೆಸದಲ್ಲಿ ಮೃಗಗಳೊಂದಿಗೆ ಯುದ್ಧಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವದಿಲ್ಲವಾದರೆ - ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.


ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರಿಸಿದ್ದಾನೆ; ಆ ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತೀಕಾರವೇ; [ಮೇದ್ಯರೇ,] ಬಾಣಗಳನ್ನು ಮಸೆಯಿರಿ, ಸನ್ನದ್ಧರಾಗಿರಿ!


[ಶತ್ರುಗಳು] ಬಂದು ಪ್ರಭುಗಳ ಪುರದ್ವಾರಗಳಲ್ಲಿ ನುಗ್ಗುವಂತೆ ಬೋಳುಬೆಟ್ಟದ ಮೇಲೆ ಧ್ವಜವೆತ್ತಿರಿ, ಕೂಗಿ ಅವರನ್ನು ಕರೆಯಿರಿ, ಕೈಸನ್ನೆಮಾಡಿರಿ.


ಗಿಲ್ಬೋವಗುಡ್ಡಗಳೇ, ನಿಮ್ಮ ಮೇಲೆ ಮಂಜೂ ಮಳೆಯೂ ನೈವೇದ್ಯಕ್ಕಾಗಿ ಫಲಿಸುವ ಹೊಲಗಳೂ ಇಲ್ಲದೆ ಹೋಗಲಿ; ಅಲ್ಲಿ ಪರಾಕ್ರಮಶಾಲಿಗಳ ಗುರಾಣಿಗಳು ಬಿದ್ದಿರುತ್ತವೆ. ಸೌಲನ ಗುರಾಣಿಯೂ ಅಭಿಷಿಕ್ತನಲ್ಲದವನ ಗುರಾಣಿಯಂತೆ ಬಿದ್ದಿದೆ.


ಗುರಾಣಿಖೇಡ್ಯಗಳನ್ನು ಸನ್ನಾಹಮಾಡಿಕೊಂಡು ಯುದ್ಧಕ್ಕೆ ಹೊರಡಿರಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು