Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 22:10 - ಕನ್ನಡ ಸತ್ಯವೇದವು J.V. (BSI)

10 ಯೆರೂಸಲೇವಿುನ ಮನೆಗಳನ್ನು ಲೆಕ್ಕಿಸಿ ಪೌಳಿಗೋಡೆಯನ್ನು ಭದ್ರಪಡಿಸುವದಕ್ಕೆ ಮನೆಗಳನ್ನು ಕೆಡವಿಬಿಟ್ಟಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆರೂಸಲೇಮಿನ ಮನೆಗಳನ್ನು ಲೆಕ್ಕಿಸಿ, ಪೌಳಿಗೋಡೆಯನ್ನು ಭದ್ರಪಡಿಸುವುದಕ್ಕೆ ಮನೆಗಳನ್ನು ಒಡೆದು ಹಾಕಿಬಿಟ್ಟಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಜೆರುಸಲೇಮಿನ ಮನೆಗಳನ್ನು ಪರೀಕ್ಷಿಸಿದಿರಿ. ಕೋಟೆಯ ಗೋಡೆಗಳನ್ನು ಭದ್ರಪಡಿಸಲು ಆ ಮನೆಗಳನ್ನು ಕೆಡವಿಬಿಟ್ಟಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೆರೂಸಲೇಮಿನ ಮನೆಗಳನ್ನು ಲೆಕ್ಕ ಮಾಡಿ ಪೌಳಿಗೋಡೆಯನ್ನು ಭದ್ರಪಡಿಸುವುದಕ್ಕೆ ನೀವು ಮನೆಗಳನ್ನು ಒಡೆದುಹಾಕುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 22:10
7 ತಿಳಿವುಗಳ ಹೋಲಿಕೆ  

ದಾವೀದನ ಕೋಟೆಯ ಒಡಕುಗಳು ಬಹಳವೆಂದು ನೋಡಿದಿರಿ; ಕೆಳಗಿನ ಕೊಳಕ್ಕೆ ನೀರನ್ನು ಹಾಯಿಸಿದಿರಿ.


ಎರಡು ಗೋಡೆಗಳ ನಡುವೆ ಹಳೆಯ ಕೊಳದ ನೀರಿಗಾಗಿ ತೊಟ್ಟಿಯನ್ನು ಮಾಡಿದಿರಿ; ಆದರೆ ಇದನ್ನೆಲ್ಲಾ ನಡಿಸಿದಾತನ ಕಡೆಗೆ ನೀವು ದೃಷ್ಟಿಯಿಡಲಿಲ್ಲ, ಪುರಾತನ ಕಾಲದಲ್ಲಿ ಸಂಕಲ್ಪಿಸಿದಾತನನ್ನು ನೀವು ಲಕ್ಷಿಸಲಿಲ್ಲ.


[ಇಸ್ರಾಯೇಲ್ಯರೇ,] ನಿಮ್ಮನ್ನು ಹುಟ್ಟಿಸಿದ ತಂದೆಯಂತಿರುವ ಶರಣನನ್ನು ನೀವು ನೆನಸಲಿಲ್ಲ; ಹೆತ್ತ ತಾಯಿಯಂತಿರುವ ದೇವರನ್ನು ಮರೆತುಬಿಟ್ಟಿರಿ.


ಅವನು ಈ ಕೋಟೆಗಳನ್ನು ಬಲಪಡಿಸಿ ನಾಯಕರ ವಶಕ್ಕೆ ಕೊಟ್ಟು ಪ್ರತಿಯೊಂದರಲ್ಲಿ ಆಹಾರಪದಾರ್ಥ ಎಣ್ಣೆ ದ್ರಾಕ್ಷಾರಸ ಇವುಗಳನ್ನೂ ಗುರಾಣಿಬರ್ಜಿಗಳನ್ನೂ ಸಂಗ್ರಹಿಸಿಟ್ಟನು;


ಆಗ ಯೆಹೋವನು ಯೆಶಾಯನಿಗೆ ಹೀಗೆ ಹೇಳಿದನು - ಶೆಯಾರ್ ಯಾಶೂಬನೆಂಬ ನಿನ್ನ ಮಗನನ್ನು ಕರೆದುಕೊಂಡು ಹೋಗಿ ಮಡಿವಾಳರ ಹೊಲದ ಮೇಲೆ ಹೋಗುವ ರಾಜಮಾರ್ಗದಲ್ಲಿ ಮೇಲಿನ ಕೆರೆಯ ಕಾಲಿವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಂಡು


ದಿಬ್ಬಗಳಿಗೂ ಕತ್ತಿಗಳಿಗೂ [ಅಡ್ಡವಾಗಿ ಗೋಡೆಯನ್ನು ಕಟ್ಟಲು] ಕೆಡವಿರುವ ಈ ಊರಿನವರ ಮನೆಗಳ ವಿಷಯವಾಗಿಯೂ ಯೆಹೂದದ ಅರಸರ ಉಪ್ಪರಿಗೆಗಳ ವಿಷಯವಾಗಿಯೂ ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ -


ಅಮ್ಮೋನ್ಯರ ರಬ್ಬಾ ಎಂಬ ಪಟ್ಟಣಕ್ಕೂ ಯೆಹೂದದೊಳಗೆ ಕೋಟೆಕೊತ್ತಲಗಳಿಂದ ಕೂಡಿದ ಯೆರೂಸಲೇವಿುಗೂ ಖಡ್ಗವು ಬರುವದಕ್ಕೆ ದಾರಿಗಳನ್ನು ಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು