Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 22:13 - ಕನ್ನಡ ಸತ್ಯವೇದವು J.V. (BSI)

13 ಆದರೆ ಇಗೋ, ಉಲ್ಲಾಸ, ಹರ್ಷ, ದನಕೊಯ್ಯುವದು, ಕುರಿಕಡಿಯುವದು, ಮಾಂಸತಿನ್ನುವದು, ದ್ರಾಕ್ಷಾರಸ ಕುಡಿಯುವದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯುವದು [ಇವೇ ನಿಮ್ಮ ಕಾರ್ಯ].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ಇಗೋ, ಉಲ್ಲಾಸ, ಹರ್ಷ, ಕುರಿದನಗಳನ್ನು ಕಡಿಯುವುದು, ಮಾಂಸ ತಿನ್ನುವುದು, ದ್ರಾಕ್ಷಾರಸ ಕುಡಿಯುವುದು, ನಾಳೆ ಸಾಯುತ್ತೇವೆಂದು ಇಂದು ತಿಂದು ಕುಡಿಯುವುದೇ ನಿಮ್ಮ ಕಾರ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆದರೆ ನೀವು ಹರ್ಷಾನಂದಗೊಂಡಿರಿ. ದನಕರುಗಳನ್ನು ಕೊಯ್ದಿರಿ, ಮಾಂಸವನ್ನು ಭುಜಿಸಿ ಮದ್ಯಪಾನ ಮಾಡಿದಿರಿ. “ಇಂದೇ ತಿಂದು ಕುಡಿಯೋಣ, ನಾಳೆ ಬರುತ್ತದೆ ಮರಣ,” ಎಂದು ಹೇಳಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಇಗೋ, ಈಗ ಜನರು ಸಂತೋಷಪಡುತ್ತಿದ್ದಾರೆ. ಅವರು ಹರ್ಷಿಸುತ್ತಾ: “ದನಕುರಿಗಳನ್ನು ಕೊಯ್ಯಿರಿ, ನಾವು ಹಬ್ಬ ಆಚರಿಸೋಣ, ಊಟಮಾಡಿ ದ್ರಾಕ್ಷಾರಸ ಕುಡಿಯೋಣ, ತಿಂದು, ಕುಡಿದು ಸಂತೋಷವಾಗಿರೋಣ. ಯಾಕೆಂದರೆ ನಾಳೆ ನಾವು ಸಾಯುವೆವು” ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ಉತ್ಸಾಹವು, ಸಂತೋಷವು, ದನ ಕೊಳ್ಳುವುದು, ಕುರಿ ಕಡಿಯುವುದು, ಮಾಂಸವನ್ನು ತಿನ್ನುವುದು, ದ್ರಾಕ್ಷಾರಸ ಕುಡಿಯುವುದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯುವುದೇ ನಿಮ್ಮ ಕಾರ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 22:13
16 ತಿಳಿವುಗಳ ಹೋಲಿಕೆ  

ಬನ್ನಿರಿ, ನಾನು ದ್ರಾಕ್ಷಾರಸವನ್ನು ತರಿಸುವೆನು, ಬೇಕಾದಷ್ಟು ಮದ್ಯವನ್ನು ಕುಡಿಯುವ; ನಾಳೆಯೂ ಈ ದಿನದಂತೆ ಕೇವಲ ಅತ್ಯಂತ ವಿಶೇಷದಿನವಾಗಿರುವದು [ಎಂದು ಹರಟಿಕೊಳ್ಳುವರು].


ನಾನು ಎಫೆಸದಲ್ಲಿ ಮೃಗಗಳೊಂದಿಗೆ ಯುದ್ಧಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವದಿಲ್ಲವಾದರೆ - ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.


ಭೂಲೋಕದಲ್ಲಿ ನೀವು ಅತಿಭೋಗಿಗಳಾಗಿ ಬದುಕಿ ಮನಸ್ಸು ಬಂದಂತೆ ನಡೆದುಕೊಂಡಿದ್ದೀರಿ. ವಧೆಯ ದಿವಸ ಬಂದರೂ ನಿಮ್ಮನ್ನು ಕೊಬ್ಬಿಸಿಕೊಂಡಿದ್ದೀರಿ.


ಅಯ್ಯೋ, ಸುರಾಪಾನದಲ್ಲಿ ಶೂರರೂ ಮದ್ಯವಿುಶ್ರಣದಲ್ಲಿ ಸಾಹಸಿಗಳೂ ಆಗಿ


ಕಿನ್ನರಿ, ವೀಣೆ, ದಮ್ಮಡಿ, ಕೊಳಲು, ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು; ಯೆಹೋವನ ಕೆಲಸವನ್ನೋ ಅವರು ಲಕ್ಷಿಸರು, ಆತನ ಹಸ್ತಕಾರ್ಯವನ್ನು ಆಲೋಚಿಸರು.


ಅಯ್ಯೋ, ಮದ್ಯದ ಗೀಳಿನಿಂದಲೇ ಮುಂಜಾನೆ ಎದ್ದು ಸಂಜೆಯಾದ ಮೇಲೆಯೂ ದ್ರಾಕ್ಷಾರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರ ಪಾಡು ಏನು ಹೇಳಲಿ!


ದುಷ್ಟರನ್ನು ಕರುಣಿಸಿದರೂ ಅವರು ಧರ್ಮಜ್ಞಾನವನ್ನು ಪಡೆಯರು; ಯೆಹೋವನ ಮಹಿಮೆಯನ್ನು ಲಕ್ಷಿಸದೆ ಯಥಾರ್ಥವಂತರ ದೇಶದಲ್ಲಿಯೂ ಅನ್ಯಾಯವನ್ನಾಚರಿಸುವರು.


ಅಯ್ಯೋ, ಅರೀಯೇಲೇ, ಅರೀಯೇಲೇ, ದಾವೀದನು ಸೈನ್ಯಸಮೇತನಾಗಿ ವಾಸಿಸಿದ ಪಟ್ಟಣವೇ, ನಿನ್ನ ಗತಿಯನ್ನು ಏನು ಹೇಳಲಿ! ಈ ವರುಷಕ್ಕೆ ಮುಂದಿನ ವರುಷವನ್ನು ಸೇರಿಸಿರಿ; ಹಬ್ಬಗಳು ಸುತ್ತಿಬರಲಿ; ಆಮೇಲೆ ನಾನು ಅರೀಯೇಲನ್ನು ಬಾಧಿಸುವೆನು; ಅರಿಚಾಟ ಕಿರಿಚಾಟವಾಗುವದು;


ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ, ನಾನು ವಿಧವೆಯಾಗಿ ಕೂತುಕೊಳ್ಳುವದಿಲ್ಲ, ಪುತ್ರಶೋಕವನ್ನು ಅನುಭವಿಸುವದಿಲ್ಲ ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು -


ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವದಿಲ್ಲ; ನಮ್ಮ ಆತ್ಮವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವದೇಕೆ ಅಂದುಕೊಳ್ಳುತ್ತಾರೆ. ಇಗೋ, ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ನಿತ್ಯದ ಕೆಲಸವನ್ನು ನಡಿಸಿ ನಿಮ್ಮ ಆಳುಗಳನ್ನು ದುಡಿತಕ್ಕೆಳೆಯುತ್ತೀರಿ.


ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಹೆಮ್ಮೆಪಡುವದು, ಹೊಟ್ಟೆತುಂಬಿಸಿಕೊಳ್ಳುವದು, ಸ್ವಸುಖದಲ್ಲಿ ಮುಳುಗಿರುವದು, ಇವು ಆಕೆಯಲ್ಲಿಯೂ ಆಕೆಯ ಕುಮಾರ್ತೆಯರಲ್ಲಿಯೂ ಇದ್ದವು. ಅಲ್ಲದೆ ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ.


ಇಸ್ರಾಯೇಲೇ, ಜನಾಂಗಗಳಂತೆ ವಿುತಿಮೀರಿ ಉಲ್ಲಾಸಿಸಬೇಡ; ನೀನು ನಿನ್ನ ದೇವರನ್ನು ಬಿಟ್ಟು ಸೂಳೆತನ ನಡಿಸಿದ್ದೀ; ಎಲ್ಲಾ ಕಣಗಳಲ್ಲಿನ ಫಲವನ್ನು ಅದರ ಪ್ರತಿಫಲವನ್ನಾಗಿ ಆಶಿಸಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು