ಯೆಶಾಯ 22:14 - ಕನ್ನಡ ಸತ್ಯವೇದವು J.V. (BSI)14 ಹೀಗಿರಲು ಸೇನಾಧೀಶ್ವರನಾದ ಯೆಹೋವನು ನನ್ನ ಕಿವಿಗೆ ಗೋಚರಪಡಿಸಿದ್ದೇನಂದರೆ - ನೀವು ಸಾಯುವ ತನಕ ಈ ಅಧರ್ಮಕ್ಕೆ ಪ್ರಾಯಶ್ಚಿತ್ತವು ಇಲ್ಲವೇ ಇಲ್ಲ ಎಂದು ಸೇನಾಧೀಶ್ವರನಾಗಿರುವ ಯೆಹೋವನೆಂಬ ಕರ್ತನಾದ ನಾನು ನುಡಿದಿದ್ದೇನೆ ಎಂಬದೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಹೀಗಿರಲು, ಸೇನಾಧೀಶ್ವರನಾದ ಯೆಹೋವನು ನನ್ನ ಕಿವಿಗಳಲ್ಲಿ ಪ್ರಕಟಿಸಿದ್ದೇನೆಂದರೆ, “ನೀವು ಸಾಯುವ ತನಕ ಈ ಅಧರ್ಮಕ್ಕೆ ಪ್ರಾಯಶ್ಚಿತ್ತವು ಇಲ್ಲವೇ ಇಲ್ಲ ಎಂದು ಸೇನಾಧೀಶ್ವರನಾಗಿರುವ ಯೆಹೋವನೆಂಬ ಕರ್ತನಾದ ನಾನು ನುಡಿದಿದ್ದೇನೆ” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇಂತಿರಲು, ಸೇನಾಧೀಶ್ವರ ಸರ್ವೇಶ್ವರ ನನ್ನ ಕಿವಿಯಲ್ಲಿ ಉಸುರಿದ್ದೇನೆಂದರೆ : “ಇವರು ಸಾಯುವತನಕ ಇವರಿಗೆ ಪಾಪಕ್ಷಮೆ ದೊರಕುವುದಿಲ್ಲ. ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯಾದ ನಾನೇ ಇದನ್ನು ನುಡಿದಿದ್ದೇನೆ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಸರ್ವಶಕ್ತನಾದ ಯೆಹೋವನು ನನಗೆ ತಿಳಿಸಿದ ಈ ಮಾತುಗಳನ್ನು ಕಿವಿಯಾರೆ ಕೇಳಿದೆನು: “ನೀವು ಕೆಟ್ಟಕಾರ್ಯಗಳನ್ನು ನಡೆಸಿ ಅಪರಾಧಿಗಳಾಗಿರುವಿರಿ. ನಿಮ್ಮ ದುಷ್ಟತ್ವವು ಕ್ಷಮಿಸಲ್ಪಡುವ ಮುಂಚೆ ನೀವು ಸಾಯುವಿರಿ ಎಂದು ಖಂಡಿತವಾಗಿ ಹೇಳುತ್ತೇನೆ” ಇದು ನನ್ನ ಒಡೆಯನಾದ ಸರ್ವಶಕ್ತನ ನುಡಿಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರು ನನ್ನ ಕಿವಿಗಳಲ್ಲಿ ಪ್ರಕಟ ಮಾಡಿದ್ದು ಏನೆಂದರೆ: “ನಿಶ್ಚಯವಾಗಿ ಈ ದುಷ್ಕೃತ್ಯಗಳನ್ನು ನೀವು ಸಾಯುವ ತನಕ ಮನ್ನಿಸುವುದೇ ಇಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳಿದ್ದಾರೆ. ಅಧ್ಯಾಯವನ್ನು ನೋಡಿ |