Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 22:22 - ಕನ್ನಡ ಸತ್ಯವೇದವು J.V. (BSI)

22 ಅವನು ದಾವೀದನ ಮನೆಯ ಬೀಗದ ಕೈಯನ್ನು ತನ್ನ ಹೆಗಲ ಮೇಲೆ ವಹಿಸಿಕೊಳ್ಳುವಂತೆ ಮಾಡುವೆನು; ಅವನು ತೆರೆದರೆ ಯಾರೂ ಮುಚ್ಚರು, ಮುಚ್ಚಿದರೆ ಯಾರೂ ತೆರೆಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಾನು ದಾವೀದನ ಮನೆಯ ಬೀಗದ ಕೈಯನ್ನು ನಿನ್ನ ಹೊಣೆಗಾರಿಕೆಗೆ ಕೊಡುವೆನು; ಅವನು ತೆರೆದರೆ ಯಾರೂ ಮುಚ್ಚರು, ಮುಚ್ಚಿದರೆ ಯಾರೂ ತೆರೆಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ದಾವೀದ ಮನೆತನದ ಅಧಿಕಾರವನ್ನು ಅವನ ಹೆಗಲ ಮೇಲೆ ಹೊರಿಸುವೆನು. ಅವನು ತೆರೆದ ಬಾಗಿಲನ್ನು ಯಾರೂ ಮುಚ್ಚರು; ಅವನು ಮುಚ್ಚಿದ ಬಾಗಿಲನ್ನು ಯಾರೂ ತೆರೆಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ದಾವೀದನ ಮನೆಯ ಬೀಗದ ಕೈಯನ್ನು ಅವನ ಕುತ್ತಿಗೆಯಲ್ಲಿರಿಸುವೆನು. ಅವನು ಬಾಗಿಲನ್ನು ತೆರೆದರೆ ಅದು ತೆರೆದೇ ಇರುವದು. ಅದನ್ನು ಯಾರೂ ಮುಚ್ಚಲಾರರು. ಅವನು ಬಾಗಿಲನ್ನು ಮುಚ್ಚಿದರೆ ಅದು ಮುಚ್ಚಿಯೇ ಇರುವದು. ಅದನ್ನು ತೆರೆಯಲು ಯಾರಿಂದಲೂ ಆಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ದಾವೀದನ ಮನೆಗೆ ಬೀಗದ ಕೈಯನ್ನು ಅವನ ಹೆಗಲ ಮೇಲೆ ನಾನು ಹಾಕುವೆನು. ಅವನು ತೆರೆದರೆ ಯಾರೂ ಮುಚ್ಚರು, ಅವನು ಮುಚ್ಚಿದರೆ ಯಾರೂ ತೆರೆಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 22:22
9 ತಿಳಿವುಗಳ ಹೋಲಿಕೆ  

ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ - ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯುವವನೂ ಯಾರೂ ತೆರೆಯದಂತೆ ಮುಚ್ಚುವವನೂ ಆಗಿರುವಾತನು ಹೇಳುವದೇನಂದರೆ -


ಇಗೋ, ಯಾರೂ ಕಟ್ಟದಹಾಗೆ ಕೆಡವಿಬಿಡುವನು, ಯಾರೂ ಬಿಡಿಸದಂತೆ ಸೆರೆಹಾಕುವನು.


ಸತ್ತವನಾದೆನು, ಮತ್ತು ಇಗೋ ಯುಗಯುಗಾಂತರಗಳಲ್ಲಿಯೂ ಬದುಕುವವನಾಗಿದ್ದೇನೆ; ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಅವೆ.


ಅರಾಮ್ಯರು ಎಫ್ರಾಯೀಮ್ಯರನ್ನು ಹೊಂದಿಕೊಂಡಿದ್ದಾರೆಂಬ ಸುದ್ದಿಯು ಅರಮನೆಗೆ ಮುಟ್ಟಿದಾಗ ಅರಸನ ಮನವೂ ಪ್ರಜೆಯ ಮನವೂ ಗಾಳಿಯಿಂದ ವನವೃಕ್ಷಗಳು ಅಲ್ಲಾಡುವಂತೆ ನಡುಗಿದವು.


ಅದಕ್ಕೆ [ಯೆಶಾಯನು] ಹೀಗೆ ಹೇಳಿದನು - ದಾವೀದನ ಮನೆತನದವರೇ, ಕೇಳಿರಿ! ಮನುಷ್ಯರನ್ನು ಬೇಸರಗೊಳಿಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವರನ್ನೂ ಬೇಸರಗೊಳಿಸುವಿರಾ?


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವದು; ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರವಿುಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬವು ಅವನ ಹೆಸರು.


ಅದನ್ನು ಹೆಗಲ ಮೇಲೆ ಇಟ್ಟುಕೊಳ್ಳುತ್ತಿದ್ದೆನು, ಕಿರೀಟವನ್ನಾಗಿ ಧರಿಸುತ್ತಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು