ಯೆಶಾಯ 22:5 - ಕನ್ನಡ ಸತ್ಯವೇದವು J.V. (BSI)5 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನಿಂದ ದಿವ್ಯದರ್ಶನದ ತಗ್ಗಿಗೆ ಗಲಿಬಿಲಿಯ ದಿನ, ತುಳಿದಾಟದ ದಿನ, ಭ್ರಾಂತಿಯ ದಿನ, ಕೋಟೆಯು ಒಡೆದುಹೋಗಲು ಕೂಗು ಬೆಟ್ಟವನ್ನು ಮುಟ್ಟುವ ದಿನ ಬಂದಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನಿಂದ ದಿವ್ಯದರ್ಶನದ ಕಣಿವೆಗೆ ಗಲಿಬಿಲಿಯ ದಿನ, ತುಳಿದಾಟದ ದಿನ, ಭ್ರಾಂತಿಯ ದಿನ, ಕೋಟೆಯು ಒಡೆದು ಹೋಗಲು, ಕೂಗು ಬೆಟ್ಟವನ್ನು ಮುಟ್ಟುವ ದಿನ ಬಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಕಳುಹಿಸಿರುವ ದಿನವಿದು - ದಿವ್ಯದರ್ಶನದ ಕಣಿವೆಯ ದಿನ, ಗಲಿಬಿಲಿಯ ದಿನ, ತುಳಿದಾಟದ ದಿನ, ಭಯಭ್ರಾಂತಿಯ ದಿನ, ಕೋಟೆಕೊತ್ತಲಗಳನ್ನು ಹೊಡೆದುರುಳಿಸುವ ದಿನ. ಕೂಗಾಟವು ಬೆಟ್ಟದಲ್ಲಿ ಮಾರ್ದನಿಸುವ ದಿನ ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೆಹೋವನು ಒಂದು ವಿಶೇಷ ದಿನವನ್ನು ಆರಿಸಿರುತ್ತಾನೆ. ಆ ದಿನದಲ್ಲಿ ಗಲಭೆ ಮತ್ತು ಗಲಿಬಿಲಿಯು ಇರುವದು. ದಿವ್ಯದರ್ಶನದ ಕಣಿವೆಯಲ್ಲಿ ಜನರು ಒಬ್ಬರನ್ನೊಬ್ಬರು ತುಳಿದುಕೊಂಡು ಅವರ ಮೇಲೆಯೇ ನಡೆದುಕೊಂಡು ಹೋಗುವರು. ನಗರದ ಕೋಟೆಗೋಡೆಗಳು ಕೆಡವಲ್ಪಡುವವು. ಕಣಿವೆಯಲ್ಲಿ ವಾಸಿಸುವ ಜನರು ಬೆಟ್ಟದ ಮೇಲಿನ ನಗರದ ಜನರಿಗೆ ಚೀರಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಕರ್ತ ಆಗಿರುವವರೂ, ಸರ್ವಶಕ್ತರೂ ಆದ ಯೆಹೋವ ದೇವರು, ದರ್ಶನದ ತಗ್ಗಿನಲ್ಲಿ ಶ್ರಮೆಯ ತುಳಿದಾಟದ ಭಯಭ್ರಾಂತಿಯ ದಿನವನ್ನು ಇಟ್ಟಿದ್ದಾರೆ. ಅದು ಗೋಡೆಗಳು ಹೊಡೆದುರುಳಿಸುವ ದಿನವು. ಪರ್ವತಗಳಿಗೆ ಜನರು ಕೂಗಾಡುವ ದಿನವದು. ಅಧ್ಯಾಯವನ್ನು ನೋಡಿ |