Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 23:11 - ಕನ್ನಡ ಸತ್ಯವೇದವು J.V. (BSI)

11 ಯೆಹೋವನು ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ; ಕಾನಾನಿನ ದುರ್ಗಗಳನ್ನು ನಾಶಮಾಡಲು ಅದರ ವಿಷಯವಾಗಿ ಅಪ್ಪಣೆಕೊಟ್ಟಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ. ಕಾನಾನಿನ ದುರ್ಗಗಳನ್ನು ನಾಶಮಾಡಲು ಅದರ ವಿಷಯವಾಗಿ ಯೆಹೋವನು ಅಪ್ಪಣೆಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರ ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾರೆ. ಕಾನಾನಿನ ದುರ್ಗಗಳನ್ನು ನಾಶಮಾಡಲು ಅಪ್ಪಣೆಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನು ಸಮುದ್ರದ ಮೇಲೆ ತನ್ನ ಕೈಯನ್ನು ಚಾಚಿದ್ದಾನೆ. ಆತನು ತೂರಿಗೆ ವಿರುದ್ಧವಾಗಿ ಯುದ್ಧಮಾಡಲು ರಾಜ್ಯಗಳನ್ನು ಒಟ್ಟುಗೂಡಿಸುತ್ತಾನೆ. ಯೆಹೋವನು ಕಾನಾನಿಗೆ ತೂರಿನ ಆಶ್ರಯಸ್ಥಳಗಳನ್ನು ನಾಶಮಾಡಲು ಆಜ್ಞಾಪಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರು ಸಮುದ್ರದ ಮೇಲೆ ತನ್ನ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ. ಅವರು ವ್ಯಾಪಾರದ ಪಟ್ಟಣವನ್ನು ಕಾನಾನಿನ ದುರ್ಗಗಳನ್ನು ನಾಶಮಾಡಬೇಕೆಂದು ಆಜ್ಞಾಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 23:11
30 ತಿಳಿವುಗಳ ಹೋಲಿಕೆ  

ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ ಯೆಹೋವನು ಆ ರಾತ್ರಿಯೆಲ್ಲಾ ಮೂಡಣ ದಿಕ್ಕಿನಿಂದ ಬಲವಾದ ಬಿರುಗಾಳಿಯನ್ನು ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದು ಕಡೆಗೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದನು. ನೀರು ವಿಭಾಗವಾಯಿತು.


ಪಾರಿವಾಳ ಮಾರುವವರಿಗೆ - ಇವುಗಳನ್ನು ಇಲ್ಲಿಂದ ತಕ್ಕೊಂಡು ಹೋಗಿರಿ; ನನ್ನ ತಂದೆಯ ಮನೆಯನ್ನು ಸಂತೆ ಮಾಡಬೇಡಿರಿ ಎಂದು ಹೇಳಿದನು.


ಮತ್ತು ಆತನು ಉಪದೇಶಮಾಡಿ - ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವೆನಿಸಿಕೊಳ್ಳುವದು ಎಂದು ಬರೆದಿದೆಯಲ್ಲಾ? ಆದರೆ ನೀವು ಅದನ್ನು ಕಳ್ಳರ ಗವಿ ಮಾಡಿದ್ದೀರಿ ಎಂದು ಹೇಳಿದನು.


ಅಲ್ಲದೆ ಯೆರೂಸಲೇಮಿನಲ್ಲಿಯೂ ಯೆಹೂದದಲ್ಲಿಯೂ ಇರುವ ಸಕಲ ಪಾತ್ರೆಗಳು ಸೇನಾಧೀಶ್ವರ ಯೆಹೋವನಿಗೆ ಮೀಸಲಾಗಿರುವವು; ಯಜ್ಞಮಾಡುವವರೆಲ್ಲರು ಬಂದು ಅವುಗಳನ್ನು ತೆಗೆದುಕೊಂಡು ಅವುಗಳಲ್ಲಿ ಬೇಯಿಸುವರು; ಆ ದಿನದಲ್ಲಿ ಸೇನಾಧೀಶ್ವರ ಯೆಹೋವನ ಆಲಯದೊಳಗೆ ಯಾವ ವ್ಯಾಪಾರಿಯೂ ಇರನು.


ಸಕಲಜನಾಂಗಗಳನ್ನು ನಡುಗಿಸುವೆನು; ಆಗ ಸಮಸ್ತಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಆ ಆಲಯವನ್ನು ವೈಭವದಿಂದ ತುಂಬಿಸುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


[ಅಶ್ಶೂರವೇ,] ನಿನ್ನ ಹೆಸರಿನ ಸಂತಾನ ಬೀಜವು ಇನ್ನು ಬಿತ್ತಲ್ಪಡಬಾರದೆಂದು ಯೆಹೋವನಾದ ನಾನು ಆಜ್ಞಾಪಿಸಿದ್ದೇನೆ; ನಿನ್ನ ದೇವರ ಮಂದಿರದೊಳಗಿಂದ ಕೆತ್ತಿದ ವಿಗ್ರಹವನ್ನೂ ಎರಕದ ಬೊಂಬೆಯನ್ನೂ ಕಡಿದುಬಿಡುವೆನು; ನಿನಗೆ ಗೋರಿಯನ್ನು ಸಿದ್ಧಮಾಡುವೆನು; ನೀನು ತುಚ್ಫ,


ನಾನು ಅದನ್ನು ಪ್ರೇತಗಳ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲಜನಾಂಗಗಳು ನಡುಗಿದವು; ಮತ್ತು [ಪೂರ್ವಕಾಲದಲ್ಲಿ] ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮ ವೃಕ್ಷಗಳು, ಅಂತು ನೀರಾವರಿಯ ಸಕಲ ವನಸ್ಪತಿಗಳೂ ಅಲ್ಲಿ ಸಂತೈಸಿಕೊಂಡವು.


ಅವನ ಲೆಕ್ಕವಿಲ್ಲದ ಕುದುರೆಗಳಿಂದೆದ್ದ ದೂಳು ನಿನ್ನನ್ನು ಮುಸುಕುವದು; ಒಡಕುಬಿದ್ದ ಕೋಟೆಯೊಳಗೆ ಶತ್ರುವು ನುಗ್ಗುವ ಪ್ರಕಾರ ಅವನು ನಿನ್ನ ಬಾಗಲುಗಳೊಳಗೆ ನುಗ್ಗುವಾಗ ರಾಹುತ, ಚಕ್ಕಡಿಗಾಡಿ, ರಥ ಇವುಗಳ ಶಬ್ದಕ್ಕೆ ನಿನ್ನ ಗೋಡೆಗಳು ಕದಲುವವು.


ಖಡ್ಗವು ವಿಶ್ರಾಂತಿಗೊಳ್ಳುವದು ಹೇಗೆ? ಅಷ್ಕೆಲೋನಿನ ಮತ್ತು ಕರಾವಳಿಯ ವಿಷಯವಾಗಿ ಯೆಹೋವನು ಅದಕ್ಕೆ ಅಪ್ಪಣೆಕೊಟ್ಟನಲ್ಲಾ; ಅಲ್ಲಿಗೇ ಅದನ್ನು ನೇವಿುಸಿದ್ದಾನೆ.


ನೀನು ದುರ್ಗವನ್ನು ನಾಶಪಡಿಸಿ ಪಟ್ಟಣವನ್ನು ಹಾಳು ದಿಬ್ಬವನ್ನಾಗಿಯೂ ಅನ್ಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಬಾರದ ಹಾಳೂರನ್ನಾಗಿಯೂ ಮಾಡಿದ್ದೀ.


ವಿಶಾಲವಾದ ಸಾಗರದ ಮೇಲೆ ತಂದ ಶೀಹೋರಿನ ಧಾನ್ಯದಿಂದಲೂ ನೈಲಿನ ಬೆಳೆಯಿಂದಲೂ ಆದಾಯ ಹೊಂದಿದ [ನಿಮ್ಮ ನಗರಿಯು] ಅನೇಕ ಜನಾಂಗಗಳಿಗೆ ಲಾಭಕರವಾಗಿತ್ತು.


ನಾನು ಅದನ್ನು ಭ್ರಷ್ಟ ಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ [ನನ್ನ] ಪ್ರಜೆಯನ್ನು ಸೂರೆಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದುಹಾಕಬೇಕೆಂದು ಅದಕ್ಕೆ ಅಪ್ಪಣೆಕೊಡುವೆನು.


ಯೆಹೋವನು ಭೂಮಂಡಲವನ್ನು ಕಂಪನ ಮಾಡುವದಕ್ಕೆ ಏಳುವಾಗ ಮನುಷ್ಯರು ಆತನ ಭಯಂಕರತನಕ್ಕೂ ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಗವಿಗಳಲ್ಲಿಯೂ ನೆಲದ ಹಳ್ಳಕೊಳ್ಳಗಳಲ್ಲಿಯೂ ಸೇರಿಕೊಳ್ಳುವರು.


ನಾನು ಯಾವಾಗಲೂ ಮರೆಹೊಗುವ ಆಶ್ರಯಗಿರಿಯಾಗಿರು; ನನ್ನ ರಕ್ಷಣೆಗೋಸ್ಕರ ಆಜ್ಞಾಪಿಸಿದ್ದೀಯಲ್ಲವೇ. ನೀನೇ ನನ್ನ ಬಂಡೆಯೂ ಕೋಟೆಯೂ ಆಗಿದ್ದೀಯಲ್ಲಾ.


ಜನಾಂಗಗಳು ಕಳವಳಗೊಂಡವು; ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿಹೋಯಿತು.


ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಅಣ್ಣತಮ್ಮಂದಿರಿಗೆ ದಾಸಾನುದಾಸನಾಗಲಿ ಅಂದನು.


ಹೀಗಿರಲು ಯೆಹೋವನು ತನ್ನ ಜನರಲ್ಲಿ ಉರಿಗೊಂಡು ಅವರ ಮೇಲೆ ಕೈಯೆತ್ತಿ ಅವರನ್ನು ಹೊಡೆದು ಬಿಡುವನು; ಆಗ ಬೆಟ್ಟಗಳು ನಡಗುವವು, ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈಯೆತ್ತಿಯೇ ಇರುವದು.


ಇದಕ್ಕಾಗಿ ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕವೂ ತೀಕ್ಷ್ಣರೋಷವೂ ಮಸಗುತ್ತಿರುವ ದಿನದಲ್ಲಿ [ಯೆಹೋವನೆಂಬ] ನಾನು ಆಕಾಶಮಂಡಲವನ್ನು ನಡುಗಿಸಿ ಭೂಲೋಕವನ್ನು ಸ್ಥಳದಿಂದ ಕದಲಿಸುವೆನು.


ಇದೇ ಲೋಕದಲ್ಲೆಲ್ಲಾ ನೆರವೇರಬೇಕಾದ ನನ್ನ ಉದ್ದೇಶ, ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.


ಮಹಾನದಿಯ ನೀರು ಬತ್ತಿಹೋಗುವದು.


ತಾರ್ಷೀಷ್ ನಗರಿಯೇ, ನೈಲ್ ನದಿಯಂತೆ ನಿನ್ನ ದೇಶವನ್ನು ಆವರಿಸು; ನಡುಕಟ್ಟು [ಸಡಲಿತು], ಇನ್ನಿಲ್ಲ.


ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ, ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? ಇಗೋ, ನನ್ನ ತರ್ಜನದಿಂದಲೇ ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ; ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು.


ಅವು ತೂರಿನ ಪೌಳಿಗೋಡೆಯನ್ನು ಉರುಳಿಸಿ ಅದರ ಕೊತ್ತಲಗಳನ್ನು ಕೆಡವಿಹಾಕುವವು; ನಾನು ಅದರ ಮಣ್ಣನ್ನು ಕೆರೆದು ಅದನ್ನು ಗುಡಿಸಿ ಗಂಡಾಂತರಮಾಡುವೆನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು