Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 23:15 - ಕನ್ನಡ ಸತ್ಯವೇದವು J.V. (BSI)

15 ಆ ಕಾಲದಲ್ಲಿ ತೂರ್‍ಪಟ್ಟಣವು ಒಬ್ಬ ರಾಜನ ಆಡಳಿತದ ಎಪ್ಪತ್ತು ವರುಷಗಳ ತನಕ ಜ್ಞಾಪಕಕ್ಕೆ ಬಾರದೇ ಇರುವದು; ಎಪ್ಪತ್ತು ವರುಷದ ಮೇಲೆ ಸೂಳೆಯ ವಿಷಯವಾದ ಗೀತದಂತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ದಿನದಲ್ಲಿ ತೂರ್ ಪಟ್ಟಣವು ಒಬ್ಬ ಅರಸನ ಆಡಳಿತದ ಎಪ್ಪತ್ತು ವರ್ಷಗಳ ತನಕ ಜ್ಞಾಪಕಕ್ಕೆ ಬಾರದೇ ಇರುವುದು; ಎಪ್ಪತ್ತು ವರ್ಷದ ಮೇಲೆ ವ್ಯಭಿಚಾರಿ ವಿಷಯವಾದ ಗೀತೆಯಂತೆ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಒಬ್ಬ ಅರಸನ ಜೀವಮಾನ ಕಾಲದಷ್ಟು ದಿನ - ಅಂದರೆ ಎಪ್ಪತ್ತು ವರ್ಷಕಾಲ - ನಗರವು ಯಾರ ನೆನಪಿಗೂ ಬಾರದೆಹೋಗುವುದು. ಆ ಅವಧಿಯು ಮುಗಿದ ಮೇಲೆ ಅದರ ಗತಿ ವೇಶ್ಯೆಯ ಗೀತದಂತಾಗುವುದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಎಪ್ಪತ್ತು ವರ್ಷಗಳ ತನಕ ಜನರಿಗೆ ತೂರಿನ ಜ್ಞಾಪಕವಿರುವದಿಲ್ಲ. ಇದು ಒಬ್ಬ ಅರಸನು ಆಳುವ ಕಾಲ. ಎಪ್ಪತ್ತು ವರ್ಷಗಳ ತರುವಾಯ ತೂರ್ ಈ ಹಾಡಿನಲ್ಲಿರುವ ವೇಶ್ಯೆಯಂತಿರುವದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆ ದಿವಸದಲ್ಲಿ ಟೈರ್ ಪಟ್ಟಣವು ಒಬ್ಬ ಅರಸನ ದಿವಸಗಳ ಪ್ರಕಾರ ಎಪ್ಪತ್ತು ವರುಷಗಳ ತನಕ ಜ್ಞಾಪಕಕ್ಕೆ ಬಾರದೆ ಇರುವುದು. ಎಪ್ಪತ್ತು ವರ್ಷಗಳ ಕೊನೆಯಲ್ಲಿ ಟೈರ್ ಪಟ್ಟಣವು ವೇಶ್ಯೆಯ ವಿಷಯವಾದ ಈ ಗೀತೆಯ ಹಾಗಾಗುವುದು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 23:15
13 ತಿಳಿವುಗಳ ಹೋಲಿಕೆ  

ಅಮ್ಮೋನ್ಯರು, ತೂರಿನ ಎಲ್ಲಾ ಅರಸರು, ಚೀದೋನಿನ ಎಲ್ಲಾ ಅರಸರು,


ಇದಲ್ಲದೆ ಅವು ಏಳು ಮಂದಿ ಅರಸುಗಳನ್ನು ಸೂಚಿಸುತ್ತವೆ; ಅವರಲ್ಲಿ ಐದು ಮಂದಿ ಬಿದ್ದುಹೋಗಿದ್ದಾರೆ, ಒಬ್ಬನು ಇದ್ದಾನೆ, ಮತ್ತೊಬ್ಬನು ಇನ್ನೂ ಬಂದಿಲ್ಲ. ಬಂದ ಮೇಲೆ ಅವನು ಸ್ವಲ್ಪಕಾಲ ಇರಬೇಕು.


ಅವಳ ದ್ರಾಕ್ಷೆಯ ತೋಟಗಳನ್ನು ಅಲ್ಲಿರುವಾಗಲೇ ಅವಳಿಗೆ ಹಿಂದಕ್ಕೆ ಕೊಡುವೆನು; ಆಕೋರಿನ ತಗ್ಗನ್ನೇ ಅವಳ ಸುಖನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು; ಯೌವನದಲ್ಲಿ, ಐಗುಪ್ತ ದೇಶದೊಳಗಿಂದ ಹೊರಟುಬಂದ ದಿನದಲ್ಲಿ ಇದ್ದಂತೆ ಅಲ್ಲಿ ಒಲುಮೆಯಿಂದಿರುವಳು.


ಆ ಹೋತವು ಗ್ರೀಕ್ ರಾಜ್ಯ, ಅದರ ಕಣ್ಣುಗಳ ನಡುವಣ ದೊಡ್ಡ ಕೊಂಬು ಆ ರಾಜ್ಯದ ಮೊದಲನೆಯ ರಾಜ.


ಸಕಲಜನಾಂಗ ಕುಲಭಾಷೆಗಳವರು ಅವನನ್ನು ಸೇವಿಸಲೆಂದು ಅವನಿಗೆ ದೊರೆತನವೂ ಘನತೆಯೂ ರಾಜ್ಯವೂ ಕೊಡೋಣವಾದವು; ಅವನ ಆಳಿಕೆಯು ಅಂತ್ಯವಿಲ್ಲದ್ದು, ಶಾಶ್ವತವಾದದ್ದು; ಅವನ ರಾಜ್ಯವು ಎಂದಿಗೂ ಅಳಿಯದು.


ಯಾವ ಮನುಷ್ಯನೂ ಅಲ್ಲಿ ಹೆಜ್ಜೆಯಿಟ್ಟು ಹಾದುಹೋಗನು; ಯಾವ ಪಶುವೂ ತುಳಿದು ದಾಟಿಹೋಗದು; ನಾಲ್ವತ್ತು ವರುಷ ನಿರ್ಜನವಾಗಿರುವದು.


ತಾರ್ಷೀಷಿನ ಹಡಗುಗಳು ಸಾಲುಸಾಲಾಗಿ ನಿನಗೆ ಬೇಕಾದ ದಿನಸುಗಳನ್ನು ಒಯ್ದುಕೊಂಡು ಬಂದವು. ನೀನು ಭರ್ತಿಯಾಗಿ ಸಮುದ್ರಮಧ್ಯದಲ್ಲಿ ಬಹು ಭಾರವಾದಿ.


ಯೆಹೋವನು ಇಂತೆನ್ನುತ್ತಾನೆ - ಬಾಬೆಲ್ ರಾಜ್ಯವು ಎಪ್ಪತ್ತು ವರುಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಕಟಾಕ್ಷಿಸಿ ಈ ಸ್ಥಳಕ್ಕೆ ತಿರಿಗಿ ಬರಮಾಡುವೆನೆಂಬ ನನ್ನ ಶುಭವಾಕ್ಯವನ್ನು ನಿಮಗಾಗಿ ನೆರವೇರಿಸುವೆನು.


ಅದೇನಂದರೆ ಎಲ್ಲರೂ ಮರೆತ ಸೂಳೆಯೇ, ಕಿನ್ನರಿಯನ್ನು ತೆಗೆದುಕೊಂಡು ಊರಲ್ಲಿ ಅಲೆಯುತ್ತಾ ಜನರು ನಿನ್ನನ್ನು ಜ್ಞಾಪಿಸಿಕೊಳ್ಳುವಂತೆ ಚೆನ್ನಾಗಿ ನುಡಿಸಿ ಬಹು ಗೀತಗಳನ್ನು ಹಾಡು ಎಂಬದೇ.


ಎಪ್ಪತ್ತು ವರುಷಗಳ ಮೇಲೆ ಯೆಹೋವನು ತೂರ್ ಎಂಬವಳಿಗೆ ನೇವಿುಸಲು ಅವಳು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಮಂಡಲದಲ್ಲಿ ಲೋಕದ ಸಕಲ ರಾಜ್ಯಗಳೊಂದಿಗೆ ಕಲೆಯುವಳು.


ಹೀಗಿರಲು, ಸೂಳೆಯೇ, ಯೆಹೋವನ ಈ ವಾಕ್ಯವನ್ನು ಕೇಳು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು