Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 23:3 - ಕನ್ನಡ ಸತ್ಯವೇದವು J.V. (BSI)

3 ವಿಶಾಲವಾದ ಸಾಗರದ ಮೇಲೆ ತಂದ ಶೀಹೋರಿನ ಧಾನ್ಯದಿಂದಲೂ ನೈಲಿನ ಬೆಳೆಯಿಂದಲೂ ಆದಾಯ ಹೊಂದಿದ [ನಿಮ್ಮ ನಗರಿಯು] ಅನೇಕ ಜನಾಂಗಗಳಿಗೆ ಲಾಭಕರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ವಿಶಾಲವಾದ ಸಾಗರದ ಮೇಲೆ ತಂದ ಶೀಹೋರಿನ ಧಾನ್ಯದಿಂದಲೂ, ನೈಲ್ ನದಿಯ ಬೆಳೆಯಿಂದಲೂ ಆದಾಯಹೊಂದಿದ ನಿಮ್ಮ ನಗರವು ಅನೇಕ ಜನಾಂಗಗಳಿಗೆ ವ್ಯಾಪಾರ ಸ್ಥಳವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಶೀಹೋರಿನ ಧಾನ್ಯದಿಂದಲೂ ನೈಲಿನ ಬೆಳೆಯಿಂದಲೂ ಆದಾಯ ಪಡೆದಿರಿ, ನಿಮ್ಮ ನಗರ ಹಲವಾರು ನಾಡುಗಳಿಗೆ ಮಾರುಕಟ್ಟೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರು ಸಮುದ್ರ ಪ್ರಯಾಣ ಮಾಡುತ್ತಾ ಧಾನ್ಯಕ್ಕಾಗಿ ಹುಡುಕುತ್ತಿದ್ದಾರೆ. ತೂರಿನ ಜನರು ನೈಲ್ ನದಿಯ ಬದಿಗಳಲ್ಲಿ ಬೆಳೆಸುವ ಧಾನ್ಯವನ್ನು ಕೊಂಡುಕೊಂಡು ಇತರ ದೇಶಗಳಿಗೆ ಮಾರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಪ್ರವಾಹದಿಂದ ಶೀಹೋರಿನ ಧಾನ್ಯವೂ, ನೈಲ್ ನದಿಯ ಸುಗ್ಗಿಯೂ ಅದಕ್ಕೆ ಆದಾಯವಾಗಿತ್ತು. ಅನೇಕ ಜನಾಂಗಗಳಿಗೆ ವ್ಯಾಪಾರ ಸ್ಥಳವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 23:3
12 ತಿಳಿವುಗಳ ಹೋಲಿಕೆ  

ನೀನು ಐಗುಪ್ತದ ದಾರಿಯಲ್ಲಿ ನಡೆದದ್ದೇಕೆ? ನೈಲ್‍ನದಿಯ ನೀರನ್ನು ಕುಡಿಯಬೇಕಾದದ್ದೇನು? ಅಶ್ಶೂರದ ಮಾರ್ಗದಲ್ಲಿ ಹೆಜ್ಜೆಯಿಟ್ಟದ್ದೇಕೆ? [ಯೂಫ್ರೇಟೀಸ್] ನದಿಯ ಜಲವನ್ನು ಪಾನಮಾಡಬೇಕಾದದ್ದೇನು?


ಆಗ ದಾವೀದನು ದೇವಮಂಜೂಷವನ್ನು ಕಿರ್ಯತ್ಯಾರೀವಿುನಿಂದ ತರುವದಕ್ಕೋಸ್ಕರ ಐಗುಪ್ತದ ಶೀಹೋರ್ ಹಳ್ಳದಿಂದ ಹಮಾತಿನ ದಾರಿಯವರೆಗೂ ವಾಸಿಸುತ್ತಿದ್ದ ಎಲ್ಲಾ ಇಸ್ರಾಯೇಲ್ಯರನ್ನೂ ಕೂಡಿಸಿ


ನನ್ನ ಬೆಳ್ಳಿಬಂಗಾರಗಳನ್ನು ಕಸುಕೊಂಡಿದ್ದೀರಿ, ನನ್ನ ಒಳ್ಳೊಳ್ಳೆಯ ಪ್ರಿಯವಸ್ತುಗಳನ್ನು ನಿಮ್ಮ ಸೌಧಗಳಿಗೆ ಸೂರೆಮಾಡಿಕೊಂಡು ಹೋಗಿದ್ದೀರಿ;


ನಿನ್ನ ಜ್ಞಾನವಿವೇಕಗಳಿಂದ ನೀನು ಐಶ್ವರ್ಯವನ್ನು ಗಳಿಸಿ ನಿನ್ನ ಬೊಕ್ಕಸಗಳಲ್ಲಿ ಬೆಳ್ಳಿಬಂಗಾರವನ್ನು ತುಂಬಿಸಿಕೊಂಡಿದ್ದೀ;


ನಿನ್ನ ಸರಕುಗಳು ಸಮುದ್ರಗಳನ್ನು ಹಾದು ಹರಡಿಕೊಂಡವು. ಅವುಗಳಿಂದ ಬಹುಜನಾಂಗಗಳನ್ನು ತುಂಬಿಸಿದಿ; ನಿನ್ನ ಅಪಾರವಾದ ಐಶ್ವರ್ಯದಿಂದಲೂ ವ್ಯಾಪಾರದ ದಿನಸುಗಳಿಂದಲೂ ಭೂರಾಜರನ್ನು ಸಮೃದ್ಧಿಪಡಿಸಿದಿ.


ನೀರಾವರಿಗಳಲ್ಲೆಲ್ಲಾ ಬೀಜಬಿತ್ತುತ್ತಲೂ ದನ ಕತ್ತೆಗಳನ್ನು [ಕಾವಲಿಗೆ] ಮೇಯಬಿಡುತ್ತಲೂ ಇರುವ ನೀವು ಧನ್ಯರೇ ಸರಿ!


ಅದು ಕಿರೀಟದಾಯಕವು; ಅದರ ವರ್ತಕರು ಪ್ರಭುಗಳು, ಅದರ ವ್ಯಾಪಾರಿಗಳು ಲೋಕಮಾನ್ಯರು; ಇಂಥ ತೂರಿಗೆ ವಿರುದ್ಧವಾಗಿ ಈ ಸಂಕಲ್ಪವನ್ನು ಮಾಡಿದವನು ಯಾರು?


ನದಿಯ ಪಕ್ಕದ ತೀರಭೂವಿುಯು ಬೀಡು ಬೀಳುವದು; ನದಿಯಲ್ಲಿ ಬಿತ್ತಿದ ಎಲ್ಲಾ ಬೀಜವು ಒಣಗಿ ಗಾಳಿಗೆ ಸಿಕ್ಕಿ ಮಾಯವಾಗುವದು.


ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶವು ಬಿಟ್ಟುಬಂದ ಐಗುಪ್ತದೇಶದ ಹಾಗಲ್ಲ. ಐಗುಪ್ತದೇಶದಲ್ಲಿ ನೀವು ಹೊಲಗದ್ದೆಗಳಲ್ಲಿ ಬೀಜ ಬಿತ್ತಿದ ಮೇಲೆ ಕಾಯಿಪಲ್ಯಗಳ ತೋಟವನ್ನು ಸಾಗುವಳಿಮಾಡುವ ರೀತಿಯಲ್ಲಿ ಏತವನ್ನು ತುಳಿದು ನೀರುಕಟ್ಟುತ್ತಿದ್ದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು