ಯೆಶಾಯ 23:4 - ಕನ್ನಡ ಸತ್ಯವೇದವು J.V. (BSI)4 ಚೀದೋನೇ, ನಾಚಿಕೆಪಡು; ಸಮುದ್ರವು, ಸಮುದ್ರದುರ್ಗವು - ನಾವು ವೇದನೆಪಡಲಿಲ್ಲ, ಪ್ರಸವಿಸಲಿಲ್ಲ, ಯುವತಿಯುವಕರನ್ನು ಸಾಕಿ ಸಲಹಲಿಲ್ಲ ಎಂದು ನುಡಿದಿದೆಯಷ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಚೀದೋನೇ, ನಾಚಿಕೆಪಡು. ಏಕೆಂದರೆ ಸಮುದ್ರವೂ, ಸಮುದ್ರದ ದುರ್ಗವೂ, “ನಾವು ವೇದನೆ ಪಡಲಿಲ್ಲ, ಪ್ರಸವಿಸಲಿಲ್ಲ, ಯುವತಿ ಯುವಕರನ್ನು ಸಾಕಿ ಸಲಹಲಿಲ್ಲ” ಎಂದು ನುಡಿದಿದೆಯಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಸಿದೋನ್ ನಗರವೇ, ನಿನಗೆ ನಾಚಿಕೆಗೇಡು ! ಸಮುದ್ರವೂ ಸಮುದ್ರ ತಳವೂ ನಿನ್ನನ್ನು ನಿರಾಕರಿಸುತ್ತಾ; “ನಾನು ಗರ್ಭಧರಿಸಲಿಲ್ಲ, ಪ್ರಸವಿಸಲಿಲ್ಲ, ಪುತ್ರಪುತ್ರಿಯರನ್ನು ಸಾಕಿ ಸಲಹಲಿಲ್ಲ,” ಎಂದು ನುಡಿದಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಚೀದೋನೇ, ನೀನು ತುಂಬಾ ದುಃಖದಿಂದಿರಬೇಕು. ಯಾಕೆಂದರೆ ಸಮುದ್ರವೂ ಸಮುದ್ರದ ಕೋಟೆಯೂ ಹೇಳುವುದೇನೆಂದರೆ, “ನನಗೆ ಮಕ್ಕಳಿಲ್ಲ, ನಾನು ಪ್ರಸವವೇದನೆ ಅನುಭವಿಸಲಿಲ್ಲ. ನಾನು ಮಕ್ಕಳನ್ನು ಹೆರಲಿಲ್ಲ. ನಾನು ಗಂಡುಮಕ್ಕಳನ್ನಾಗಲಿ ಹೆಣ್ಣುಮಕ್ಕಳನ್ನಾಗಲಿ ಬೆಳೆಸಲಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಸೀದೋನೇ ಮತ್ತು ಸಮುದ್ರದ ಕೋಟೆಯೇ ನಾಚಿಕೆಪಡಿರಿ. ಏಕೆಂದರೆ ಇದೇ ಸಮುದ್ರದ ಘೋಷಣೆಯಾಗಿದೆ: “ನಾವು ಪ್ರಸವವೇದನೆ ಪಡುವುದಿಲ್ಲ, ಹೆರುವುದಿಲ್ಲ, ಇಲ್ಲವೆ ಪುತ್ರಪುತ್ರಿಯರನ್ನು ಸಾಕಿ ಸಲಹುವುದಿಲ್ಲ,” ಅಧ್ಯಾಯವನ್ನು ನೋಡಿ |