Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 24:1 - ಕನ್ನಡ ಸತ್ಯವೇದವು J.V. (BSI)

1 ಇಗೋ, ಯೆಹೋವನು ಲೋಕವನ್ನು ಬರಿದುಮಾಡಿ ಹಾಳಿಗೆ ತಂದು ವಿರೂಪಪಡಿಸಿ ಅದರ ನಿವಾಸಿಗಳನ್ನು ಚದರಿಸಿಬಿಡುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಗೋ, ಯೆಹೋವನು ಭೂಮಿಯನ್ನು ಬರಿದುಮಾಡಿ, ಎಲ್ಲಾ ಪ್ರದೇಶವನ್ನು ನಿರ್ಜನಮಾಡಿ, ಅದನ್ನು ವಿಕಾರಪಡಿಸಿ, ಅದರ ನಿವಾಸಿಗಳನ್ನು ಚದುರಿಸಿಬಿಡುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಗೋ, ಸರ್ವೇಶ್ವರ ಬರಿದುಮಾಡುವರು ಧರೆಯನು, ನಿರ್ಜನ ಪ್ರದೇಶವಾಗಿಸುವರು ವಿರೂಪಗೊಳಿಸಿ ಅದನು, ಚದರಿಸುವರು ಅದರ ನಿವಾಸಿಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಗೋ, ಯೆಹೋವನು ಈ ದೇಶವನ್ನು ನಾಶಮಾಡುವನು. ಆತನು ಅದನ್ನು ಸಂಪೂರ್ಣವಾಗಿ ನಿರ್ಮೂಲ ಮಾಡುವನು. ಜನರನ್ನು ಅತಿದೂರಕ್ಕೆ ಚದರಿಸಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಗೋ, ಯೆಹೋವ ದೇವರು ಭೂಮಿಯನ್ನು ಬರಿದುಮಾಡಿ, ನಿರ್ಜನ ಪ್ರದೇಶವನ್ನಾಗಿ ಮಾಡಿ, ತಲೆಕೆಳಗಾಗಿ ತಿರುಗಿಸಿ, ಅದರ ನಿವಾಸಿಗಳನ್ನು ಚದರಿಸಿಬಿಡುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 24:1
45 ತಿಳಿವುಗಳ ಹೋಲಿಕೆ  

ನಗರಿಯು ಬರಿದಾಗಿದೆ, ಬಟ್ಟಬರಿದಾಗಿ ಬೀಳುಬಿದ್ದಿದೆ; ಎದೆಯು ನೀರಾಗಿ ಹೋಗಿದೆ, ಮೊಣಕಾಲುಗಳು ಅದರುತ್ತವೆ, ಎಲ್ಲರ ಸೊಂಟಗಳಿಗೂ ವೇದನೆಯಾಗಿದೆ, ಎಲ್ಲರ ಮುಖಗಳೂ ಬಾಡಿವೆ.


ಯೆಹೋವನು ಭೂಮಂಡಲವನ್ನು ಕಂಪನ ಮಾಡುವದಕ್ಕೆ ಏಳುವಾಗ ಮನುಷ್ಯರು ಆತನ ಭಯಂಕರತನಕ್ಕೂ ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಗವಿಗಳಲ್ಲಿಯೂ ನೆಲದ ಹಳ್ಳಕೊಳ್ಳಗಳಲ್ಲಿಯೂ ಸೇರಿಕೊಳ್ಳುವರು.


ಬೆಟ್ಟಗುಡ್ಡಗಳನ್ನು ನಾಶಪಡಿಸಿ ಅಲ್ಲಿಯ ಮೇವನ್ನೆಲ್ಲಾ ತಾರಿಸಿ ನದಿಗಳನ್ನು ಒಣದಿಣ್ಣೆ ಮಾಡಿ ಕೆರೆಗಳನ್ನು ಬತ್ತಿಸುವೆನು.


ಭೂವಿುಯು ಅಮಲೇರಿದವನ ಹಾಗೆ ಓಲಾಡುತ್ತದೆ, ಮಂಚಿಕೆಯಂತೆ ತೂಗಾಡುತ್ತದೆ; ಅದರ ದ್ರೋಹವು ಅದಕ್ಕೆ ಭಾರವಾಗಿದೆ, ಅದು ಬಿದ್ದು ಹೋಗುತ್ತಿದೆ, ತಿರಿಗಿ ಏಳುವದೇ ಇಲ್ಲ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ನಿನ್ನನ್ನು ಹಾಳುಮಾಡಿ ಲೋಕವನ್ನೆಲ್ಲಾ ಸಂತೋಷಪಡಿಸುವೆನು.


ಆಗ ಜನ ತುಂಬಿದ ಊರುಗಳು ಹಾಳಾಗಿ ದೇಶವು ಬೀಡುಬೀಳುವದು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಅವರು ಕತ್ತಿಯ ಬಾಯಿಗೆ ಬೀಳುವರು; ಅವರನ್ನು ಅನ್ಯದೇಶಗಳಿಗೆಲ್ಲಾ ಸೆರೆಹಿಡಿದುಕೊಂಡು ಹೋಗುವರು; ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವದು.


ನೀವು ವಾಸಿಸುವ ದೇಶದಲ್ಲೆಲ್ಲಾ ಊರುಗಳು ಹಾಳಾಗುವದರಿಂದಲೂ ಪೂಜಾಸ್ಥಳಗಳು ಪಾಳು ಬೀಳುವದರಿಂದಲೂ ನಿಮ್ಮ ಯಜ್ಞವೇದಿಗಳು ಹಾಳುಪಾಳಾಗುವವು, ನಿಮ್ಮ ಬೊಂಬೆಗಳು ಒಡೆಯಲ್ಪಟ್ಟು ಇಲ್ಲವಾಗುವವು, ನಿಮ್ಮಸೂರ್ಯಸ್ತಂಭಗಳು ಕಡಿಯಲ್ಪಡುವವು, ನೀವು ರೂಪಿಸಿದ ವಿಗ್ರಹಗಳು ಅಳಿದುಹೋಗುವವು,


ಹಾದುಹೋಗುವವರೆಲ್ಲರ ಕಣ್ಣೆದುರಿಗೆ ನಾನು ನಿನ್ನನ್ನು ಹಾಳುಮಾಡಿ ಸುತ್ತಲಿನ ಜನಾಂಗಗಳ ನಿಂದೆಗೆ ಗುರಿಮಾಡುವೆನು.


ಮುತ್ತಿಗೆಯ ದಿನಗಳು ತೀರಿದಕೂಡಲೆ ಕೂದಲಿನ ಒಂದು ಭಾಗವನ್ನು ಪಟ್ಟಣದ ಮಧ್ಯದೊಳಗೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರು (ಹಾಗೆಯೇ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು).


ಇವರಿಗಾಗಲಿ ಇವರ ಪಿತೃಗಳಿಗಾಗಲಿ ಗೊತ್ತಿಲ್ಲದ ಜನಾಂಗಗಳೊಳಗೆ ಇವರನ್ನು ಚದರಿಸಿಬಿಟ್ಟು ಇವರು ನಿರ್ಮೂಲವಾಗುವ ತನಕ ಖಡ್ಗವನ್ನು ಇವರ ಹಿಂದೆ ಕಳುಹಿಸುವೆನು.


ದೇಶವು ಪ್ರಲಾಪಿಸಿ ಕುಗ್ಗುತ್ತದೆ, ಲೆಬನೋನ್ ನಾಚಿಕೊಂಡು ಒಣಗುತ್ತದೆ. ಶಾರೋನ್ ಬೆಂಗಾಡಾಗಿದೆ, ಬಾಷಾನ್ ಮತ್ತು ಕರ್ಮೆಲ್ [ತಳಿರುಗಳನ್ನು] ಉದುರಿಸಿಬಿಟ್ಟಿವೆ.


ಅಯ್ಯೋ, ನೀವು ಎಂಥಾ ಮೂರ್ಖರು! ಕುಂಬಾರನು ಮಣ್ಣೆನಿಸಿಕೊಂಡಾನೇ? ಕಾರ್ಯವು ಕರ್ತೃವನ್ನು ಕುರಿತು ಅವನು ನನ್ನನ್ನು ಮಾಡಲಿಲ್ಲ ಎಂದುಕೊಂಡೀತೇ? ನಿರ್ಮಿತವಾದದ್ದು ನಿರ್ಮಿಸಿದವನ ವಿಷಯವಾಗಿ ಅವನಿಗೆ ವಿವೇಕವಿಲ್ಲ ಎಂದೀತೇ?


ಕೋಟೆಕೊತ್ತಲದ ಪಟ್ಟಣವು ಹಾಳಾಗಿ ಕಾಡಿನಂತೆ ಜನರಿಲ್ಲದೆ ಶೂನ್ಯನಿವಾಸಸ್ಥಾನವಾಗಿದೆ; ಅಲ್ಲಿ ಕರು ಮೇದು ಮಲಗುವದು, ಅಲ್ಲಿನ ಚಿಗುರುಗಳನ್ನು ತಿಂದುಬಿಡುವದು.


ಅದನ್ನು ಹಾಳುಮಾಡುವೆನು, ಯಾರೂ ಕುಡಿಕತ್ತರಿಸಿ ಅಗತೆಮಾಡುವದಿಲ್ಲ; ಅದರಲ್ಲಿ ಮುಳ್ಳುಗಿಳ್ಳು ಬೆಳೆದುಹೋಗುವದು; ಮತ್ತು ಅದರ ಮೇಲೆ ಮಳೆಸುರಿಸಬಾರದೆಂದು ಮೇಘಗಳಿಗೆ ಅಪ್ಪಣೆಮಾಡುವೆನು.


ಯೆಹೋವನು ಪರದೇಶದವರನ್ನು ಕಾಪಾಡುತ್ತಾನೆ. ಆತನು ಅನಾಥರಿಗೂ ವಿಧವೆಯರಿಗೂ ಆಧಾರವಾಗಿದ್ದಾನೆ. ಆದರೆ ದುಷ್ಟರ ಮಾರ್ಗವನ್ನು ಡೊಂಕು ಮಾಡಿಬಿಡುತ್ತಾನೆ.


ನೀನು ಅವನ ಮುಖಾಂತರವಾಗಿ - ನೀವು ಅವಿಧೇಯರಾದರೆ ನಿಮ್ಮನ್ನು ಜನಾಂಗಗಳೊಳಗೆ ಚದರಿಸಿ ಬಿಡುವೆನು;


ನೂಲು ಮಟ್ಟಗೋಲು ಇವುಗಳಿಂದಲೋ ಎಂಬಂತೆ ಸಮಾರ್ಯವನ್ನೂ ಅಹಾಬನ ಮನೆಯನ್ನೂ ನೆಲಸಮಮಾಡಿಬಿಟ್ಟೆನಲ್ಲಾ; ಯೆರೂಸಲೇಮನ್ನೂ ಅವುಗಳಂತೆಯೇ ಮಾಡುವೆನು. ಒಬ್ಬನು ಪಾತ್ರೆಯನ್ನು ಒರಸಿ ಡಬ್ಬುಹಾಕುವ ಮೇರೆಗೆ ನಾನು ಯೆರೂಸಲೇಮನ್ನು ಒರಸಿ ಡಬ್ಬು ಹಾಕುವೆನು.


ಅವರನ್ನು ಸಂಪೂರ್ಣವಾಗಿ ನಾಶಮಾಡುತ್ತಿದ್ದೆನು, ಅವರು ಮನುಷ್ಯರ ಜ್ಞಾಪಕದಲ್ಲೂ ಇಲ್ಲದಂತೆ ಮಾಡುತ್ತಿದ್ದೆನು;


ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲಾ ಜನಾಂಗಗಳಲ್ಲಿಯೂ ಯೆಹೋವನು ನಿಮ್ಮನ್ನು ಚದರಿಸುವನು; ಅಲ್ಲಿ ನಿಮಗಾದರೂ ನಿಮ್ಮ ಪಿತೃಗಳಿಗಾದರೂ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ಯೆಹೋವನು ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸುವನು; ಆತನು ನಿಮ್ಮನ್ನು ಓಡಿಸುವ ದೇಶಗಳ ಜನರ ಮಧ್ಯದಲ್ಲಿ ನೀವು ಸ್ವಲ್ಪ ಮಂದಿ ಮಾತ್ರ ಉಳಿಯುವಿರಿ.


ಆಮೇಲೆ ಹಂಡೆಯು ಕಾದು ತಾಮ್ರವು ಕೆಂಪಾಗಿ ಒಳಗಣ ಕಲ್ಮಷವು ಕರಗಿ ಕಿಲುಬು ಇಲ್ಲವಾಗುವಂತೆ ಅದನ್ನು ಬರಿದುಮಾಡಿ ಕೆಂಡಗಳ ಮೇಲೆ ಇಡು.


ಆಗ ಕಾರೇಹನ ಮಗನಾದ ಯೋಹಾನಾನನು ವಿುಚ್ಪದಲ್ಲಿ ಗೆದಲ್ಯನಿಗೆ - ನಾನು ಹೋಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕೊಲ್ಲಲಿಕ್ಕೆ ಅಪ್ಪಣೆಯಾಗಲಿ; ಇದು ನಿನ್ನ ಅಪ್ಪಣೆ ಎಂದು ಯಾರಿಗೂ ತಿಳಿದು ಬರುವದಿಲ್ಲ; ಅವನು ನಿನ್ನನ್ನು ಕೊಂದರೆ ನಿನ್ನ ಆಶ್ರಯದ ಯೆಹೂದ್ಯರೆಲ್ಲರೂ ದಿಕ್ಕಾಪಾಲಾಗಿ ಯೆಹೂದದ ಶೇಷವು ನಿಶ್ಶೇಷವಾಗುವದಲ್ಲಾ; ಏಕೆ ಹೀಗಾಗಬೇಕು ಎಂದು ರಹಸ್ಯವಾಗಿ ವಿಜ್ಞಾಪಿಸಲು


ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದರಿರುವ [ಇಸ್ರಾಯೇಲ್] ಹನ್ನೆರಡು ಕುಲದವರಿಗೆ ಬರೆಯುವದು. ನಿಮಗೆ ಶುಭವಾಗಲಿ.


ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಊರಿನ ಅಧಿಕಾರಿಗಳ ಬಳಿಗೆ ಎಳಕೊಂಡು ಹೋಗಿ - ಲೋಕವನ್ನು ಅಲ್ಲಕಲ್ಲೋಲ ಮಾಡಿದ ಆ ಮನುಷ್ಯರು ಇಲ್ಲಿಗೂ ಬಂದಿದ್ದಾರೆ,


ಇಸ್ರಾಯೇಲು ಚದರಿಹೋದ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.


ಜನಾಂಗಘಾತುಕವಾದ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದಿದೆ; ಹೊರಟಿದೆ, ಸ್ಥಳದಿಂದ ತೆರಳಿದೆ; ನಿನ್ನ ದೇಶವನ್ನು ಹಾಳುಮಾಡುವದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ನಿವಾಸಿಗಳಾಗುವವು.


ಯೆಹೋವನೂ ಆತನ ರೋಷಕ್ಕೆ ಆಯುಧಗಳಾದವರೂ ದೂರ ದೇಶದಿಂದ, ಅಂದರೆ ಆಕಾಶಮಂಡಲದ ಕಟ್ಟಕಡೆಯಿಂದ, ಭೂವಿುಯನ್ನೆಲ್ಲಾ ಹಾಳುಮಾಡುವದಕ್ಕಾಗಿ ಬಂದಿದ್ದಾರೆ.


ಇದಕ್ಕಾಗಿ ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕವೂ ತೀಕ್ಷ್ಣರೋಷವೂ ಮಸಗುತ್ತಿರುವ ದಿನದಲ್ಲಿ [ಯೆಹೋವನೆಂಬ] ನಾನು ಆಕಾಶಮಂಡಲವನ್ನು ನಡುಗಿಸಿ ಭೂಲೋಕವನ್ನು ಸ್ಥಳದಿಂದ ಕದಲಿಸುವೆನು.


ಭೂವಿುಯು ಒಡೆದೇ ಇದೆ, ಬಿರಿದೇ ಬಿರಿದಿದೆ, ಕದಲಿಯೇ ಹೋಗಿದೆ.


ಮತ್ತು ಯೆಹೋವನು ಸಂಕಲ್ಪಿಸಿದ ದಂಡದ ಪ್ರತಿಯೊಂದು ಪೆಟ್ಟೂ ದಮ್ಮಡಿ ಕಿನ್ನರಿಗಳ ನಾದದೊಡನೆ ಅವರ ಮೇಲೆ ಬೀಳುವದು. ಆತನು ಅವರೊಂದಿಗೆ ಹೋರಾಡುತ್ತಾ ಕೈಬೀಸಿ ಯುದ್ಧಮಾಡುವನು.


ಯೆಹೋವನು ಸಕಲ ಜನಾಂಗಗಳಲ್ಲಿ ಕೋಪಮಾಡಿ ಅವುಗಳ ಸೈನ್ಯದ ಮೇಲೆ ರೋಷಗೊಂಡು ಅವರನ್ನು ಕೊಲೆಗೆ ಈಡುಮಾಡಿ ನಿಶ್ಶೇಷವಾಗಿ ಸಂಹರಿಸಿದ್ದಾನಷ್ಟೆ.


ಅದು ಹಗಲಿರುಳೂ ಆರದು, ಅದರ ಹೊಗೆ ನಿರಂತರ ಏರುತ್ತಿರುವದು. ದೇಶವು ತಲತಲಾಂತರಕ್ಕೂ ಹಾಳುಬಿದ್ದಿರುವದು, ಯುಗಯುಗಾಂತರಕ್ಕೂ ಅಲ್ಲಿ ಯಾರೂ ಹಾದು ಹೋಗರು.


[ಯೆಹೂದವು ಹೀಗೆ ಪ್ರಲಾಪಿಸುತ್ತದೆ] - ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದು ಹಾಕಿದ್ದಾನೆ, ಒಡೆದುಬಿಟ್ಟಿದ್ದಾನೆ, ಬರೀಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ, ನನ್ನ ರುಚಿಪದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು [ಗಂಗಾಳದಂತೆ] ತೊಳೆದು ಬಿಟ್ಟಿದ್ದಾನೆ.


ಆತನ ಮುಂದೆ ಬೆಟ್ಟಗಳು ಅದರುತ್ತವೆ, ಗುಡ್ಡಗಳು ಕರಗುತ್ತವೆ; ಆತನ ದರ್ಶನಕ್ಕೆ ಭೂವಿುಯು ಕಂಪಿಸುತ್ತದೆ, ಹೌದು, ಲೋಕವೂ ಲೋಕನಿವಾಸಿಗಳೆಲ್ಲವೂ ತಲ್ಲಣಿಸುತ್ತವೆ.


ಆ ಪಟ್ಟಣವು ನನಗೆ ಅರೀಯೇಲಾಗಿಯೇ ಪರಿಣವಿುಸುವದು.


ಇಷ್ಟವಾದ ಹೊಲಗಳ ಮತ್ತು ಫಲವತ್ತಾದ ದ್ರಾಕ್ಷಾಲತೆಗಳ ವಿಷಯದಲ್ಲಿ ಎದೆಬಡಿದುಕೊಳ್ಳುವರು.


ನಾನು ಅವರ ಮೇಲೆ ಕೈಯತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಅರಣ್ಯದಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.


ಸಮಯ ಬಂತು, ದಿನ ಹತ್ತರಿಸಿತು; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.


ಅವರು ಕೊಂಬನ್ನೂದಿ ಸರ್ವಸನ್ನಾಹ ಮಾಡಿದರೂ ಯಾರೂ ಯುದ್ಧಕ್ಕೆ ಹೊರಡರು; ನನ್ನ ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು