Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 24:11 - ಕನ್ನಡ ಸತ್ಯವೇದವು J.V. (BSI)

11 ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲಾ ಅಸ್ತವಿುಸಿದೆ; ಲೋಕದ ಸಡಗರವು ಸೆರೆಯಾಗಿ ತೊಲಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲಾ ಕೊನೆಗೊಂಡಿದೆ; ಲೋಕದ ಸಡಗರವು ಸೆರೆಯಾಗಿ ತೊಲಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮದ್ಯಪಾನವಿಲ್ಲವೆಂದು ಬೀದಿಗಳಲಿ ಬೊಬ್ಬೆ ಇಡುತಿಹರೆಲ್ಲ, ಅಸ್ತಮಿಸಿಹೋಯಿತು ಜಗದ ಉಲ್ಲಾಸವೆಲ್ಲ, ಸೆರೆಯಾಗಿ ತೊಲಗಿತು ಅದರ ಸಡಗರವೆಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಮಾರುಕಟ್ಟೆಗಳಲ್ಲಿ ಜನರು ಈಗಲೂ ದ್ರಾಕ್ಷಾರಸವನ್ನು ಕೇಳುವರು. ಆದರೆ ಸಂತೋಷವೇ ಹೋಗಿಬಿಟ್ಟಿದೆ. ಹರ್ಷವು ಬಹುದೂರ ಒಯ್ಯಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ. ಉಲ್ಲಾಸವೆಲ್ಲ ಅಸ್ತಮಿಸಿದೆ. ಭೂಮಿಯ ಮೇಲಿನ ಸಂತೋಷವು ತೊಲಗಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 24:11
18 ತಿಳಿವುಗಳ ಹೋಲಿಕೆ  

ಅವರು ಹಾಸಿಗೆಯ ಮೇಲೆ ಬಿದ್ದುಕೊಂಡು ಧಾನ್ಯದ್ರಾಕ್ಷಾರಸಗಳಿಗೆ ಅರಚಿಕೊಳ್ಳುತ್ತಾರೆಯೇ ಹೊರತು ನನ್ನನ್ನು ಮನಃಪೂರ್ವಕವಾಗಿ ಎಂದೂ ಪ್ರಾರ್ಥಿಸಲಿಲ್ಲ; ನನ್ನನ್ನು ತೊರೆದುಬಿಟ್ಟು ತಮ್ಮ ದೇಹಗಳನ್ನು ಗಾಯಮಾಡಿಕೊಳ್ಳುತ್ತಾರೆ.


ಆದರೆ ಅಬ್ರಹಾಮನು - ಕಂದಾ, ನೀನು ಆಶಿಸಿದ ಸುಖವನ್ನು ನಿನ್ನ ಜೀವಮಾನದಲ್ಲಿ ಹೊಂದಿದಿ; ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ.


ಯೆಹೋವನ ದಿನವು ಸಮೀಪಿಸಿತು; ಅಯ್ಯೋ, ದಿನವೇ! ಅದು ಸರ್ವಶಕ್ತನಿಂದ ನಾಶನದಿನವಾಗಿಯೇ ಬರುವದು.


ಹರ್ಷಾನಂದಗಳು ತೋಟಗಳಿಂದಲೂ ಮೋವಾಬಿನ ಇಡೀ ದೇಶದಿಂದಲೂ ತೊಲಗಿವೆ; ತೊಟ್ಟಿಗಳಲ್ಲಿ ದ್ರಾಕ್ಷಾರಸವು ಇಲ್ಲದಂತೆ ಮಾಡಿದ್ದೇನೆ; ಯಾರೂ ತೊಟ್ಟಿಯಲ್ಲಿ ತುಳಿಯುತ್ತಾ ಹರ್ಷಧ್ವನಿಗೈಯರು; ಕೇಳಿಸುವ ಧ್ವನಿ ಹರ್ಷಧ್ವನಿಯಲ್ಲ.


ನನ್ನ ಜನರ ಭೂವಿುಯ ಮೇಲೂ ಉತ್ಸಾಹಪಟ್ಟಣದಲ್ಲಿ ಉಲ್ಲಾಸಗೊಳ್ಳುವ ಎಲ್ಲಾ ಮನೆಗಳ ಮೇಲೂ ಮುಳ್ಳುಗಿಳ್ಳು ಹತ್ತಿಕೊಳ್ಳುವದು;


ಹರ್ಷಾನಂದಗಳು ತೋಟಗಳಿಂದ ತೊಲಗಿವೆ, ದ್ರಾಕ್ಷೆಯ ತೋಟಗಳಲ್ಲಿ ಉತ್ಸಾಹಧ್ವನಿಯೂ ಉಲ್ಲಾಸದ ಆರ್ಭಟವೂ ಇರುವದಿಲ್ಲ, ತುಳಿಯುವವರು ತೊಟ್ಟಿಗಳಲ್ಲಿ ದ್ರಾಕ್ಷಾರಸವನ್ನು ತುಳಿದು ತೆಗೆಯುವದಿಲ್ಲ, ಅವರ ಕೂಗನ್ನು ನಿಲ್ಲಿಸಿಬಿಟ್ಟಿದ್ದೇನೆ.


ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ದೇಶವು ಸುಟ್ಟುಹೋಗಿದೆ; ಪ್ರಜೆಯು ಅಗ್ನಿಗೆ ಆಹುತಿಯಾಗಿದೆ; ಅಣ್ಣನು ತಮ್ಮನನ್ನು ಕರುಣಿಸನು.


ಮೇಲಕ್ಕೆ ಕಣ್ಣೆತ್ತಿದರೂ ಭೂವಿುಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವವು; ಕಾರ್ಗತ್ತಲೆಗೆ ತಳ್ಳಲ್ಪಡುವರು.


ಮದ್ಯವನ್ನು ಗತಿಯಿಲ್ಲದವನಿಗೂ ದ್ರಾಕ್ಷಾರಸವನ್ನು ಮನೋವ್ಯಥೆಪಡುವವನಿಗೂ ಕೊಟ್ಟರೆ ಕೊಡು.


ನಮ್ಮ ಎತ್ತುಗಳು ದೊಡ್ಡ ಹೇರುಗಳನ್ನು ಹೊತ್ತು ಬರುವವು. ವೈರಿಗಳು ಒಳಗೆ ನುಗ್ಗುವದಾಗಲಿ ನಮ್ಮವರನ್ನು ಒಯ್ಯುವದಾಗಲಿ ಇರುವದಿಲ್ಲ; ಬೀದಿಗಳಲ್ಲಿ ಗೋಳಾಟವು ಕೇಳಿಸುವದಿಲ್ಲ.


ಯೆಹೂದವು ದುಃಖಿಸುತ್ತದೆ, ಅದರ ಊರುಗಳವರು ಕಂಗೆಟ್ಟು ಕರ್ರಗಾಗಿ ನೆಲದ ಮೇಲೆ ಬಿದ್ದಿದ್ದಾರೆ, ಯೆರೂಸಲೇವಿುನವರ ಗೋಳಾಟವು ಕೇಳಿಸುತ್ತದೆ.


ನಿನ್ನ ಅವಮಾನದ ಸುದ್ದಿಯು ಜನಾಂಗಗಳಿಗೆ ಕೇಳಬಂದಿದೆ, ನಿನ್ನ ಕೂಗಾಟವು ಲೋಕದಲ್ಲೆಲ್ಲಾ ತುಂಬಿದೆ; ವೀರನು ವೀರನನ್ನು ಎಡವಿ ಇಬ್ಬರೂ ಬಿದ್ದಿದ್ದಾರೆ.


ದ್ರಾಕ್ಷಾಲತೆಯು ಆಶಾಭಂಗಪಟ್ಟಿದೆ; ಅಂಜೂರದ ಗಿಡವು ಕ್ಷೀಣವಾಗಿದೆ; ದಾಳಿಂಬ, ಖರ್ಜೂರ, ಸೇಬು, ಅಂತು ಸಕಲ ವನವೃಕ್ಷಗಳು ಒಣಗಿವೆ, ಆನಂದವು ತಗ್ಗಿ ನರಜನ್ಮದವರಿಗೆ ತಪ್ಪಿಹೋಗಿದೆ.


ನಿರ್ಭೀತರೇ, ಒಂದು ವರುಷದ ಮೇಲೆ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ; ದ್ರಾಕ್ಷೆಯ ಕೊಯ್ಲು ಇಲ್ಲದೆ ಹೋಗುವದು, ಯಾವ ಬೆಳೆಯೂ ದೊರೆಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು