ಯೆಶಾಯ 24:23 - ಕನ್ನಡ ಸತ್ಯವೇದವು J.V. (BSI)23 ಮತ್ತು ಚಂದ್ರನು ನಾಚಿಕೆಪಡುವನು, ಸೂರ್ಯನು ಲಜ್ಜೆಗೊಳ್ಳುವನು; ಸೇನಾಧೀಶ್ವರನಾದ ಯೆಹೋವನು ಚೀಯೋನ್ ಪರ್ವತದಲ್ಲಿ ಯೆರೂಸಲೇವಿುನೊಳಗೆ ಆಳುವನಷ್ಟೆ. ಆತನ [ಪರಿವಾರದ] ಹಿರಿಯರ ಮುಂದೆ ಪ್ರಭಾವವು ಪ್ರತ್ಯಕ್ಷವಾಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆಮೇಲೆ ಚಂದ್ರನು ನಾಚಿಕೆಪಡುವನು, ಸೂರ್ಯನು ಲಜ್ಜೆಗೊಳ್ಳುವನು; ಸೇನಾಧೀಶ್ವರನಾದ ಯೆಹೋವನು ಚೀಯೋನ್ ಪರ್ವತದಲ್ಲಿ ಯೆರೂಸಲೇಮನ್ನು ಆಳುವನು. ಆತನ ಪರಿವಾರದ ಹಿರಿಯರ ಮುಂದೆ ಪ್ರಭಾವವು ಪ್ರತ್ಯಕ್ಷವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನಾಚುವನು ಚಂದ್ರ, ಹೇಸುವನು ಸೂರ್ಯ, ಏಕೆನೆ ಆಳುವರು ಸೇನಾಧೀಶ್ವರ ಸರ್ವೇಶ್ವರ ಸಿಯೋನ್ ಪರ್ವತದೊಳು, ಜೆರುಸಲೇಮ್ ನಗರದೊಳು. ಪ್ರತ್ಯಕ್ಷವಾಗುವುದಾತನ ಮಹಿಮಾಪ್ರಭಾವವು, ಅಲ್ಲಿನ ಜನನಾಯಕರ ಸಮ್ಮುಖದೊಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಯೆಹೋವನು ಜೆರುಸಲೇಮಿನ ಚೀಯೋನ್ ಪರ್ವತದಿಂದ ರಾಜ್ಯವನ್ನಾಳುವನು. ಆತನ ಮಹಿಮೆಯು ಹಿರಿಯರ ಮುಂದಿರುವದು. ಆತನ ಮಹಿಮೆಯ ಪ್ರಕಾಶಕ್ಕೆ ಚಂದ್ರನು ನಾಚಿಕೊಳ್ಳುವನು; ಸೂರ್ಯನು ಲಜ್ಜೆಗೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆಮೇಲೆ ಸೇನಾಧೀಶ್ವರ ಯೆಹೋವ ದೇವರು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಹಿರಿಯರ ಮುಂದೆ ಮಹಿಮೆಯಿಂದ ಆಳುವಾಗ, ಚಂದ್ರನಿಗೆ ಅವಮಾನವಾಗುವುದು, ಸೂರ್ಯನು ನಾಚಿಕೆ ಪಡುವನು. ಅಧ್ಯಾಯವನ್ನು ನೋಡಿ |