Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 24:4 - ಕನ್ನಡ ಸತ್ಯವೇದವು J.V. (BSI)

4 ಭೂವಿುಯು ಪ್ರಲಾಪಿಸುತ್ತಾ ಬಳಲಿದೆ, ಲೋಕವು ಕುಗ್ಗಿ ಹೋಗಿದೆ, ಲೋಕೋನ್ನತರು ಕಂಗೆಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಭೂಮಿಯು ಪ್ರಲಾಪಿಸುತ್ತಾ ಬಳಲಿದೆ, ಲೋಕವು ಕುಗ್ಗಿಹೋಗಿದೆ, ಲೋಕದ ಉನ್ನತರು ಕಂಗೆಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸೊರಗಿಹೋಗುವುದು ಲೋಕ ದುಃಖಿಸುತ್ತಾ ಕುಗ್ಗಿಹೋಗುವುದು ಬುವಿ ಗೋಳಾಡುತ್ತಾ ಕಂಗೆಟ್ಟುಹೋಗುವನು ಪ್ರತಿಯೊಬ್ಬ ವಿಶ್ವವಿಖ್ಯಾತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇಶವು ನಿರ್ಜನವಾಗಿ ಶೋಕಿಸುವದು. ಇಡೀ ಪ್ರಪಂಚವೇ ನಿರ್ಜನವಾಗಿ ಬಲಹೀನವಾಗುವದು. ಈ ಪ್ರಪಂಚದ ಪ್ರಸಿದ್ಧ ಜನರೂ ಬಲಹೀನರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಭೂಮಿಯು ಪ್ರಲಾಪಿಸುತ್ತಾ ಬಾಡಿಹೋಗುವುದು. ಲೋಕವು ಸೊರಗಿ ಬಾಡಿಹೋಗುವುದು. ಆಕಾಶವು ಭೂಮಿಯೊಂದಿಗೆ ಕುಗ್ಗಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 24:4
12 ತಿಳಿವುಗಳ ಹೋಲಿಕೆ  

ಹೀಗಿರಲು ದೇಶವು ನರಳುವದು, ಅದರಲ್ಲಿ ವಾಸಿಸುವ ಸಕಲ ಭೂಜಂತುಗಳೂ ಆಕಾಶಪಕ್ಷಿಗಳೂ ಬಳಲಿಹೋಗುವವು; ಸಮುದ್ರದ ಮೀನುಗಳು ಸಹ ನೀಗಿಹೋಗುವವು.


ದೇಶವು ಪ್ರಲಾಪಿಸಿ ಕುಗ್ಗುತ್ತದೆ, ಲೆಬನೋನ್ ನಾಚಿಕೊಂಡು ಒಣಗುತ್ತದೆ. ಶಾರೋನ್ ಬೆಂಗಾಡಾಗಿದೆ, ಬಾಷಾನ್ ಮತ್ತು ಕರ್ಮೆಲ್ [ತಳಿರುಗಳನ್ನು] ಉದುರಿಸಿಬಿಟ್ಟಿವೆ.


ಅವಳ ಪುರದ್ವಾರಗಳಲ್ಲಿ ಪ್ರಲಾಪವೂ ದುಃಖವೂ ತುಂಬಿರುವವು; ಅವಳು ಹಾಳಾಗಿ ನೆಲದ ಮೇಲೆ ಕೂತುಬಿಡುವಳು.


ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲು ಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವದರಿಂದ ಮೃಗಪಕ್ಷಿಗಳು ಬಡಿದುಕೊಂಡು ಹೋಗಿವೆ; ಆಹಾ, ಅವನು ನಮ್ಮ ಅಂತ್ಯಗತಿಯನ್ನು ನೋಡುವದೇ ಇಲ್ಲ ಎಂದು ಹೇಳಿದ್ದಾರಷ್ಟೆ.


ಇದಕ್ಕಾಗಿ ಭೂಲೋಕವು ಪ್ರಲಾಪಿಸುವದು, ಮೇಲೆ ಆಕಾಶವು ಕಪ್ಪಾಗುವದು; ನಾನು ನುಡಿದಿದ್ದೇನೆ, ಪಶ್ಚಾತ್ತಾಪಪಡೆನು; ಉದ್ದೇಶಿಸಿದ್ದೇನೆ, ಹಿಂದೆಗೆಯೆನು.


ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ತರಗೆಲೆಯೋಪಾದಿಯಲ್ಲಿ ಒಣಗಿ ಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.


ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತುಹೋದವರ ಫಲವತ್ತಾದ ತಗ್ಗಿಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಬಾಡುತ್ತಿರುವ ಹೂವಿನ ಪಾಡೇ!


ಭೂವಿುಯು ಬಟ್ಟಬರಿದಾಗುವದು, ಲೋಕಕ್ಕೆ ಸಂಪೂರ್ಣ ಸುಲಿಗೆಯಾಗುವದು; ಯೆಹೋವನೇ ಇದನ್ನು ನುಡಿದಿದ್ದಾನೆ.


ಆ ದಿನದಲ್ಲಿ ಯೆಹೋವನು ಆಕಾಶಮಂಡಲದ ದೂತಸೈನ್ಯವನ್ನೂ ಭೂಮಂಡಲದ ನೆಲದೊಡೆಯರನ್ನೂ ದಂಡಿಸುವನು.


ಯಾರೂ ಮಹೋತ್ಸವಗಳಿಗೆ ಬಾರದೆ ಇರುವದರಿಂದ ಚೀಯೋನಿಗೆ ಹೋಗುವ ದಾರಿಗಳು ಬಣಬಣ ಎನ್ನುತ್ತವೆ; ಅದರ ಬಾಗಿಲುಗಳೆಲ್ಲಾ ಹಾಳುಬಿದ್ದಿವೆ, ಅಲ್ಲಿನ ಯಾಜಕರು ನರಳಾಡುತ್ತಾರೆ; ಅಲ್ಲಿನ ಯುವತಿಯರು ವ್ಯಥೆಪಡುತ್ತಾರೆ, ನಗರಿಗೆ ನಗರಿಯೇ ಶೋಕಿಸುತ್ತದೆ.


ಹೊಲವು ಹಾಳಾಗಿದೆ, ದೇಶವು ದುಃಖಿಸುತ್ತದೆ, ಏಕಂದರೆ ಧಾನ್ಯವು ಸೂರೆಯಾಗಿದೆ, ದ್ರಾಕ್ಷಾರಸವು ತಗ್ಗಿದೆ, ಎಣ್ಣೆಯು ಕುಗ್ಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು