Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 24:7 - ಕನ್ನಡ ಸತ್ಯವೇದವು J.V. (BSI)

7 ದ್ರಾಕ್ಷಾರಸವು ವ್ಯಸನಭರಿತವಾಗಿದೆ, ದ್ರಾಕ್ಷೆಯ ಬಳ್ಳಿಯು ಬಾಡಿದೆ, ಹರ್ಷಹೃದಯರೆಲ್ಲಾ ನರಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದ್ರಾಕ್ಷಾರಸವು ಬತ್ತಿ ಹೋಗುವುದು, ದ್ರಾಕ್ಷಿಯ ಬಳ್ಳಿಯು ಕ್ಷೀಣಿಸುವುದು, ಹರ್ಷ ಹೃದಯರೆಲ್ಲಾ ನರಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬಾಡಿಹೋಗಿದೆ ದ್ರಾಕ್ಷಾಲತೆ, ದುಬಾರಿಯಾಗಿದೆ ದ್ರಾಕ್ಷಾರಸ, ನರಳುತಿದೆ ನಲಿಯುತ್ತಿದ್ದ ಜನಸಮೂಹ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದ್ರಾಕ್ಷಿಬಳ್ಳಿಗಳು ಸಾಯುತ್ತಲಿವೆ. ಹೊಸ ದ್ರಾಕ್ಷಾರಸವು ಹುಳಿಯಾಗಿದೆ. ಹಿಂದಿನ ಕಾಲದಲ್ಲಿ ಜನರು ಹರ್ಷಭರಿತರಾಗಿದ್ದರು. ಆದರೆ ಈಗ ಆ ಜನರು ದುಃಖದಲ್ಲಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದ್ರಾಕ್ಷಾರಸವು ಬತ್ತಿಹೋಗುವುದು, ದ್ರಾಕ್ಷಿಯು ಬಾಡುವುದು. ಹರ್ಷ ಹೃದಯರೆಲ್ಲಾ ನಿಟ್ಟುಸಿರುಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 24:7
7 ತಿಳಿವುಗಳ ಹೋಲಿಕೆ  

ಹರ್ಷಾನಂದಗಳು ತೋಟಗಳಿಂದ ತೊಲಗಿವೆ, ದ್ರಾಕ್ಷೆಯ ತೋಟಗಳಲ್ಲಿ ಉತ್ಸಾಹಧ್ವನಿಯೂ ಉಲ್ಲಾಸದ ಆರ್ಭಟವೂ ಇರುವದಿಲ್ಲ, ತುಳಿಯುವವರು ತೊಟ್ಟಿಗಳಲ್ಲಿ ದ್ರಾಕ್ಷಾರಸವನ್ನು ತುಳಿದು ತೆಗೆಯುವದಿಲ್ಲ, ಅವರ ಕೂಗನ್ನು ನಿಲ್ಲಿಸಿಬಿಟ್ಟಿದ್ದೇನೆ.


ಹೆಷ್ಬೋನಿನ ಭೂವಿುಯೂ ಸಿಬ್ಮದ ದ್ರಾಕ್ಷಾಲತೆಯೂ ನಿಸ್ಸಾರವಾಗಿವೆ; ಯಜ್ಜೇರಿನವರೆಗೆ ವ್ಯಾಪಿಸಿ ಅರಣ್ಯದಲ್ಲಿ ಹಬ್ಬಿ ಸಮುದ್ರದಾಚೆಗೆ ಸೇರುವಷ್ಟು ವಿಶಾಲವಾಗಿ ತನ್ನ ಶಾಖೆಗಳನ್ನು ಹರಡಿಕೊಂಡಿದ್ದ ಮೋವಾಬಿನ ರಾಜ ದ್ರಾಕ್ಷೆಗಳನ್ನು ಜನಾಂಗಗಳ ಒಡೆಯರು ಮುರಿದು ಬಿಟ್ಟಿದ್ದಾರೆ.


ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇವಿುನ ಬೀದಿಗಳಲ್ಲಿಯೂ ಹರ್ಷಸಂಭ್ರಮಗಳ ಧ್ವನಿಯನ್ನೂ ವಧೂವರರ ಸ್ವರವನ್ನೂ ನಿಲ್ಲಿಸಿಬಿಡುವೆನು, ದೇಶವು ಹಾಳೇ ಹಾಳಾಗುವದು. ಇದು ಯೆಹೋವನ ನುಡಿ.


ನಾನು ಅವರ ಮೇಲೆ ಕೈಯತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಅರಣ್ಯದಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು