ಯೆಶಾಯ 25:4 - ಕನ್ನಡ ಸತ್ಯವೇದವು J.V. (BSI)4 ನೀನು ದೀನರಿಗೆ ಕೋಟೆ, ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣದುರ್ಗ, ಬಿಸಿಲಿಗೆ ನೆರಳು, ಭೀಕರರ ಶ್ವಾಸವು ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನೀನು ದೀನರಿಗೆ ಕೋಟೆಯು, ಇಕ್ಕಟ್ಟಿನಲ್ಲಿ ದಿಕಿಲ್ಲದವರಿಗೆ ರಕ್ಷಣಾದುರ್ಗವೂ, ಬಿಸಿಲಿಗೆ ನೆರಳೂ, ಭೀಕರರ ಶ್ವಾಸವು ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ದುರ್ಗವಾಗಿರುವೆ ನೀನು ದೀನದಲಿತರಿಗೆ, ಸುರಕ್ಷಿತ ಕೋಟೆಯಾಗಿರುವೆ ದಟ್ಟದರಿದ್ರರಿಗೆ, ನೆರಳಾಗಿರುವೆ ಬಿಸಿಲೊಳು ಬೆಂದವರಿಗೆ. ಕ್ರೂರಿಗಳ ಹೊಡೆತ ಚಳಿಗಾಲದ ಚಂಡಮಾರುತವಾಗಿರೆ, ಬಿರುಗಾಳಿಯ ಆ ಬಡಿತಕೆ ನೀನಾದೆ ಆಸರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೆಹೋವನೇ, ನೀನೇ ನಮ್ಮ ಆಶ್ರಯವು. ಬಡವರಿಗೆ ನೀನೇ ಆಧಾರ. ಅವರ ಸಮಸ್ಯೆಗಳು ಅವರನ್ನು ಕಷ್ಟಕ್ಕೆ ಗುರಿಪಡಿಸುವವು. ಆದರೆ ನೀನು ಅವರನ್ನು ಸಂರಕ್ಷಿಸುವೆ. ಯೆಹೋವನೇ, ಒಂದು ಮನೆಯ ಜನರನ್ನು ಪ್ರವಾಹದಿಂದಲೂ, ಬಿಸಿಲಿನ ತಾಪದಿಂದಲೂ ಕಾಪಾಡುವಂತೆ ನೀನಿರುವೆ. ಮುಂದಿನ ತೊಂದರೆಗಳು ಬಿರುಗಾಳಿಯಂತೆಯೂ ಮಳೆಯಂತೆಯೂ ಇವೆ. ಮಳೆಯು ಗೋಡೆಗೆ ಬಡಿದು ಕೆಳಗೆ ಇಳಿಯುವದು. ಆದರೆ ಮನೆಯೊಳಗಿರುವವರಿಗೆ ಹಾನಿಯೇ ಆಗದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನೀವು ದೀನರಿಗೆ ಕೋಟೆಯೂ, ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ, ಭೀಕರರ ಶ್ವಾಸವು ಬಿಸಿಲಿಗೆ ನೆರಳೂ, ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋಸ್ಕರ ಆಶ್ರಯವೂ ಆಗಿದ್ದೀರಿ. ಅಧ್ಯಾಯವನ್ನು ನೋಡಿ |