Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 25:7 - ಕನ್ನಡ ಸತ್ಯವೇದವು J.V. (BSI)

7 ಮತ್ತು ಸಮಸ್ತ ಜನಾಂಗಗಳನ್ನು ಮುಚ್ಚಿರುವ ಮುಸುಕನ್ನೂ ಸಕಲ ದೇಶೀಯರ ಮೇಲೆ ಹಾಕಿರುವ ತೆರೆಯನ್ನೂ ಇದೇ ಪರ್ವತದಲ್ಲಿ ನಾಶಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸಮಸ್ತ ಜನಾಂಗಗಳನ್ನು ಮುಚ್ಚಿರುವ ಮುಸುಕನ್ನೂ, ಸಕಲ ದೇಶದವರ ಮೇಲೆ ಹಾಕಿರುವ ತೆರೆಯನ್ನೂ ಇದೇ ಪರ್ವತದಲ್ಲಿ ತೆಗೆದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸಮಸ್ತ ರಾಷ್ಟ್ರಗಳನ್ನು ಆವರಿಸಿರುವ ಮುಸುಕನ್ನೂ ಸಕಲ ದೇಶಗಳನ್ನು ಮುಚ್ಚಿರುವ ತೆರೆಯನ್ನೂ ಇದೇ ಪರ್ವತದಲ್ಲಿ ನಾಶಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಎಲ್ಲಾ ಜನಾಂಗಗಳನ್ನು ಮತ್ತು ಜನರನ್ನು ಮುಚ್ಚುವ ಒಂದು ಮುಸುಕು ಇದೆ. ಆ ಮುಸುಕು ಯಾವದೆಂದರೆ ಮರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಸಮಸ್ತ ಜನಾಂಗಗಳನ್ನು ಮುಚ್ಚಿರುವ ಪರದೆಯನ್ನೂ, ಸಕಲ ದೇಶದವರ ಮೇಲೆ ಹರಡಿರುವ ತೆರೆಯನ್ನೂ ಇದೇ ಪರ್ವತದಲ್ಲಿ ತೆಗೆದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 25:7
12 ತಿಳಿವುಗಳ ಹೋಲಿಕೆ  

ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ; ಅವರ ಮನಸ್ಸು ಮೊಬ್ಬಾಗಿ ಹೋಗಿದೆ, ಅವರು ತಮ್ಮ ಹೃದಯದ ಕಾಠಿಣ್ಯದ ನಿವಿುತ್ತದಿಂದಲೂ ತಮ್ಮಲ್ಲಿರುವ ಅಜ್ಞಾನದ ನಿವಿುತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ.


ಆಗ ಇಗೋ ದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು;


ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕ್ರಿಸ್ತನಲ್ಲಿದ್ದು ಬೆಳಕಾಗಿದ್ದೀರಿ.


ಆ ಅಜ್ಞಾನಕಾಲಗಳನ್ನು ದೇವರು ಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಾನೆ.


ಯಾಕಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಅನುರೂಪ ಮಾತ್ರವಾದದ್ದಾಗಿಯೂ ಕೈಯಿಂದ ಕಟ್ಟಿದ್ದಾಗಿಯೂ ಇರುವ ಆಲಯದಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳುವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.


ಆತನು ಅನ್ಯದೇಶದವರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಯಾದ ಇಸ್ರಾಯೇಲ್ಯರಿಗೆ ಕೀರ್ತಿ, ಅಂದನು.


ಈ ಏರ್ಪಾಟಿನಿಂದ ಗುಡಾರದಲ್ಲಿ ಮುಂದಣ ಭಾಗವು ಇರುವ ತನಕ ದೇವರ ಸಮಕ್ಷಮಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಲಿಲ್ಲವೆಂಬದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.


ಹೀಗೆ ಬಹು ದೇಶಗಳವರೂ ಬಲವಾದ ಜನಾಂಗಗಳವರೂ ಯೆರೂಸಲೇವಿುನಲ್ಲಿ ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವದಕ್ಕೂ ಯೆಹೋವನ ಪ್ರಸನ್ನತೆಯನ್ನು ಬೇಡುವದಕ್ಕೂ ಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು