Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 25:8 - ಕನ್ನಡ ಸತ್ಯವೇದವು J.V. (BSI)

8 ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರೆಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮರಣವನ್ನು ಶಾಶ್ವತವಾಗಿ ನಿರ್ನಾಮಮಾಡುವರು. ಸರ್ವೇಶ್ವರ ಸ್ವಾಮಿ ಎಲ್ಲರ ಕಣ್ಣೀರನ್ನು ಒರೆಸಿಬಿಡುವರು. ತಮ್ಮ ಪ್ರಜೆಗಾದ ಅವಮಾನವನ್ನು ಜಗದಿಂದಲೇ ತೊಲಗಿಸಿಬಿಡುವರು. ಸರ್ವೇಶ್ವರ ಸ್ವಾಮಿಯೇ ಇಂತೆಂದು ನುಡಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಮರಣವು ಎಂದೆಂದಿಗೂ ನಾಶಮಾಡಲ್ಪಡುವದು. ನನ್ನ ಒಡೆಯನಾಗಿರುವ ಯೆಹೋವನು ಪ್ರತೀ ಮುಖದಲ್ಲಿರುವ ಕಣ್ಣೀರನ್ನು ಒರೆಸುವನು. ಹಿಂದೆ ಆತನ ಜನರೆಲ್ಲಾ ದುಃಖಕ್ಕೆ ಒಳಗಾಗಿದ್ದರು. ಆದರೆ ದೇವರು ಆ ದುಃಖವನ್ನು ಈ ಭೂಮಿಯಿಂದಲೇ ತೆಗೆದುಹಾಕುವನು. ಇವೆಲ್ಲಾ ಯೆಹೋವನು ಹೇಳಿದಂತೆಯೇ ಸಂಭವಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ಮರಣವನ್ನು ಜಯದಲ್ಲಿ ನುಂಗಿಬಿಡುವರು. ಸಾರ್ವಭೌಮ ಯೆಹೋವ ದೇವರು ಎಲ್ಲಾ ಮುಖಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವರು. ತಮ್ಮ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕುವರು. ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 25:8
28 ತಿಳಿವುಗಳ ಹೋಲಿಕೆ  

ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣವಿರುವದಿಲ್ಲ, ಇನ್ನು ದುಃಖವಾಗಲಿ ಗೋಳಾಟವಾಗಲಿ ಕಷ್ಟವಾಗಲಿ ಇರುವದಿಲ್ಲ; ಮೊದಲಿದ್ದದ್ದೆಲ್ಲಾ ಇಲ್ಲದೆ ಹೋಯಿತು ಎಂದು ಹೇಳಿತು.


ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ನಡಿಸುತ್ತಾನೆ. ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.


ಲಯವಾಗುವ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಂಡಾಗ ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಂಡಾಗ ಬರೆದಿರುವ ಮಾತು ನೆರವೇರುವದು. ಆ ಮಾತು ಏನಂದರೆ - ಮರಣವು ನುಂಗಿಯೇ ಹೋಯಿತು, ಜಯವಾಯಿತು ಎಂಬದೇ.


ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳೆಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು.


ಮರಣವು ಕಡೇ ಶತ್ರುವಾಗಿ ನಿವೃತ್ತಿಯಾಗುವದು.


ಆಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಆ ಬೆಂಕಿಯ ಕೆರೆಯೇ ಎರಡನೆಯ ಮರಣವು.


ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು; ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.


ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ ಈಗ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಾಶಪಡಿಸಿದ್ದಾನೆ. ಈತನು ಮರಣವನ್ನು ನಿವೃತ್ತಿಮಾಡಿ ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವವನ್ನೂ ಪ್ರಕಾಶಗೊಳಿಸಿದನು.


ಇದಲ್ಲದೆ ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನ ಗಾಯವನ್ನು ಗುಣಮಾಡುವ ದಿವಸದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವದು, ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಿ ಏಳು ದಿನಗಳ ಬೆಳಕಿನಂತಾಗುವದು.


ನೀವು ಕ್ರಿಸ್ತನ ಹೆಸರಿನ ನಿವಿುತ್ತ ನಿಂದೆಗೆ ಗುರಿಯಾದರೆ ಧನ್ಯರೇ; ತೇಜೋಮಯವಾದ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ.


ನಿಮಗಾದ ಅವಮಾನಕ್ಕೆ ಬದಲಾಗಿ ಎರಡರಷ್ಟು ಮಾನವನ್ನು ಹೊಂದುವಿರಿ; ನಾಚಿಕೆಪಟ್ಟದ್ದಕ್ಕೆ ಪ್ರತಿಯಾಗಿ ಇವರು ತಮ್ಮ ಸ್ವಾಸ್ತ್ಯದಲ್ಲಿ ಹಿಗ್ಗುವರು; ಹೀಗೆ ತಮ್ಮ ದೇಶದಲ್ಲಿ ಎರಡರಷ್ಟನ್ನು ಅನುಭವಿಸುವರು; ಇವರಿಗೆ ಶಾಶ್ವತ ಸಂತೋಷವಾಗುವದು.


ಹೆದರಬೇಡ, ನಿನಗೆ ಅವಮಾನವಾಗುವದಿಲ್ಲ, ನಾಚಿಕೆಪಡದಿರು, ನಿನಗೆ ಆಶಾಭಂಗವಾಗದು; ಯೌವನದಲ್ಲಿ ನಿನಗಾದ ಅವಮಾನವನ್ನು ಮರೆತುಬಿಡುವಿ, ವೈಧವ್ಯದಲ್ಲಿ ನಿನಗೆ ಸಂಭವಿಸಿದ ನಿಂದೆಯು ಇನ್ನು ನಿನ್ನ ನೆನಪಿಗೆ ಬಾರದು.


ಯೆರೂಸಲೇವಿುನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವದೇ ಇಲ್ಲ; ನೀವು ಕೂಗಿಕೊಂಡ ಶಬ್ದವನ್ನು ಆತನು ಕೇಳಿ ನಿಮಗೆ ಕೃಪೆತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು.


ನಿನ್ನ ಆಲಯಾಭಿಮಾನವು ನನ್ನನ್ನು ಬೆಂಕಿಯಂತೆ ದಹಿಸಿದೆ. ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಂದಿವೆ.


ನಾನೂ ಯೆರೂಸಲೇಮನ್ನು ದೃಷ್ಟಿಸುತ್ತಾ ಉಲ್ಲಾಸಿಸುವೆನು, ಅದರ ಜನರನ್ನು ಈಕ್ಷಿಸುತ್ತಾ ಹರ್ಷಗೊಳ್ಳುವೆನು. ರೋದನಶಬ್ದವೂ ಪ್ರಲಾಪಧ್ವನಿಯೂ ಅಲ್ಲಿ ಇನ್ನು ಕೇಳಿಸವು.


ನಿವಾಸಿಗಳು ಬಿಟ್ಟು ಬಿಟ್ಟ, ದ್ವೇಷಕ್ಕೀಡಾದ, ಯಾರೂ ಹಾದು ಹೋಗದ ನಿನಗೆ ನಾನು ನಿತ್ಯಶ್ರೇಷ್ಠತೆಯನ್ನು ದಯಪಾಲಿಸಿ ನಿನ್ನನ್ನು ತಲತಲಾಂತರಗಳವರಿಗೆ ಉಲ್ಲಾಸಕರವಾಗುವಂತೆ ಮಾಡುವೆನು.


ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು; ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.


ಅವರು ಅದರಂತೆ ಯೆಶಾಯನ ಬಳಿಯಲ್ಲಿ - ಈ ದಿವಸದಲ್ಲಿ ನಮಗೆ ಮಹಾಕಷ್ಟವೂ ಶಿಕ್ಷೆಯೂ ನಿಂದೆಯೂ ಸಂಭವಿಸಿರುತ್ತದೆ. ಹೆರಿಗೆಯ ಕಾಲ ಬಂದದೆ; ಆದರೆ ಹೆರುವದಕ್ಕೆ ಬಲ ಸಾಲದು.


ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು - ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವದು.


ಕರ್ತನು ಈ ಕಾಲದಲ್ಲಿ ನನ್ನನ್ನು ಪರಾಮರಿಸಿ ನನಗೆ ಈ ರೀತಿಯಾಗಿ ಮಾಡಿ ಜನರಲ್ಲಿ ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನಲ್ಲಾ ಅನ್ನುತ್ತಿದ್ದಳು.


ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಜೀವದಿಂದೇಳುವವು, ಮಣ್ಣಿನಲ್ಲಿ ಪವಳಿಸಿರುವವರೇ, ಎಚ್ಚತ್ತು ಹರ್ಷಧ್ವನಿಗೈಯಿರಿ! [ಯೆಹೋವನೇ,] ನೀನು ಸುರಿಯುವ ಇಬ್ಬನಿಯು ಜ್ಯೋತಿರ್ಮಯವಾದದ್ದು, ಭೂವಿುಯು ಸತ್ತವರನ್ನು ಹೊರಪಡಿಸುವದು.


ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ, ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ. ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವದು, ಹುಳವು ಅವರನ್ನು ಉಣ್ಣೆಯಂತೆ ಮೆದ್ದುಬಿಡುವದು;


ಯೆಹೋವನು ಇಂತೆನ್ನುತ್ತಾನೆ - ನಿನ್ನ ಧ್ವನಿಯು ಗೋಳಾಗದಿರಲಿ, ನಿನ್ನ ಕಣ್ಣು ನೀರು ಸುರಿಸದಿರಲಿ; ನಿನ್ನ ಪ್ರಯಾಸವು ಸಾರ್ಥಕವಾಗುವದು; ಇದು ಯೆಹೋವನ ನುಡಿ; ನಿನ್ನ ಮಕ್ಕಳು ಶತ್ರುವಿನ ದೇಶದಿಂದ ಹಿಂದಿರುಗುವರು;


ಯೆಹೋವನೇ, ನಾನು ಜೀವಲೋಕದಲ್ಲಿದ್ದು ನಿನಗೆ ನಡೆದುಕೊಳ್ಳಬೇಕೆಂದು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು