ಯೆಶಾಯ 25:9 - ಕನ್ನಡ ಸತ್ಯವೇದವು J.V. (BSI)9 ಆ ದಿನದಲ್ಲಿ ಜನರು - ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನೇ ಯೆಹೋವನು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ, ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು ಎಂದು ಹೇಳಿಕೊಳ್ಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆ ದಿನದಲ್ಲಿ ಜನರು, “ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು” ಎಂದು ಹೇಳಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇದು ನೆರವೇರಿದಾಗ ಜನರು : “ಇವರೇ ನಮ್ಮ ದೇವರು; ನಮ್ಮನ್ನು ರಕ್ಷಿಸುವರೆಂದು ಇವರನ್ನೇ ನೆಚ್ಚಿಕೊಂಡಿದ್ದೆವು ಇವರೇ ಸರ್ವೇಶ್ವರ; ಇವರನ್ನೇ ನೆಚ್ಚಿಕೊಂಡಿದ್ದೆವು. ಇವರು ನೀಡುವ ರಕ್ಷಣೆಯಲ್ಲಿ ಆನಂದಿಸೋಣ !” ಎಂದು ಹೇಳಿಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆ ಸಮಯದಲ್ಲಿ ಜನರು, “ನಮ್ಮ ದೇವರು ಇಲ್ಲಿದ್ದಾನೆ. ಆತನಿಗಾಗಿಯೇ ನಾವು ಕಾಯುತ್ತಿದ್ದೆವು. ಆತನು ನಮ್ಮನ್ನು ರಕ್ಷಿಸಲು ಬಂದಿದ್ದಾನೆ. ನಾವು ನಮ್ಮ ದೇವರಾದ ಯೆಹೋವನಿಗಾಗಿ ಕಾಯುತ್ತಿದ್ದೆವು. ಆತನು ನಮ್ಮನ್ನು ರಕ್ಷಿಸುವಾಗ ನಾವು ಹರ್ಷಭರಿತರಾಗಿ ಸಂತೋಷಿಸುವೆವು” ಎಂದು ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆ ದಿನದಲ್ಲಿ ಜನರು, “ಇಗೋ, ಇವರೇ ನಮ್ಮ ದೇವರು, ನಾವು ಇವರನ್ನೇ ನಂಬಿದ್ದೇವೆ. ಇವರೇ ನಮ್ಮನ್ನು ರಕ್ಷಿಸುವರು. ಇವರೇ ಯೆಹೋವ ದೇವರು, ನಾವು ಇವರನ್ನೇ ನಂಬಿದ್ದೇವೆ, ನಾವು ಇವರ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷಪಡುವೆವು,” ಎಂದು ಹೇಳುವರು. ಅಧ್ಯಾಯವನ್ನು ನೋಡಿ |