Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 26:20 - ಕನ್ನಡ ಸತ್ಯವೇದವು J.V. (BSI)

20 ನನ್ನ ಜನರೇ, ಬನ್ನಿರಿ, ನಿಮ್ಮ ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಿಲು ಮುಚ್ಚಿಕೊಳ್ಳಿರಿ; ದೈವರೋಷವು ತೀರುವ ತನಕ ಒಂದು ಕ್ಷಣ ಅವಿತುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನನ್ನ ಜನರೇ, ಬನ್ನಿರಿ, ನಿಮ್ಮ ನಿಮ್ಮ ಕೋಣೆಗಳಲ್ಲಿ ಸೇರಿಕೊಂಡು ಬಾಗಿಲುಗಳನ್ನು ಮುಚ್ಚಿಕೊಳ್ಳಿರಿ; ದೈವರೋಷವು ತೀರುವ ತನಕ ಒಂದು ಕ್ಷಣ ಅವಿತುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನನ್ನ ಜನರೇ, ಹೋಗಿ; ನಿಮ್ಮ ನಿಮ್ಮ ಮನೆಗಳನ್ನು ಸೇರಿ ಬಾಗಿಲು ಮುಚ್ಚಿಕೊಳ್ಳಿ. ದೇವರ ಕೋಪ ತೀರುವತನಕ ಕೊಂಚಕಾಲ ಅವಿತುಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನನ್ನ ಜನರೇ, ನಿಮ್ಮ ನಿಮ್ಮ ಕೋಣೆಯೊಳಗೆ ಹೋಗಿ ಕದಮುಚ್ಚಿರಿ. ಸ್ವಲ್ಪಕಾಲ ನೀವು ಅಲ್ಲಿಯೇ ಅಡಗಿಕೊಳ್ಳಿರಿ. ದೇವರ ಕೋಪ ತೀರುವ ತನಕ ಅಲ್ಲಿಯೇ ಅವಿತುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನನ್ನ ಜನರೇ, ಹೋಗಿರಿ. ನಿಮ್ಮ ಕೋಣೆಗಳಲ್ಲಿ ಸೇರಿ, ಬಾಗಿಲನ್ನು ಮುಚ್ಚಿಕೊಳ್ಳಿರಿ. ಸ್ವಲ್ಪ ಹೊತ್ತು ರೋಷವು ಹಾದುಹೋಗುವ ತನಕ ಅಡಗಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 26:20
34 ತಿಳಿವುಗಳ ಹೋಲಿಕೆ  

ಆತನ ಕೋಪವು ಕ್ಷಣಮಾತ್ರವೇ; ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವದು; ಸಂಜೆಗೆ ದುಃಖವೆಂಬದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ ಮುಂಜಾನೆ ಹರ್ಷಧ್ವನಿಯು ಕೇಳಿಸುವದು.


ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು; ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು; ಪರ್ವತಾಗ್ರದಲ್ಲಿ ನನ್ನನ್ನು ಸುರಕ್ಷಿತವಾಗಿ ಇರಿಸುವನು.


ಆದರೆ ನೀನು ಪ್ರಾರ್ಥನೆಮಾಡಬೇಕಾದರೆ ನಿನ್ನ ಏಕಾಂತವಾದ ಕೋಣೆಯೊಳಗೆ ಹೋಗಿ ಬಾಗಲನ್ನು ಮುಚ್ಚಿಕೊಂಡು ಅಂತರಂಗದಲ್ಲಿಯೂ ಇರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಅಂತರಂಗದಲ್ಲಿ ನಡೆಯುವದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.


ಆತನು ನಿನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸುವನು; ಆತನ ಪಕ್ಕಗಳ ಮರೆಯನ್ನು ಆಶ್ರಯಿಸಿಕೊಳ್ಳುವಿ. ಆತನ ಸತ್ಯತೆಯೇ ನಿನಗೆ ಖೇಡ್ಯವೂ ಗುರಾಣಿಯೂ ಆಗಿದೆ.


ಯೆಹೋವನ ನಾಮವು ಬಲವಾದ ಬುರುಜು; ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು.


ನನ್ನನ್ನು ಸುತ್ತಿಕೊಂಡು ಬಾಧಿಸುತ್ತಿರುವ ದುಷ್ಟರಿಂದಲೂ ಪ್ರಾಣವೈರಿಗಳಿಂದಲೂ ತಪ್ಪಿಸಿ


ಹೇಗಂದರೆ ಕ್ಷಣಮಾತ್ರವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕವಾದ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಗೌರವವಾದ ಪ್ರಭಾವವನ್ನು ದೊರಕಿಸುತ್ತದೆ.


ಬಹು ಸ್ವಲ್ಪ ಕಾಲದೊಳಗೆ [ನಿಮ್ಮ ಮೇಲಿನ] ಉಗ್ರವು ತೀರಿ ನನ್ನ ಕೋಪವು ಅವರ ನಾಶನಕ್ಕಾಗುವದು.


ನೀನೇ ನನಗೆ ಮರೆಯು; ನಿರಪಾಯವಾಗಿ ನನ್ನನ್ನು ಕಾಯುವಿ; ವಿಮೋಚನಧ್ವನಿಯಿಂದ ನನ್ನನ್ನು ಆವರಿಸಿಕೊಳ್ಳುತ್ತೀ. ಸೆಲಾ.


ನನ್ನ ಜನರೇ, ಆಲಿಸಿರಿ! ನನ್ನ ಪ್ರಜೆಗಳೇ, ಕಿವಿಗೊಡಿರಿ! ಧರ್ಮೋಪದೇಶವು ನನ್ನಿಂದ ಹೊರಡುವದು, ನನ್ನ ನ್ಯಾಯಬೋಧನೆಯನ್ನು ಜನಾಂಗಗಳಿಗೆ ಬೆಳಕನ್ನಾಗಿ ಸ್ಥಾಪಿಸುವೆನು.


ಪರಾತ್ಪರನ ಮರೆಹೊಕ್ಕಿರುವವನು ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.


ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ ಅವರನ್ನು ನಿನ್ನ ಸಾನ್ನಿಧ್ಯದಲ್ಲಿಯೇ ಮರೆಮಾಡುತ್ತೀ; ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ಗೋಪ್ಯಸ್ಥಳದಲ್ಲಿ ಅಡಗಿಸುತ್ತೀ.


ಆದಕಾರಣ ನೀನು ಹೀಗೆ ಸಾರು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಅವರನ್ನು ದೂರವಾಗಿ ತೊಲಗಿಸಿ ಜನಾಂಗಗಳಲ್ಲಿ ಅನ್ಯದೇಶಗಳೊಳಗೆ ಚದರಿಸಿದರೂ ಅವರು ಸೇರಿರುವ ದೇಶಗಳಲ್ಲಿಯೇ ನಾನು ಕೊಂಚ ಕಾಲದ ಮಟ್ಟಿಗೆ ಅವರಿಗೆ ಪವಿತ್ರಾಲಯವಾಗಿರುವೆನು.


ಆಕಾಶವನ್ನು ನಿಲ್ಲಿಸಬೇಕೆಂತಲೂ ಭೂಲೋಕವನ್ನು ಸ್ಥಾಪಿಸಬೇಕೆಂತಲೂ ಚೀಯೋನಿಗೆ ನೀನು ನನ್ನ ಜನವೆಂದು ಹೇಳಬೇಕೆಂತಲೂ ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟು ನನ್ನ ಕೈಯ ನೆರಳಿನಲ್ಲಿ ನಿನ್ನನ್ನು ಹುದುಗಿಸಿದ್ದೇನೆ.


ಯೆಹೋವನೇ, ನಿನ್ನನ್ನೇ ಮರೆಹೊಕ್ಕಿದ್ದೇನೆ; ಶತ್ರುಗಳಿಂದ ನನ್ನನ್ನು ಬಿಡಿಸು.


ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.


ಆಗ ಯೆಹೋವನು ನೋಹನಿಗೆ - ನೀನೂ ನಿನ್ನ ಮನೆಯವರೆಲ್ಲರೂ ನಾವೆಯಲ್ಲಿ ಸೇರಿರಿ; ಈಗಿನವರಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿ ನಡೆಯುವದನ್ನು ನೋಡಿದ್ದೇನೆ.


ಯಾಜಕರನ್ನು ಮೃಷ್ಟಭೋಜನದಿಂದ ತಂಪುಗೊಳಿಸುವೆನು; ನಾನು ಅನುಗ್ರಹಿಸುವ ಮೇಲುಗಳನ್ನು ನನ್ನ ಜನರು ಸಮೃದ್ಧಿಯಾಗಿ ಅನುಭವಿಸುವರು. ಇದು ಯೆಹೋವನ ನುಡಿ.


ದೇವರು ನೋಹನಿಗೆ ಅಪ್ಪಣೆಕೊಟ್ಟಂತೆ ಎಲ್ಲಾ ಪ್ರಾಣಿಗಳಲ್ಲಿ ಒಂದು ಗಂಡು ಒಂದು ಹೆಣ್ಣು ಈ ಮೇರೆಗೆ ಸೇರಿದವು. ಯೆಹೋವನು ನೋಹನನ್ನು ಒಳಗಿಟ್ಟು ಮುಚ್ಚಿದನು.


ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಕೂಡಿಸಿಕೊಳ್ಳುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿಮಗೆ ಮನಸ್ಸಿಲ್ಲದೆ ಹೋಯಿತು.


ಆದರೆ ಈ ಒಂದಪ್ಪಣೆಯನ್ನು ಮಾತ್ರ ಕೊಟ್ಟೆನು - ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ.


ನೀನು ನನ್ನನ್ನು ಪಾತಾಳದಲ್ಲಿ ಬಚ್ಚಿಟ್ಟು ನಿನ್ನ ಕೋಪವು ಇಳಿಯುವ ಪರ್ಯಂತ ನನ್ನನ್ನು ಮರೆಮಾಡಿ ನನಗೆ ಅವಧಿಯನ್ನು ಗೊತ್ತುಮಾಡಿ [ಕಡೆಯಲ್ಲಿ] ನನ್ನನ್ನು ಜ್ಞಾಪಿಸಿಕೊಂಡರೆ ಎಷ್ಟೋ ಒಳ್ಳೇದು!


ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು; ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.


ಆಹಾ, ಅಶ್ಶೂರವೇ, ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೋಷವೇ!


ಯೆಹೋವನೂ ಆತನ ರೋಷಕ್ಕೆ ಆಯುಧಗಳಾದವರೂ ದೂರ ದೇಶದಿಂದ, ಅಂದರೆ ಆಕಾಶಮಂಡಲದ ಕಟ್ಟಕಡೆಯಿಂದ, ಭೂವಿುಯನ್ನೆಲ್ಲಾ ಹಾಳುಮಾಡುವದಕ್ಕಾಗಿ ಬಂದಿದ್ದಾರೆ.


ಯೆಹೋವನು ಸಕಲ ಜನಾಂಗಗಳಲ್ಲಿ ಕೋಪಮಾಡಿ ಅವುಗಳ ಸೈನ್ಯದ ಮೇಲೆ ರೋಷಗೊಂಡು ಅವರನ್ನು ಕೊಲೆಗೆ ಈಡುಮಾಡಿ ನಿಶ್ಶೇಷವಾಗಿ ಸಂಹರಿಸಿದ್ದಾನಷ್ಟೆ.


ನೀವು ಇದನ್ನು ಕಣ್ಣಾರೆ ಕಾಣುವಿರಿ, ನಿಮ್ಮ ಹೃದಯವು ಉಲ್ಲಾಸಿಸುವದು, ನಿಮ್ಮ ಎಲುಬುಗಳು ಹಸಿಹುಲ್ಲಿನಂತೆ ರಸವತ್ತಾಗುವವು; ಆಗ ಯೆಹೋವನು ತನ್ನ ಸೇವಕರ ಮೇಲೆ ಕೃಪಾಹಸ್ತವನ್ನು ವ್ಯಕ್ತಪಡಿಸಿ ತನ್ನ ಶತ್ರುಗಳ ಮೇಲೆ ರೋಷಗೊಳ್ಳುವನು.


ರಾಜನು ಮನಸ್ಸುಬಂದ ಹಾಗೆ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಉಬ್ಬಿ ದೇವಾಧಿದೇವನನ್ನು ವಿುತಿಮೀರಿ ದೂಷಿಸಿ [ನಿಮ್ಮ ಮೇಲಿನ] ದೇವೋಗ್ರವು ತೀರುವ ತನಕ ವೃದ್ಧಿಯಾಗಿರುವನು; ದೈವಸಂಕಲ್ಪವು ನೆರವೇರಲೇಬೇಕು.


ಯೆಹೋವನ ನಿಯಮವನ್ನು ಕೈಕೊಂಡ ಲೋಕದ ದೀನರೇ, ನೀವೆಲ್ಲರೂ ಯೆಹೋವನನ್ನು ಆಶ್ರಯಿಸಿರಿ, ಸದ್ಧರ್ಮವನ್ನು ಅಭ್ಯಾಸಿಸಿರಿ, ದೈನ್ಯವನ್ನು ಹೊಂದಿಕೊಳ್ಳಿರಿ; ಯೆಹೋವನ ಸಿಟ್ಟಿನ ದಿನದಲ್ಲಿ ಒಂದು ವೇಳೆ ಮರೆಯಾಗುವಿರಿ.


ಪರಾತ್ಪರನಾದ ದೇವರಿಗೆ ಮೊರೆಯಿಡುವೆನು, ನನ್ನ ಕಾರ್ಯವನ್ನು ಸಿದ್ಧಿಗೆ ತರುವ ದೇವರನ್ನು ಕೂಗಿಕೊಳ್ಳುವೆನು.


ಅಂಥವನನ್ನು, ದುಷ್ಟನಿಗೋಸ್ಕರ ಗುಂಡಿಯು ಅಗೆಯಲ್ಪಡುವ ತನಕ, ಆಪತ್ತಿನಲ್ಲಿಯೂ ಸಮಾಧಾನಪಡಿಸುತ್ತೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು