Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 26:7 - ಕನ್ನಡ ಸತ್ಯವೇದವು J.V. (BSI)

7 ಶಿಷ್ಟನ ಮಾರ್ಗವು ನೇರವಾಗಿದೆ; ನೀನು ಅವನ ದಾರಿಯನ್ನು ಸರಿಪಡಿಸಿ ಸಮಮಾಡುತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀತಿವಂತನ ಮಾರ್ಗವು ಸಮವಾಗಿದೆ; ನೀನು ಅವನ ದಾರಿಯನ್ನು ಸರಿಪಡಿಸಿ ನೇರಮಾಡುತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೇರವಾಗಿದೆ ಸಜ್ಜನನ ದಾರಿ ಸುಗಮವಾಗಿದೆ ನಿನ್ನಿಂದ ಆತನ ಹಾದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಪ್ರಾಮಾಣಿಕತೆಯು ಒಳ್ಳೆಯವರ ಜೀವನ ಶೈಲಿ. ಅವರು ನೇರವಾದ ಮತ್ತು ಸತ್ಯವಾದ ಮಾರ್ಗವನ್ನು ಅನುಸರಿಸುವರು. ಯೆಹೋವನೇ, ನೀನು ಆ ಮಾರ್ಗವನ್ನು ಅನುಸರಿಸಲು ಸುಲಭವಾಗುವಂತೆ ಮಾಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀತಿವಂತನ ಮಾರ್ಗವು ಸಮಾನವಾಗಿದೆ. ನೀನು ಅತ್ಯಧಿಕವಾದ ಯಥಾರ್ಥವಂತನು, ನೀತಿವಂತನ ದಾರಿಯನ್ನು ಸರಿಪಡಿಸಿ ಸಮಮಾಡುತ್ತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 26:7
30 ತಿಳಿವುಗಳ ಹೋಲಿಕೆ  

ನಾವು ಆತನ ನಿರ್ಮಾಣ; ಸತ್ಕಾರ್ಯಗಳನ್ನು ಮಾಡುವದಕ್ಕಾಗಿಯೇ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟೆವು. ನಾವು ಸತ್ಕಾರ್ಯಗಳನ್ನು ನಡಿಸುವವರಾಗಿ ಬದುಕಬೇಕೆಂದು ದೇವರು ನಮ್ಮನ್ನು ಮೊದಲೇ ನೇವಿುಸಿದನು.


ಪ್ರಿಯರಾದ ಮಕ್ಕಳೇ, ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸುವದಕ್ಕೆ ಯಾರಿಗೂ ಅವಕಾಶ ಕೊಡಬೇಡಿರಿ. ಕ್ರಿಸ್ತನು ಹೇಗೆ ನೀತಿವಂತನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.


ನಾವು ಕೇವಲ ಮಾನುಷಜ್ಞಾನವನ್ನು ಬಳಸದೆ ದೇವರ ಕೃಪೆಯನ್ನು ಆಶ್ರಯಿಸಿ ಆತನಿಂದಾಗುವ ಪವಿತ್ರತ್ವವೂ ನಿಷ್ಕಪಟತ್ವವೂ ಉಳ್ಳವರಾಗಿ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸು ನಮಗೆ ಸಾಕ್ಷಿ ಹೇಳುತ್ತದೆ;


ಮತ್ತು ಕುರುಡರನ್ನು ನೆಪ್ಪಿಲ್ಲದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಯಿಸುವೆನು; ಅವರೆದುರಿನ ಕತ್ತಲನ್ನು ಬೆಳಕುಮಾಡಿ ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು.


ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಂದ ಹುಟ್ಟಿದವರಲ್ಲ.


ಸದ್ಧರ್ಮಿಯು ನಿರ್ದೋಷವಾಗಿ ನಡೆಯುವನು; ಅವನು ಗತಿಸಿದ ಮೇಲೆಯೂ ಅವನ ಮಕ್ಕಳು ಭಾಗ್ಯವಂತರು.


ಯಾಕಂದರೆ ನೀತಿಸ್ವರೂಪನಾದ ಯೆಹೋವನು ನೀತಿಯನ್ನು ಮೆಚ್ಚುವವನಾಗಿದ್ದಾನೆ. ಸಜ್ಜನರು ಆತನ ಸಾನ್ನಿಧ್ಯದಲ್ಲಿ ಇರುವರು.


ಆದದರಿಂದ ಕಾಲಕ್ಕೆ ಮೊದಲು ಯಾವದನ್ನು ಕುರಿತೂ ತೀರ್ಪುಮಾಡಬೇಡಿರಿ; ಕರ್ತನು ಬರುವ ತನಕ ತಡೆಯಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು, ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವದು.


ಅಲ್ಲಿ ರಾಜಮಾರ್ಗವಿರುವದು, ಹೌದು [ಹೋಗಿಬರುವ] ದಾರಿ; ಅದು ಪರಿಶುದ್ಧಮಾರ್ಗ ಎನಿಸಿಕೊಳ್ಳುವದು; ಯಾವ ಅಶುದ್ಧನೂ ಅಲ್ಲಿ ನಡೆಯನು, ಅದು ದೇವಜನರಿಗಾಗಿಯೇ ಇರುವದು, ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.


ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವದು.


ಒಂದು ವೇಳೆ ನಾನು ಕಪಟದ ಜೊತೆಯಲ್ಲಿ ನಡೆದು ಮೋಸವನ್ನು ಹಿಂಬಾಲಿಸಿ ಓಡಿ


ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದೀ ಎಂಬದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ ಸ್ವೇಚ್ಫೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವೇಚ್ಫೆಯಿಂದಲೇ ನಿನಗೆ ಕಾಣಿಕೆಗಳನ್ನರ್ಪಿಸಿದ್ದಾರೆಂದು ನೋಡಿ ಸಂತೋಷಿಸುತ್ತೇನೆ.


ಅದರ ಮಧ್ಯೆ ನೆಲೆಗೊಂಡಿರುವ ಯೆಹೋವನು ನ್ಯಾಯಸ್ವರೂಪನು; ಎಂದಿಗೂ ಅನ್ಯಾಯವನ್ನು ಮಾಡನು; ಬೆಳಬೆಳಿಗ್ಗೆ ತನ್ನ ನ್ಯಾಯವನ್ನು ತಪ್ಪದೆ ಪ್ರಕಾಶಗೊಳಿಸುವನು; ಅನ್ಯಾಯಗಾರನೋ ನಾಚಿಕೆಪಡನು.


ಯೆಹೋವನು ತನ್ನ ಪರಿಶುದ್ಧ ಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.


ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ತಿಳಿಸು; ನೀನು ಒಪ್ಪುವ ದಾರಿಯನ್ನು ತೋರಿಸು.


ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡಿಸುತ್ತಾ ಉಪದೇಶಿಸು; ನೀನೇ ನನ್ನನ್ನು ರಕ್ಷಿಸುವ ದೇವರು; ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ.


ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ಹೊಂಚುಹಾಕಿರುವವರಿಗೆ ಸಿಕ್ಕದ ಹಾಗೆ ನನ್ನನ್ನು ಸಮವಾದ ದಾರಿಯಲ್ಲಿ ನಡಿಸು.


ನೀತಿವಂತರ ಮಾರ್ಗವು ಮಧ್ಯಾಹ್ನದವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.


ನೀವು ಅವಸರದಿಂದ ಹೊರಡಬೇಕಾಗಿಲ್ಲ, ಓಡಿಹೋಗಬೇಕಾಗಿಲ್ಲ; ಯೆಹೋವನು ನಿಮಗೆ ಮುಂಬಲವಾಗಿ ಮುಂದರಿಯುವನು, ಇಸ್ರಾಯೇಲಿನ ದೇವರು ನಿಮಗೆ ಹಿಂಬಲವಾಗಿಯೂ ಇರುವನು.


ಇವರು ಸಮಾಧಾನದಲ್ಲಿ ಸೇರಿದ್ದಾರಲ್ಲಾ; ನೆಟ್ಟಗೆ ನಡೆಯುವ ಪ್ರತಿಯೊಬ್ಬನು ತನ್ನ ತನ್ನ ದೀರ್ಘನಿದ್ರಾಸ್ಥಾನದಲ್ಲಿ ವಿಶ್ರವಿುಸಿಕೊಳ್ಳುತ್ತಿದ್ದಾನೆ.


ಯೆಹೋವನೇ, ಮಾನವನ ಮಾರ್ಗವು ಅವನ ಸ್ವಾಧೀನದಲ್ಲಿಲ್ಲವೆಂದು ನನಗೆ ಗೊತ್ತು; ಮನುಷ್ಯನು ನಡೆದಾಡುತ್ತಾ ಸರಿಯಾದ ಕಡೆಗೆ ತನ್ನ ಹೆಜ್ಜೆಯನ್ನಿಡಲಾರನು.


ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು; ಯೆಹೋವನ ಮಾರ್ಗಗಳು ರುಜುವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಎಡವಿಬೀಳುವರು.


ಅವರ ಬಾಯಲ್ಲಿ ಯಥಾರ್ಥತ್ವವಿಲ್ಲ; ಅವರು ನಾಲಿಗೆಯಿಂದ ಸವಿಮಾತಾಡಿದರೂ ಅವರ ಹೃದಯವು ನಾಶಕರವಾದ ಗುಂಡಿ, ಅವರ ಗಂಟಲು ತೆರೆದಿರುವ ಸಮಾಧಿ.


ನಿನ್ನ ಎಲ್ಲಾ ನಡವಳಿಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.


ನಿರ್ದೋಷಿಯ ಧರ್ಮವು ಅವನ ಮಾರ್ಗವನ್ನು ಸರಾಗಮಾಡುವದು; ದೋಷಿಯು ತನ್ನ ದೋಷದಿಂದಲೇ ಬಿದ್ದುಹೋಗುವನು.


ದೋಷಿಯ ದಾರಿಡೊಂಕು; ಶುದ್ಧನ ನಡತೆ ಸರಲ.


ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು