Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 26:8 - ಕನ್ನಡ ಸತ್ಯವೇದವು J.V. (BSI)

8 ಹೌದು, ಯೆಹೋವನೇ, ನಿನ್ನ ನ್ಯಾಯಕಾರ್ಯಗಳು ತೋರತಕ್ಕ ಮಾರ್ಗದಲ್ಲಿ ನಿನ್ನನ್ನು ಕಾದುಕೊಂಡಿದ್ದೇವೆ; ನಿನ್ನ ನಾಮಸ್ಮರಣೆಯು ನಮ್ಮ ಆತ್ಮಕ್ಕೆ ಕೇವಲ ಇಷ್ಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೌದು, ಯೆಹೋವನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಡೆಯುತ್ತಾ ನಿನಗಾಗಿ ಕಾದುಕೊಂಡಿದ್ದೇವೆ; ನಿನ್ನ ನಾಮಸ್ಮರಣೆಯು ನಮ್ಮ ಆತ್ಮಕ್ಕೆ ಇಷ್ಟವಾಗಿದೆ, ಹಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಡೆವೆವು ನಾವು, ಸರ್ವೇಶ್ವರಾ, ನಿನ್ನ ನೀತಿಮಾರ್ಗದೊಳು ಕಾದಿರುವೆವು ನಿನಗಾಗಿ ಭರವಸೆಯಿಟ್ಟು ನಿನ್ನೊಳು ನಿನ್ನ ನಾಮಸ್ಮರಣೆಯ ಬಯಕೆ ನಮ್ಮ ಅಂತರಾತ್ಮದೊಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಯೆಹೋವನೇ, ನಾವು ನಿನ್ನ ನ್ಯಾಯವಿಚಾರಣೆಯ ರೀತಿಗಾಗಿ ಕಾಯುತ್ತಿದ್ದೇವೆ. ನಮ್ಮ ಆತ್ಮಗಳು ನಿನ್ನನ್ನೂ ನಿನ್ನ ನಾಮವನ್ನೂ ನೆನಪು ಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹೌದು, ಯೆಹೋವ ದೇವರೇ, ನಿಮ್ಮ ನ್ಯಾಯತೀರ್ಪಿನ ಮಾರ್ಗದಲ್ಲಿ ನಡೆಯುತ್ತಾ ನಾವು ನಿಮಗೋಸ್ಕರ ಕಾದುಕೊಂಡಿದ್ದೇವೆ, ನಿಮ್ಮ ನಾಮಸ್ಮರಣೆಯೇ ನಮ್ಮ ಹೃದಯದ ಬಯಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 26:8
39 ತಿಳಿವುಗಳ ಹೋಲಿಕೆ  

ಯೆಹೋವನೇ, ನಮ್ಮನ್ನು ಕರುಣಿಸು! ನಿನ್ನನ್ನು ಕಾದುಕೊಂಡಿದ್ದೇವೆ; ಪ್ರತಿ ಮುಂಜಾನೆಯೂ ನಮಗೆ ಭುಜಬಲವಾಗಿಯೂ ಇಕ್ಕಟ್ಟಿನಲ್ಲಿ ನಮಗೆ ರಕ್ಷಣೆಯಾಗಿಯೂ ಇರು.


ನೀನು ಶೌರ್ಯವೆಂಬ ನಡುಕಟ್ಟನ್ನು ಬಿಗಿದುಕೊಂಡು ಬಲದಿಂದ ಪರ್ವತಗಳನ್ನು ಸ್ಥಿರವಾಗಿ ನಿಲ್ಲಿಸಿದವನೂ


ದೇವರು ಮೋಶೆಗೆ ಮತ್ತೂ ಹೇಳಿದ್ದೇನಂದರೆ - ನೀನು ಇಸ್ರಾಯೇಲ್ಯರಿಗೆ ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರಾಗಿರುವ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಬೇಕು. ಇದು ಸದಾಕಾಲಕ್ಕೂ ನನ್ನ ಹೆಸರು; ಇದು ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ನಾಮ.


ದೇವರ ಪ್ರೀತಿಯಲ್ಲಿಯೂ ಕ್ರಿಸ್ತನ ತಾಳ್ಮೆಯಲ್ಲಿಯೂ ಸೇರುವಂತೆ ಕರ್ತನೇ ನಿಮ್ಮನ್ನು ನಡಿಸಲಿ.


ಆದರೆ ಕಾಣದಿರುವದನ್ನು ನಾವು ಎದುರುನೋಡುವವರಾಗಿದ್ದರೆ ತಾಳ್ಮೆಯಿಂದ ಕಾದುಕೊಂಡಿರುವೆವು.


ಹೀಗಿರಲಾಗಿ ಆತನು ಅವರೊಂದಿಗೆ ಕೂಡಿದ್ದಾಗ್ಗೆ ಅವರಿಗೆ - ಯೋಹಾನನಂತೂ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸಿದನು, ನಿಮಗಾದರೋ ಇನ್ನು ಸ್ವಲ್ಪ ದಿವಸಗಳೊಳಗಾಗಿ ಪವಿತ್ರಾತ್ಮದಲ್ಲಿ ಸ್ನಾನವಾಗುವದು. ಆದಕಾರಣ ನೀವು ಯೆರೂಸಲೇಮನ್ನು ಬಿಟ್ಟು ಹೋಗದೆ ತಂದೆ ಮಾಡಿದಂಥ ನೀವು ನನ್ನಿಂದ ಕೇಳಿದಂಥ ವಾಗ್ದಾನಕ್ಕೆ ಕಾದುಕೊಂಡಿರ್ರಿ ಎಂದು ಅಪ್ಪಣೆಕೊಟ್ಟನು.


ಯೆಹೋವನು ಹೀಗನ್ನುತ್ತಾನೆ - ನ್ಯಾಯವನ್ನು ಅನುಸರಿಸಿರಿ, ಧರ್ಮವನ್ನು ಆಚರಿಸಿರಿ; ಏಕಂದರೆ ನನ್ನ ವಿಮೋಚನ ಕ್ರಿಯೆಯು ಬೇಗನೆ ಬರುವದು, ನನ್ನ ರಕ್ಷಣಧರ್ಮದ ಕಾರ್ಯವು ಶೀಘ್ರವಾಗಿ ವ್ಯಕ್ತವಾಗುವದು.


ಆ ದಿನದಲ್ಲಿ ಜನರು - ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನೇ ಯೆಹೋವನು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ, ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು ಎಂದು ಹೇಳಿಕೊಳ್ಳುವರು.


ಆ ದಿನದಲ್ಲಿ ನೀವು ಹೇಳುವದೇನಂದರೆ - ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಪಡಿಸಿರಿ, ಆತನ ನಾಮವು ಉನ್ನತೋನ್ನತವೆಂದು ಜ್ಞಾಪಕಪಡಿಸಿರಿ.


ಯೆರೂಸಲೇವಿುನ ಮಹಿಳೆಯರೇ, ನೀವು ನನ್ನ ಕಾಂತನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂಬದನ್ನು ಅವನಿಗೆ ತಿಳಿಸಬೇಕೆಂದು ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.


ಯಾವಾಗಲೂ ನ್ಯಾಯವನ್ನು ಕಾಪಾಡುವವರೂ ನೀತಿಯನ್ನು ಪಾಲಿಸುವವರೂ ಧನ್ಯರು.


ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು. [ಆದರೆ ಈಗ] ಚೈತನ್ಯಸ್ವರೂಪನಾದ ದೇವರಿಗೆ ನನ್ನ ತನುಮನಗಳಿಂದ ಹರ್ಷಧ್ವನಿ ಮಾಡುತ್ತೇನೆ.


ಪರಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರು ಅವಶ್ಯ? ಇಹಲೋಕದಲ್ಲಿ ನಿನ್ನನ್ನಲ್ಲದೆ ಇನ್ನಾರನ್ನೂ ಬಯಸುವದಿಲ್ಲ.


ನಾನು ಆತನ ದೃಷ್ಟಿಯಲ್ಲಿ ನಿರ್ದೋಷಿಯು; ಪಾಪದಲ್ಲಿ ಬೀಳದಂತೆ ಜಾಗರೂಕತೆಯಿಂದ ನಡೆದುಕೊಂಡೆನು.


ನನ್ನ ಮನೆಯು ಯೆಹೋವನ ಸನ್ನಿಧಿಯಲ್ಲಿ ಸ್ಥಿರವಾಗಿರುತ್ತದಲ್ಲವೋ? ಆತನು ನನ್ನೊಡನೆ ಒಡಂಬಡಿಕೆಮಾಡಿಕೊಂಡಿದ್ದಾನೆ; ಅದು ಎಂದಿಗೂ ಬಿದ್ದು ಹೋಗುವದಿಲ್ಲ, ಎಲ್ಲಾ ವಿಷಯಗಳಲ್ಲಿ ಖಂಡಿತವಾಗಿದೆ. ನನ್ನ ರಕ್ಷಣೆಯ ಮೂಲವೂ ನನ್ನ ಅಭಿಲಾಷೆಯನ್ನು ಪೂರ್ತಿಗೊಳಿಸುವವನೂ ಆತನೇ ಅಲ್ಲವೋ?


ಯೊರ್ದನ್ ಹೊಳೆಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಯ ಮೂಲಕ ಇಸ್ರಾಯೇಲ್ಯರಿಗೆ ಕೊಟ್ಟ ಆಜ್ಞಾವಿಧಿಗಳು ಇವೇ.


ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.


ನನ್ನ ಸೇವಕನಾದ ಮೋಶೆಯ ಧರ್ಮಶಾಸ್ತ್ರವನ್ನು ಅಂದರೆ ನಾನು ಹೋರೇಬ್ ಬೆಟ್ಟದಲ್ಲಿ ಎಲ್ಲಾ ಇಸ್ರಾಯೇಲ್ಯರಿಗೋಸ್ಕರ ಮೋಶೆಗೆ ನೇವಿುಸಿದ ನಿಯಮವಿಧಿಗಳನ್ನು ಜ್ಞಾಪಕಮಾಡಿಕೊಳ್ಳಿರಿ.


ನಾನಂತು ಯೆಹೋವನನ್ನು ಎದುರು ನೋಡುವೆನು; ನನ್ನ ರಕ್ಷಕನಾದ ದೇವರನ್ನು ಕಾದುಕೊಳ್ಳುವೆನು; ನನ್ನ ದೇವರು ನನ್ನ ಕಡೆಗೆ ಕಿವಿಗೊಡುವನು,


ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.


ನಾನು ಯೆಹೋವನನ್ನು ಎದುರುನೋಡುತ್ತೇನೆ; ನನ್ನ ಪ್ರಾಣವು ಆತನನ್ನು ಕಾದುಕೊಂಡಿದೆ; ಆತನ ನುಡಿಯನ್ನು ನಿರೀಕ್ಷಿಸಿಕೊಂಡಿದ್ದೇನೆ.


ಮೂಡಣವರೇ, ಯೆಹೋವನನ್ನು ಸನ್ಮಾನಿಸಿರಿ; ಕರಾವಳಿಯವರೇ, ಇಸ್ರಾಯೇಲ್ಯರ ದೇವರಾದ ಯೆಹೋವನ ನಾಮವನ್ನು ಘನಪಡಿಸಿರಿ ಎಂದು ಕೂಗುವರು.


ಯೆಹೋವನೇ, ನೀನೇ ನನ್ನ ದೇವರು; ನೀನು ಸತ್ಯಪ್ರಾಮಾಣಿಕತೆಗಳನ್ನು ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ ಅದ್ಭುತಗಳನ್ನು ನಡಿಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಗೊಳಿಸುವೆನು.


ನಮ್ಮ ದೇವರಾದ ಯೆಹೋವನೇ, ನಿನ್ನ ಸ್ಥಾನದಲ್ಲಿ ಬೇರೆ ಒಡೆಯರು ನಮ್ಮ ಮೇಲೆ ದೊರೆತನಮಾಡುತ್ತಿದ್ದರು; ಈಗ ನಿನ್ನ ನಾಮವನ್ನು ಹೊಗಳುವದಕ್ಕೆ ನಿನ್ನಿಂದಲೇ ನಮಗೆ ಅವಕಾಶವಾಯಿತು.


ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಗಳು ನಿನಗೆ ಸಾಕುತಾಯಿಯರು ಆಗುವರು; ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳಿಯನ್ನು ನೆಕ್ಕುವರು; ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡರು ಎಂದು ನಿನಗೆ ಗೊತ್ತಾಗುವದು.


ನನ್ನ ಜನರೇ, ಆಲಿಸಿರಿ! ನನ್ನ ಪ್ರಜೆಗಳೇ, ಕಿವಿಗೊಡಿರಿ! ಧರ್ಮೋಪದೇಶವು ನನ್ನಿಂದ ಹೊರಡುವದು, ನನ್ನ ನ್ಯಾಯಬೋಧನೆಯನ್ನು ಜನಾಂಗಗಳಿಗೆ ಬೆಳಕನ್ನಾಗಿ ಸ್ಥಾಪಿಸುವೆನು.


ಅನ್ಯಜನಾಂಗಗಳು ತಮ್ಮ ತಮ್ಮ ದೇವರುಗಳ ಹೆಸರಿನಲ್ಲಿ ನಡೆಯುತ್ತವೆ; ನಾವಾದರೋ ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಯುಗಯುಗಾಂತರಗಳಲ್ಲಿ ನಡೆಯುವೆವು.


ನನ್ನ ಮನಸ್ಸು ದೇವರಿಗಾಗಿ, ಚೈತನ್ಯ ಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ; ನಾನು ಯಾವಾಗ ಹೋಗಿ ದೇವರ ಸನ್ನಿಧಿಯಲ್ಲಿ ಸೇರುವೆನೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು