ಯೆಶಾಯ 26:9 - ಕನ್ನಡ ಸತ್ಯವೇದವು J.V. (BSI)9 ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಹಾರೈಸಿದ್ದೇವೆ, ಹೌದು, ನಮ್ಮ ಆತ್ಮದಲ್ಲಿ ನಿನ್ನನ್ನು ತವಕದಿಂದ ಹುಡುಕಿದ್ದೇವೆ. ನೀನು ಲೋಕದಲ್ಲಿ ನ್ಯಾಯಕಾರ್ಯಗಳನ್ನು ನಡಿಸುವಾಗ ಭೂನಿವಾಸಿಗಳು ಧರ್ಮಜ್ಞಾನವನ್ನು ಪಡೆದುಕೊಳ್ಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಹಾರೈಸಿದ್ದೇವೆ, ಹೌದು, ನಮ್ಮ ಆತ್ಮದಲ್ಲಿ ನಿನ್ನನ್ನು ತವಕದಿಂದ ಹುಡುಕಿದ್ದೇವೆ. ನೀನು ಲೋಕದಲ್ಲಿ ನ್ಯಾಯಕಾರ್ಯಗಳನ್ನು ನಡೆಸುವಾಗ ಭೂನಿವಾಸಿಗಳು ಧರ್ಮಜ್ಞಾನವನ್ನು ಪಡೆದುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಹಾರೈಸಿದೆ ಎನ್ನಾತ್ಮ ನಿನ್ನನು ಇರುಳೊಳು ಅರಸಿತೆನ್ನ ಮನ ನಿನ್ನನು ಮುಂಜಾನೆಯೊಳು. ನೀನೀಯುವಾಗ ಜಗಕೆ ನ್ಯಾಯತೀರ್ಪನು ಕಲಿತುಕೊಳ್ಳುವರು ಭೂನಿವಾಸಿಗಳು ನ್ಯಾಯನೀತಿಯನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಮ್ಮ ಆತ್ಮವು ನಿನ್ನೊಂದಿಗೆ ರಾತ್ರಿಯಲ್ಲಿರಲು ಆಶಿಸುತ್ತದೆ. ನಮ್ಮೊಳಗಿರುವ ಆತ್ಮವು ನಿನ್ನ ಸಹವಾಸವನ್ನು ಬಯಸುತ್ತದೆ. ಹೊಸ ದಿವಸಗಳ ಮುಂಜಾನೆಯಲ್ಲಿ ನಿನ್ನೊಂದಿಗಿರಲು ಆಶಿಸುತ್ತದೆ. ನಿನ್ನ ನ್ಯಾಯವು ಈ ಭೂಮಿಗೆ ಬಂದಾಗ ಜನರು ಜೀವನದ ಸತ್ಯಮಾರ್ಗವನ್ನು ಅರಿಯುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ರಾತ್ರಿಯಲ್ಲಿ ನಿಮ್ಮನ್ನು ಮನಃಪೂರ್ವಕವಾಗಿ ಬಯಸಿದ್ದೇನೆ. ನನ್ನಲ್ಲಿರುವ ನನ್ನ ಆತ್ಮದೊಂದಿಗೆ ನಿಮ್ಮನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ. ಏಕೆಂದರೆ ಭೂಮಿಗೆ ನಿಮ್ಮ ನ್ಯಾಯತೀರ್ಪುಗಳು ನಡೆಯುವಾಗಲೇ ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ. ಅಧ್ಯಾಯವನ್ನು ನೋಡಿ |