ಯೆಶಾಯ 27:10 - ಕನ್ನಡ ಸತ್ಯವೇದವು J.V. (BSI)10 ಕೋಟೆಕೊತ್ತಲದ ಪಟ್ಟಣವು ಹಾಳಾಗಿ ಕಾಡಿನಂತೆ ಜನರಿಲ್ಲದೆ ಶೂನ್ಯನಿವಾಸಸ್ಥಾನವಾಗಿದೆ; ಅಲ್ಲಿ ಕರು ಮೇದು ಮಲಗುವದು, ಅಲ್ಲಿನ ಚಿಗುರುಗಳನ್ನು ತಿಂದುಬಿಡುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಕೋಟೆಕೊತ್ತಲದ ಪಟ್ಟಣವು ಹಾಳಾಗಿ, ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸ ಸ್ಥಾನವಾಗಿದೆ; ಅಲ್ಲಿ ಕರುಗಳು ಮೇದು ಮಲಗುವುದು, ಅಲ್ಲಿನ ಚಿಗುರುಗಳನ್ನು ತಿಂದುಬಿಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಕೋಟೆಕೊತ್ತಲಗಳಿಂದ ಕೂಡಿದ ಪಟ್ಟಣ ಪಾಳುಬಿದ್ದಿದೆ; ಕಾಡಿನಂತೆ ನಿರ್ಜನಪ್ರದೇಶವಾಗಿದೆ. ದನಕರುಗಳು ಮೇದು ಮಲಗುವ ಗೋಮಾಳವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆ ಸಮಯದಲ್ಲಿ ಆ ಮಹಾನಗರವು ನಿರ್ಜನವಾಗಿರುವದು. ಅದು ಮರುಭೂಮಿಯಂತಿರುವದು. ಜನರೆಲ್ಲರೂ ಹೊರಟುಹೋಗಿರುವರು. ಅವರು ಪಲಾಯನಗೈದಿದ್ದಾರೆ. ನಗರವು ತೆರೆದ ಹುಲ್ಲುಗಾವಲಿನಂತಿರುವುದು. ಪಶುಗಳು ಅಲ್ಲಿ ಹುಲ್ಲನ್ನು ಮೇಯುತ್ತವೆ. ದನಗಳು ದ್ರಾಕ್ಷಾಲತೆಯ ಚಿಗುರೆಲೆಗಳನ್ನು ತಿನ್ನುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಕೋಟೆಯ ಪಟ್ಟಣವು ಹಾಳಾಗಿ ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸ ಸ್ಥಾನವಾಗುವುದು. ಅಲ್ಲಿ ದನಕರುಗಳು ಮೇದು ಮಲಗುವ ಗೋಮಾಳವಾಗಿದೆ. ಅವು ಅಲ್ಲಿನ ಚಿಗುರುಗಳನ್ನು ತಿಂದುಬಿಡುವುವು. ಅಧ್ಯಾಯವನ್ನು ನೋಡಿ |