ಯೆಶಾಯ 27:12 - ಕನ್ನಡ ಸತ್ಯವೇದವು J.V. (BSI)12 ಇಸ್ರಾಯೇಲ್ಯರೇ, ತುಂಬಿತುಳುಕುವ [ಯೂಫ್ರೇಟೀಸ್] ನದಿಯಿಂದ ಐಗುಪ್ತ ದೇಶದ ನದಿಯವರೆಗೆ ಯೆಹೋವನು ತೆನೆಗಳನ್ನು ಒಕ್ಕುವ ದಿನವು ಬರುತ್ತದೆ; ಆಗ ನಿನ್ನನ್ನು ಒಬ್ಬೊಬ್ಬರನ್ನಾಗಿ ಆರಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇಸ್ರಾಯೇಲರೇ, ತುಂಬಿತುಳುಕುವ ಯೂಫ್ರೆಟಿಸ್ ನದಿಯಿಂದ ಐಗುಪ್ತ ದೇಶದ ನದಿಯವರೆಗೆ ಯೆಹೋವನು ತೆನೆಗಳನ್ನು ಒಕ್ಕುವ ದಿನವು ಬರುತ್ತದೆ; ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಆರಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇಸ್ರಯೇಲಿನ ಜನರೇ, ದಿನವು ಬರಲಿದೆ. ಆಗ ಯೂಫ್ರೆಟಿಸ್ ನದಿಯಿಂದ ಈಜಿಪ್ಟ್ ದೇಶದ ನದಿಯವರೆಗೆ, ಸರ್ವೇಶ್ವರ ತೆನೆಗಳನ್ನು ಒಕ್ಕಣೆಮಾಡುವರು. ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಬೇರ್ಪಡಿಸಿ ಆಯ್ಕೆಮಾಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆ ಸಮಯದಲ್ಲಿ, ಯೆಹೋವನು ತನ್ನ ಜನರನ್ನು ಬೇರೆಯವರಿಂದ ಬೇರ್ಪಡಿಸುವನು. ಆತನು ಯೂಫ್ರೇಟೀಸ್ ನದಿಯಿಂದ ಪ್ರಾರಂಭಿಸಿ ಈಜಿಪ್ಟಿನ ನದಿಯತನಕ ಎಲ್ಲಾ ಜನರನ್ನು ಒಟ್ಟುಗೂಡಿಸುವನು. ಇಸ್ರೇಲ್ ಜನರೇ, ನೀವು ಒಬ್ಬೊಬ್ಬರಾಗಿಯೇ ಒಟ್ಟುಗೂಡಿಸಲ್ಪಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಇಸ್ರಾಯೇಲರೇ, ಯೆಹೋವ ದೇವರು ಯೂಫ್ರೇಟೀಸ್ ನದಿ ಮೊದಲುಗೊಂಡು ಈಜಿಪ್ಟ್ ದೇಶದ ನದಿಯವರೆಗೆ ಹೊಡೆಯುವರು, ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಕೂಡಿಸುವರು. ಅಧ್ಯಾಯವನ್ನು ನೋಡಿ |