Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 27:13 - ಕನ್ನಡ ಸತ್ಯವೇದವು J.V. (BSI)

13 ಆ ದಿನದಲ್ಲಿ ದೊಡ್ಡ ಕೊಂಬನ್ನೂದಲು ಅಶ್ಶೂರ ದೇಶದಲ್ಲಿ ಹಾಳಾದವರೂ ಐಗುಪ್ತ ಸೀಮೆಯಲ್ಲಿನ ದೇಶಭ್ರಷ್ಟರಾದವರೂ ಬಂದು ಪರಿಶುದ್ಧಪರ್ವತದ ಯೆರೂಸಲೇವಿುನಲ್ಲಿ ಯೆಹೋವನ ಮುಂದೆ ಅಡ್ಡಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆ ದಿನದಲ್ಲಿ ದೊಡ್ಡ ಕೊಂಬನ್ನೂದಲು ಅಶ್ಶೂರ ದೇಶದಲ್ಲಿ ಹಾಳಾದವರೂ, ಐಗುಪ್ತದಲ್ಲಿ ದೇಶಭ್ರಷ್ಟರಾದವರೂ ಬಂದು ಪರಿಶುದ್ಧ ಪರ್ವತವಾದ ಯೆರೂಸಲೇಮಿನಲ್ಲಿ ಯೆಹೋವನನ್ನು ಆರಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆ ದಿನ ಬಂದಾಗ, ಮಹಾ ತುತೂರಿಯೊಂದನ್ನು ಊದಲಾಗುವುದು. ಗಡೀಪಾರಾಗಿ ಚದುರಿಹೋಗಿರುವ ಇಸ್ರಯೇಲರನ್ನು ಅಸ್ಸೀರಿಯದಿಂದಲೂ ಈಜಿಪ್ಟಿನಿಂದಲೂ ಕರೆಯಲಾಗುವುದು. ಅವರೆಲ್ಲರೂ ಜೆರುಸಲೇಮಿಗೆ ಬಂದು ಪವಿತ್ರಪರ್ವತದ ಮೇಲೆ ಸರ್ವೇಶ್ವರ ಸ್ವಾಮಿಗೆ ಅಡ್ಡಬೀಳುವರು, ಆರಾಧನೆಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನನ್ನ ಜನರಲ್ಲಿ ಹೆಚ್ಚಿನವರು ಅಶ್ಶೂರದಲ್ಲಿ ಈಗ ಕಳೆದುಹೋಗಿರುತ್ತಾರೆ; ಕೆಲವರು ಈಜಿಪ್ಟಿಗೆ ಓಡಿಹೋಗಿದ್ದಾರೆ. ಆ ಸಮಯದಲ್ಲಿ ಮಹಾದೊಡ್ಡ ತುತ್ತೂರಿಯ ಶಬ್ದವು ಕೇಳಿಸುವದು. ಆಗ ಆ ಜನರೆಲ್ಲರೂ ಜೆರುಸಲೇಮಿಗೆ ಹಿಂತಿರುಗುವರು. ಆ ಜನರು ಪರಿಶುದ್ಧ ಪರ್ವತದ ಮೇಲೆ ಯೆಹೋವನ ಮುಂದೆ ಅಡ್ಡಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆ ದಿನದಲ್ಲಿ ದೊಡ್ಡ ತುತೂರಿಯು ಊದಲಾಗುವುದು. ಆಗ ಅಸ್ಸೀರಿಯ ದೇಶದಲ್ಲಿ ಚದರಿಹೋದವರೂ, ಈಜಿಪ್ಟ್ ದೇಶದಲ್ಲಿ ಗಡೀಪಾರಾದವರೂ, ಯೆರೂಸಲೇಮಿನ ಪರಿಶುದ್ಧ ಪರ್ವತದ ಬಳಿಗೆ ಬಂದು ಯೆಹೋವ ದೇವರನ್ನು ಆರಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 27:13
51 ತಿಳಿವುಗಳ ಹೋಲಿಕೆ  

ಮತ್ತು ಆತನು ತುತೂರಿಯ ಮಹಾ ಶಬ್ದದಿಂದ ತನ್ನ ದೂತರನ್ನು ಕಳುಹಿಸುವನು. ಅವರು ಆತನು ಆದುಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕೂ ದಿಕ್ಕುಗಳಿಂದ ಒಟ್ಟುಗೂಡಿಸುವರು.


ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ನಿಮ್ಮ ದೇಶದಲ್ಲೆಲ್ಲಾ ಕೊಂಬಿನ ಧ್ವನಿಯನ್ನು ಮಾಡಿಸಬೇಕು; ಸಕಲ ದೋಷಪರಿಹಾರಕವಾದ ಆ ದಿನದಲ್ಲೇ ನಿಮ್ಮ ದೇಶದಲ್ಲೆಲ್ಲಾ ಆ ಕೊಂಬಿನ ಧ್ವನಿಯನ್ನು ಮಾಡಿಸಬೇಕು.


ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇವಿುಗೂ ಉತ್ಸವಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ


ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು, ಸೆರೆಯವರಿಗೆ ಬಿಡುಗಡೆಯಾಗುವದನ್ನು ಮತ್ತು ಕುರುಡರಿಗೆ ಕಣ್ಣು ಬರುವದನ್ನು ಪ್ರಸಿದ್ಧಿಪಡಿಸುವದಕ್ಕೂ ಮನಮುರಿದವರನ್ನು ಬಿಡಿಸಿ ಕಳುಹಿಸುವದಕ್ಕೂ


ಅನಂತರ ಯೆರೂಸಲೇವಿುನ ಮೇಲೆ ಬಿದ್ದ ಸಕಲ ಜನಾಂಗಗಳಲ್ಲಿ ಉಳಿದವರೆಲ್ಲರೂ ಸೇನಾಧೀಶ್ವರ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವದಕ್ಕೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸುವದಕ್ಕೂ ಪ್ರತಿವರುಷವು ಹೊರಟುಬರುವರು.


ಇದಲ್ಲದೆ ಇಸ್ರಾಯೇಲ್ಯರು ಐಗುಪ್ತ ದೇಶದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಮಾರ್ಗವು ಹೇಗೆ ಸಿದ್ಧವಾಯಿತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿಕೊಂಡು ಬರುವ ಆತನ ಜನಶೇಷಕ್ಕೆ ರಾಜಮಾರ್ಗವು ಸಿದ್ಧವಾಗುವದು.


ಶೆಬನ್ಯ, ಯೋಷಾಫಾಟ್, ನೆತನೇಲ್, ಅಮಾಸೈ, ಜೆಕರ್ಯ, ಬೆನಾಯ, ಎಲೀಯೆಜೆರ್ ಎಂಬ ಯಾಜಕರು ತುತೂರಿಗಳನ್ನು ಊದುತ್ತಾ ದೇವಮಂಜೂಷದ ಮುಂದೆ ಹೋಗುವವರು. ಓಬೇದೆದೋಮ್, ಯೆಹೀಯ ಎಂಬವರು ಮಂಜೂಷಾಲಯದ ದ್ವಾರಪಾಲಕರು.


ಯುಗಯುಗಾಂತರಗಳಲ್ಲಿಯೂ ಜೀವಿಸುವಾತನ ಮೇಲೆ ಆಣೆಯಿಟ್ಟು - ಇನ್ನು ಸಾವಕಾಶವಿರುವದಿಲ್ಲ; ಏಳನೆಯ ದೇವದೂತನು ಶಬ್ದ ಮಾಡುವ ದಿನಗಳಲ್ಲಿ ಅಂದರೆ ಅವನು ತುತೂರಿಯನ್ನು ಊದುವದಕ್ಕಿರುವ ಸಮಯದಲ್ಲಿ ದೇವರು ಇದುವರೆಗೆ ಗುಪ್ತವಾಗಿಟ್ಟಿದ್ದ ಸಂಕಲ್ಪವನ್ನು ತನ್ನ ದಾಸರಾದ ಪ್ರವಾದಿಗಳಿಗೆ ಶುಭವರ್ತಮಾನವಾಗಿ ತಿಳಿಸಿದ್ದ ಪ್ರಕಾರ ನೆರವೇರಿಸುವನು ಎಂದು ಹೇಳಿದನು.


ಅದು ತುತೂರಿಯನ್ನು ಹಿಡಿದಿದ್ದ ಆರನೆಯ ದೇವದೂತನಿಗೆ - ಯೂಫ್ರೇಟೀಸ್ ಎಂಬ ಮಹಾನದಿಯ ಬಳಿಯಲ್ಲಿ ಕಟ್ಟಿರುವ ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು ಎಂದು ಹೇಳಿತು.


ಏಳು ತುತೂರಿಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರು ತುತೂರಿಗಳನ್ನೂದುವದಕ್ಕೆ ಸಿದ್ಧಮಾಡಿಕೊಂಡರು.


ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ಮಂದಿ ದೇವದೂತರನ್ನು ಕಂಡೆನು; ಅವರಿಗೆ ಏಳು ತುತೂರಿಗಳು ಕೊಡಲ್ಪಟ್ಟವು.


ಪ್ರಧಾನದೂತನ ಶಬ್ದದೊಡನೆಯೂ ದೇವರ ತುತೂರಿಧ್ವನಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು.


ಆದರೂ ಅವರ ಕಿವಿಗೆ ಬೀಳಲಿಲ್ಲವೇನು ಎಂದು ಕೇಳುತ್ತೇನೆ. ಬಿದ್ದದ್ದು ನಿಶ್ಚಯ. ಸಾರುವವರ ಧ್ವನಿಯು ಭೂವಿುಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.


ಸೂರ್ಯನು ಮೂಡುವ ದಿಕ್ಕಿನಿಂದ ಮುಣುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನೂ ಶುದ್ಧನೈವೇದ್ಯವನ್ನೂ ಅರ್ಪಿಸುತ್ತಾರೆ; ಹೌದು, ಅನ್ಯಜನಾಂಗಗಳಲ್ಲಿಯೇ ನನ್ನ ನಾಮವು ಘನವಾಗಿದೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಗುಬ್ಬಿಗಳಂತೆ ಐಗುಪ್ತದಿಂದಲೂ ಪಾರಿವಾಳಗಳಂತೆ ಅಶ್ಶೂರದಿಂದಲೂ ಅದರುತ್ತಾ ತ್ವರೆಪಡುವರು; ಅವರು ತಮ್ಮ ತಮ್ಮ ನಿವಾಸಗಳಲ್ಲಿ ವಾಸಿಸುವಂತೆ ಮಾಡುವೆನು; ಇದು ಯೆಹೋವನ ನುಡಿ.


ಅವರು ಯೆಹೋವನ ದೇಶದಲ್ಲಿ ಇನ್ನು ವಾಸಿಸರು. ಎಫ್ರಾಯೀಮ್ಯರು ಐಗುಪ್ತಕ್ಕೆ ಹಿಂದಿರುಗುವರು, ಅಶ್ಶೂರದಲ್ಲಿ ಅವರು ತಿನ್ನುವ ಆಹಾರವು ಹೊಲಸಾಗುವದು.


ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳಿಗೆ ಮೆಚ್ಚನು; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವದು.


ಖಡ್ಗಕ್ಕೆ ತಪ್ಪಿಸಿಕೊಂಡವರು ಕೊಂಚ ಜನ ಮಾತ್ರವೇ ಆಗಿ ಐಗುಪ್ತದಿಂದ ಯೆಹೂದಕ್ಕೆ ಹಿಂದಿರುಗುವರು; ಆಗ ಐಗುಪ್ತಕ್ಕೆ ಹೋಗಿ ಪ್ರವಾಸಿಸುತ್ತಿರುವ ಯೆಹೂದ ಜನಶೇಷದವರೆಲ್ಲರೂ ನನ್ನ ಮಾತು ಸಾಗತಕ್ಕದ್ದೋ ತಮ್ಮ ಮಾತು ಸಾಗತಕ್ಕದ್ದೋ ಎಂದು ತಿಳಿದುಕೊಳ್ಳುವರು.


ಇವರೆಲ್ಲರನ್ನೂ ಕಾರೇಹನ ಮಗನಾದ ಯೋಹಾನಾನನೂ ಸಕಲ ಸೇನಾಪತಿಗಳೂ ಕರೆದುಕೊಂಡು ಐಗುಪ್ತಕ್ಕೆ ಹೋಗಿ ತಹಪನೇಸ್ ಊರಿಗೆ ಸೇರಿದರು. ಯೆಹೋವನ ಮಾತನ್ನು ಕೇಳಲೇ ಇಲ್ಲ.


ಅವರ ಕೃತ್ಯಗಳಿಗೂ ಆಲೋಚನೆಗಳಿಗೂ [ತಕ್ಕದ್ದನ್ನು ಮಾಡುವೆನು]; ನಾನು ಇನ್ನು ಮುಂದೆ ಸಮಸ್ತಜನಾಂಗಗಳನ್ನೂ ಸಕಲಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು; ಅವರು ಬಂದು ನನ್ನ ಮಹಿಮೆಯನ್ನು ನೋಡುವರು.


ಇಸ್ರಾಯೇಲಿನ ದೇಶಭ್ರಷ್ಟರನ್ನು ಕೂಡಿಸಿಕೊಳ್ಳುವ ಕರ್ತನಾದ ಯೆಹೋವನ ನುಡಿಯೇನಂದರೆ - ನಾನು ಕೂಡಿಸಿದ ಇಸ್ರಾಯೇಲ್ಯರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು ಎಂಬದೇ.


ಇದಲ್ಲದೆ ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲಜನಾಂಗಗಳಿಗೂ ಸಾರವತ್ತಾದ ಮೃಷ್ಟಾನ್ನದಿಂದಲೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಔತಣವನ್ನು ಅಣಿಮಾಡುವನು.


ಮತ್ತು ಯೆಹೋವನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು ಅವರು ಆ ದಿನದಲ್ಲಿ ಯೆಹೋವನನ್ನು ತಿಳಿದುಕೊಳ್ಳುವರು; ಹೌದು, ಯಜ್ಞನೈವೇದ್ಯಗಳ ಸೇವೆಯನ್ನಾಚರಿಸಿ ಯೆಹೋವನಿಗೆ ಹರಕೆಮಾಡಿಕೊಂಡು ಅದನ್ನು ನೆರವೇರಿಸುವರು.


ಸಮಸ್ತ ಭೂನಿವಾಸಿಗಳೇ, ಲೋಕದ ಸಕಲ ಜನರೇ, ಬೆಟ್ಟಗಳಲ್ಲಿ ಧ್ವಜವನ್ನೆತ್ತುವಾಗ ನೋಡಿರಿ, ತುತೂರಿಯನ್ನೂದುವಾಗ ಕೇಳಿರಿ!


ಅವನು ಜನಾಂಗಗಳಿಗೆ ಧ್ವಜವನ್ನೆತ್ತಿ ಇಸ್ರಾಯೇಲ್ಯರಲ್ಲಿ ಸೆರೆಗೆ ಒಯ್ಯಲ್ಪಟ್ಟವರನ್ನೂ ಯೆಹೂದದಿಂದ ಚದರಿದವರನ್ನೂ ಭೂವಿುಯ ಚತುರ್ದಿಕ್ಕುಗಳಿಂದಲೂ ಕೂಡಿಸಿಕೊಳ್ಳುವನು.


ಸಾಮಾನ್ಯರ ಗರ್ವದೃಷ್ಟಿಯು ತಗ್ಗಿಹೋಗುವದು, ಮುಖಂಡರ ಅಹಂಕಾರವು ಕುಗ್ಗಿಹೋಗುವದು, ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ಹೊರಟುಬಂದ ಬಹು ಜನಾಂಗದವರು - ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ, ಹೋಗೋಣ! ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು. ಏಕಂದರೆ ಚೀಯೋನಿನಿಂದ ಧರ್ಮೋಪದೇಶವೂ ಯೆರೂಸಲೇವಿುನಿಂದ ಯೆಹೋವನ ವಾಕ್ಯವೂ ಹೊರಡುವವು.


ಉತ್ಸಾಹಧ್ವನಿಯನ್ನು ಕೇಳಿದ ಜನರು ಧನ್ಯರು; ಯೆಹೋವನೇ, ಅವರು ನಿನ್ನ ಮುಖಪ್ರಕಾಶದಲ್ಲಿ ಸಂಚರಿಸುತ್ತಾರೆ.


ಅಮಾವಾಸ್ಯೆಯಲ್ಲಿಯೂ ನಮ್ಮ ಉತ್ಸವದಿನವಾಗಿರುವ ಪೂರ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.


ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತೂರಿಯ ಧ್ವನಿಯೊಡನೆ ಆರೋಹಣಮಾಡಿದ್ದಾನೆ.


ಅದು ಹೋಶೇಯನ ಆಳಿಕೆಯ ಒಂಭತ್ತನೆಯ ವರುಷದಲ್ಲಿ ಅವನ ಸ್ವಾಧೀನವಾಗಲು ಅವನು ಎಲ್ಲಾ ಇಸ್ರಾಯೇಲ್ಯರನ್ನು ಅಶ್ಶೂರ್‍ದೇಶಕ್ಕೆ ಒಯ್ದು ಹಲಹು ಪ್ರಾಂತದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತದಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.


ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವದು; ಆಗ ಸಕಲದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.


ಇದಲ್ಲದೆ ಯೆಹೋವನು ಐಗುಪ್ತ್ಯರನ್ನು ಹೊಡೆಯುವನು, ಗಾಯಮಾಡಿ ವಾಸಿಮಾಡುವವನಾಗಿಯೇ ಹೊಡೆಯುವನು; ಅವರು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಆತನು ಅವರ ವಿಜ್ಞಾಪನೆಯನ್ನು ಲಾಲಿಸಿ ಅವರನ್ನು ಗುಣಪಡಿಸುವನು.


ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ ಅನ್ಯಜನಾಂಗಕ್ಕೆ ಅಸಹ್ಯನೂ ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾವಿುಯೂ ಆದ ಯೆಹೋವನು ಹೀಗೆ ಹೇಳುತ್ತಾನೆ - ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾವಿುಯು ನಿನ್ನನ್ನು ಪರಿಗ್ರಹಿಸಿರುವದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.


ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ ಒಂದೊಂದು ಸಬ್ಬತ್ ದಿನದಲ್ಲಿಯೂ ಸಕಲ ನರಜನ್ಮದವರೂ ನನ್ನ ಸನ್ನಿಧಿಯಲ್ಲಿ ಎರಗುವದಕ್ಕೆ ಬರುವರು; ಇದು ಯೆಹೋವನ ನುಡಿ.


ಹೌದು, ನಾನು ಶಿಕ್ಷಾಹಸ್ತವನ್ನೆತ್ತಿ ಭುಜಪರಾಕ್ರಮವನ್ನು ತೋರಿಸಿ ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ ನೀವು ಚದರಿಹೋಗಿರುವ


ನಾನು ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ ನೀವು ಚದರಿಹೋಗಿರುವ ದೇಶಗಳಿಂದ ತಂದು ಕೂಡಿಸುವಾಗ ನಿಮ್ಮ ಸುಗಂಧಹೋಮವನ್ನು ಆಘ್ರಾಣಿಸಿ ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಆಗ್ರಹವುಳ್ಳವನಾಗಿ ಯಾಕೋಬ್ಯರ ದುರವಸ್ಥೆಯನ್ನು ತಪ್ಪಿಸಿ ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆತೋರಿಸುವೆನು;


ಸಮುದ್ರಕ್ಕೂ ಅಂದಚಂದದ ಪರಿಶುದ್ಧಪರ್ವತಕ್ಕೂ ನಡುವೆ ಅರಮನೆಯಂಥ ತನ್ನ ಗುಡಾರಗಳನ್ನು ಹಾಕಿಸುವನು; ಆಹಾ, ಅವನು ಕೊನೆಗಾಣುವನು, ಯಾರೂ ಅವನಿಗೆ ಸಹಾಯಮಾಡರು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ನನ್ನ ಜನರನ್ನು ಮೂಡಣ ದೇಶದಿಂದಲೂ ಪಡುವಣ ದೇಶದಿಂದಲೂ ಪಾರುಮಾಡಿ ಬರಗೊಳಿಸುವೆನು,


ಆ ದಿನದಲ್ಲಿ ಕರ್ತನು ತನ್ನ ಜನಶೇಷವನ್ನು ಬಿಡಿಸಿಕೊಳ್ಳುವದಕ್ಕೆ ಎರಡನೆಯ ಸಾರಿ ಕೈಹಾಕಿ ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್, ಸಮುದ್ರದ ಕರಾವಳಿ, ಈ ಸ್ಥಳಗಳಲ್ಲಿ ಉಳಿದವರನ್ನು ಬರಮಾಡಿಕೊಳ್ಳುವನು.


ನಾನು ಒಪ್ಪಿಸಿಬಿಡು ಎಂದು ಬಡಗಲಿಗೂ ತಡೆಯಬೇಡ ಎಂದು ತೆಂಕಲಿಗೂ ಹೇಳಿ ದೂರದಲ್ಲಿರುವ ನನ್ನ ಕುಮಾರರನ್ನೂ, ದಿಗಂತಗಳಲ್ಲಿರುವ ನನ್ನ ಕುಮಾರಿಯರನ್ನೂ


ಒಂದು ದಿನವು ಬರುವದು, ಆಗ ಎಫ್ರಾಯೀವಿುನ ಗುಡ್ಡಗಳ ಮೇಲಿರುವ ಕಾವಲುಗಾರರು - ಏಳಿರಿ, ಚೀಯೋನಿಗೆ, ನಮ್ಮ ದೇವರಾದ ಯೆಹೋವನ ಸನ್ನಿಧಾನಕ್ಕೆ ಹೋಗೋಣ ಬನ್ನಿ ಎಂದು ಕೂಗುವರು.


ಫಲವತ್ತಾದ ಭೂವಿುಯ ಮಧ್ಯದಲ್ಲಿನ ಕಾಡಿನೊಳಗೆ ಪ್ರತ್ಯೇಕವಾಗಿ ತಂಗುವ ನಿನ್ನ ಜನರನ್ನು, ನಿನ್ನ ಸ್ವಾಸ್ತ್ಯವಾದ ಹಿಂಡನ್ನು ನಿನ್ನ ಕೋಲಿನಿಂದ ಮೇಯಿಸು; ಪೂರ್ವಕಾಲದಂತೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು