ಯೆಶಾಯ 27:6 - ಕನ್ನಡ ಸತ್ಯವೇದವು J.V. (BSI)6 ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವದು, ಇಸ್ರಾಯೇಲು ಹೂಬಿಟ್ಟು ಚಿಗುರುವದು, ಆ ವೃಕ್ಷವು ಭೂಮಂಡಲವನ್ನೆಲ್ಲಾ ಫಲದಿಂದ ತುಂಬಿಸುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವುದು, ಇಸ್ರಾಯೇಲು ಹೂಬಿಟ್ಟು ಚಿಗುರುವುದು, ಆ ವೃಕ್ಷವು ಭೂಮಂಡಲವನ್ನೆಲ್ಲಾ ಫಲದಿಂದ ತುಂಬಿಸುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಮುಂಬರುವ ಕಾಲದಲಿ ಬೇರೂರುವುದು ಯಕೋಬ ಸಂತಾನ. ಚಿಗುರಿ ಹೂ ಬಿಡುವುದು ಇಸ್ರಯೇಲ್ ಮನೆತನ, ಆ ವೃಕ್ಷಫಲದಿಂದ ತುಂಬಿರುವುದು ಜಗದೆಲ್ಲ ಜನ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಜನರು ನನ್ನ ಬಳಿಗೆ ಬರುವರು. ಆ ಜನರು ಮುಂದಿನ ಕಾಲದಲ್ಲಿ ಯಾಕೋಬನನ್ನು ಆಳವಾದ ಬೇರುಳ್ಳ ಗಿಡದಂತೆ ಬಲಶಾಲಿಯನ್ನಾಗಿ ಮಾಡುವರು. ಬೆಳೆದು ಹೂಬಿಡುವ ಗಿಡದಂತೆ ಅವರು ಇಸ್ರೇಲಿಗೆ ಮಾಡುವರು. ಹಣ್ಣುಗಳಂತೆ ಇಸ್ರೇಲರ ಮಕ್ಕಳು ಭೂಮಿಯ ಮೇಲೆ ತುಂಬಿಹೋಗುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವುದು. ಇಸ್ರಾಯೇಲು ಹೂ ಅರಳಿ ಚಿಗುರುವುದು. ಭೂಲೋಕವನ್ನೆಲ್ಲಾ ಫಲದಿಂದ ತುಂಬಿಸುವನು. ಅಧ್ಯಾಯವನ್ನು ನೋಡಿ |