ಯೆಶಾಯ 27:8 - ಕನ್ನಡ ಸತ್ಯವೇದವು J.V. (BSI)8 ನಿನ್ನ ಪ್ರಜೆಯನ್ನು ಕಳುಹಿಸಿಬಿಡುವದರ ಮೂಲಕ ಅದರೊಡನೆ ವಿುತಿಮೀರದೆ ಹೋರಾಡುತ್ತಿದ್ದೀ; ಮೂಡಣ ಗಾಳಿಯು ಬೀಸಿದ ದಿನದಲ್ಲಿ ಅದರ ಕ್ರೂರವಾದ ಬಡಿತದಿಂದ ನಿನ್ನ ಜನವನ್ನು ತೊಲಗಿಸಿದಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಿನ್ನ ಪ್ರಜೆಯನ್ನು ಕಳುಹಿಸಿಬಿಡುವದರ ಮೂಲಕ ಅದರೊಡನೆ ಮಿತಿಮೀರದೆ ಹೋರಾಡುತ್ತಿದ್ದೀ; ಮೂಡಣದಿಂದ ಗಾಳಿಯು ಬೀಸುವ ದಿನದಲ್ಲಿ ಅದರ ಕ್ರೂರ ಹೊಡೆತದಿಂದ ನಿನ್ನ ಜನರನ್ನು ಹೊರಗೆ ಕಳುಹಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆದರೂ ಸರ್ವೇಶ್ವರ ತಮ್ಮ ಪ್ರಜೆಗೆ ಗಡೀಪಾರು ಶಿಕ್ಷೆಯನ್ನು ವಿಧಿಸಿದರು. ದೂರದ ಮೂಡಣ ಬಿರುಗಾಳಿಯ ಬಡಿತಕ್ಕೆ ಗುರಿಮಾಡಿ ಅವರನ್ನು ತೊಲಗಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯೆಹೋವನು ತನ್ನ ಜನರನ್ನು ದೂರದೇಶಕ್ಕೆ ಕಳುಹಿಸುವದರ ಮೂಲಕ ಅವರನ್ನು ಶಿಕ್ಷಿಸುವನು. ಇಸ್ರೇಲರೊಂದಿಗೆ ಯೆಹೋವನು ಕಟುವಾಗಿ ಮಾತನಾಡುವನು. ಆತನ ಮಾತುಗಳು ಮರುಭೂಮಿಯ ಬಿಸಿಗಾಳಿಯಂತೆ ಸುಡುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯುದ್ಧದಿಂದಲೂ ಸೆರೆಯಿಂದಲೂ ಆಕೆಯೊಂದಿಗೆ ತೃಪ್ತರಾಗಿರಿ. ಆತನು ತನ್ನ ಕೋಪದ ಪೆಟ್ಟಿನಿಂದ ಪೂರ್ವದ ಬಿರುಗಾಳಿ ಬೀಸುವಾಗ ಆಗುವಂತೆ, ಆಕೆಯನ್ನು ಹೊರಗೋಡಿಸುವನು. ಅಧ್ಯಾಯವನ್ನು ನೋಡಿ |