ಯೆಶಾಯ 28:12 - ಕನ್ನಡ ಸತ್ಯವೇದವು J.V. (BSI)12 ಆತನು ಮೊದಲು - ಇದೇ ನಿಮಗೆ ಆವಶ್ಯಕವಾದ ವಿಶ್ರಾಂತಿ, ಬಳಲಿದವರನ್ನು ವಿಶ್ರಮಗೊಳಿಸಿರಿ, ನಿಮಗೆ ಅನುಕೂಲವಾದ ಉಪಶಮನವು ಇದೇ ಎಂದು ಹೇಳಿದಾಗ ಇವರು ಕೇಳಲೊಲ್ಲದೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆತನು ಮೊದಲು, “ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ, ಬಳಲಿದವರಿಗೆ ವಿಶ್ರಾಂತಿ ನೀಡಿ, ನಿಮಗೆ ಅನುಕೂಲವಾದ ಉಪಶಮನವು ಇದೇ” ಎಂದು ಹೇಳುವಾಗ ಇವರು ಕೇಳದೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ : ಬಳಲಿದವರನ್ನು ವಿಶ್ರಮಗೊಳಿಸಿರಿ; ಇದೇ ನಿಮಗೆ ಅನುಕೂಲವಾದ ಉಪಶಮನ” ಎಂದು ದೇವರು ನಿಮಗೆ ಹೇಳಿದಾಗ, ನೀವು ಕೇಳದೆಹೋದಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಹಿಂದಿನ ಕಾಲದಲ್ಲಿ ದೇವರು ಅವರ ಸಂಗಡ ಮಾತನಾಡಿ, “ಇಲ್ಲಿ ವಿಶ್ರಾಂತಿಯ ಸ್ಥಳವಿದೆ, ಇದು ವಿಶ್ರಮಿಸುವ ಸ್ಥಳ. ಆಯಾಸಗೊಂಡವರೇ, ಬಂದು ವಿಶ್ರಮಿಸಿರಿ. ಇದು ಸಮಾಧಾನಕರವಾದ ಸ್ಥಳ” ಎಂದು ಹೇಳುತ್ತಿದ್ದನು. ಆದರೆ ಜನರಿಗೆ ಆತನ ಮಾತುಗಳನ್ನು ಕೇಳಲು ಇಷ್ಟವಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆತನು ಮೊದಲು, “ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ, ಬಳಲಿದವರನ್ನು ವಿಶ್ರಮಗೊಳಿಸಿರಿ. ನಿಮಗೆ ಅನುಕೂಲವಾದ ಉಪಶಮನ ಇದೇ,” ಎಂದು ಹೇಳಿದಾಗಲೂ ಅವರು ಕೇಳಲಿಲ್ಲ. ಅಧ್ಯಾಯವನ್ನು ನೋಡಿ |
ಆಸನು ತನ್ನ ದೇವರಾದ ಯೆಹೋವನಿಗೆ - ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ ನಿನ್ನ ಹೊರತು ರಕ್ಷಕನಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾ ಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನನ್ನು ಎದುರಿಸಿ ಗೆಲ್ಲಬಾರದು ಎಂದು ಮೊರೆಯಿಡಲು