Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 28:16 - ಕನ್ನಡ ಸತ್ಯವೇದವು J.V. (BSI)

16 ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ - ಇಗೋ, ಪರೀಕ್ಷಿತವಾಗಿಯೂ ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದುದರಿಂದ ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ, “ಇಗೋ, ಪರೀಕ್ಷೆಗೆ ಒಳಗಾಗಿ, ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ, ಸ್ಥಿರವಾದ ಆಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಎಂದೇ, ಒಡೆಯರಾದ ಸರ್ವೇಶ್ವರ ಹೀಗೆನ್ನುತ್ತಾರೆ : ‘ಇಗೋ, ನಾನು ಸಿಯೋನಿನಲ್ಲಿ ಅಸ್ತಿವಾರದ ಕಲ್ಲೊಂದನ್ನು ಇಡುತ್ತೇನೆ. ಅದು ಸ್ಥಿರವಾದ, ಪರೀಕ್ಷಿತವಾದ, ಮೌಲ್ಯವಾದ ಮೂಲೆಗಲ್ಲು. ಇದರಲ್ಲಿ ವಿಶ್ವಾಸವಿಡುವವನು ತಾಳ್ಮೆಯಿಂದ ಬಾಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಇದಕ್ಕೋಸ್ಕರವಾಗಿಯೇ, ನನ್ನ ಒಡೆಯನಾದ ಯೆಹೋವನು ಹೀಗೆನ್ನುವನು: “ಚೀಯೋನಿನಲ್ಲಿ ನಾನು ಒಂದು ಮೂಲೆಗಲ್ಲು ಇಡುವೆನು, ಇದು ಬಹು ಅಮೂಲ್ಯವಾದ ಕಲ್ಲು. ಈ ವಿಶೇಷವಾದ ಕಲ್ಲಿನ ಮೇಲೆ ಎಲ್ಲವೂ ಕಟ್ಟಲ್ಪಡುವದು. ಆ ಕಲ್ಲಿನ ಮೇಲೆ ಭರವಸವಿಡುವ ಯಾವನು ಆಶಾಭಂಗಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪರೀಕ್ಷಿತವಾಗಿಯೂ, ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ. ಭರವಸೆ ಇಡುವವನು ಆತುರಪಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 28:16
25 ತಿಳಿವುಗಳ ಹೋಲಿಕೆ  

ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು;


ಇಗೋ, ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದಿಲ್ಲವೆಂತಲೂ ಶಾಸ್ತ್ರದಲ್ಲಿ ಬರೆದದೆಯಲ್ಲಾ. ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು.


ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ ಎಂಬುವ ಶಾಸ್ತ್ರವಚನವನ್ನು ನೀವು ಓದಿಲ್ಲವೇ ಅಂದನು.


ಯೇಸು ಅವರಿಗೆ - ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ ಎಂಬುವ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?


ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ.


ಹಾಕಿರುವ ಅಸ್ತಿವಾರವು ಯೇಸು ಕ್ರಿಸ್ತನೇ; ಆ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ.


ಆತನ ಮೇಲೆ ನಂಬಿಕೆಯಿಡುವ ಯಾವನಾದರೂ ಆಶಾಭಂಗಪಡುವದಿಲ್ಲವೆಂದು ಶಾಸ್ತ್ರವು ಹೇಳುತ್ತದೆಯಷ್ಟೆ.


ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡಿರಿ; ಆ ಒಂದೇ ಕಲ್ಲಿನಲ್ಲಿ ಏಳು ಕಣ್ಣುಳ್ಳಾತನ ದೃಷ್ಟಿಯು ಬಿದ್ದಿದೆ; ಇಗೋ, ನಾನೇ ಅದರಲ್ಲಿ ಕೆತ್ತನೆ ಕೆತ್ತುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ; ಒಂದೇ ದಿನದೊಳಗೆ ದೇಶದ ಪಾಪವನ್ನು ಪರಿಹರಿಸುವೆನು.


ಆದರೂ ಯಾಕೋಬನ ವಂಶಸ್ಥರನ್ನು ರಕ್ಷಿಸುವ ಪರಾಕ್ರವಿುಯ ಭುಜಬಲದಿಂದಲೂ ಇಸ್ರಾಯೇಲನಿಗೆ ಪಾಲಕನೂ ಬಂಡೆಯೂ ಆಗಿರುವಾತನ ಕಡೆಯಿಂದಲೂ ಅವನ ಬಿಲ್ಲು ಸ್ಥಿರವಾಗಿ ನಿಂತಿತು, ಅವನ ಕೈಗಳು ಚುರುಕಾಗಿ ಮಾಡಲ್ಪಟ್ಟವು.


ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವದಿಲ್ಲ, ಮುದ್ರೆಕೋಲು ಅವನ ಪಾದಗಳ ಬಳಿಯಿಂದ ಕದಲುವದಿಲ್ಲ; ಅವನಿಗೆ ಅನ್ಯಜನಗಳೂ ವಿಧೇಯರಾಗಿರುವರು.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ - ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕಂತಲೂ ಲಿಪಿಯುಂಟು.


ಯೆಹೋವನು ಸ್ಥಾಪಿಸಿದ್ದು ಪರಿಶುದ್ಧ ಪರ್ವತಗಳಲ್ಲಿದೆ.


ಹೀಗಿರಲು ಪರಜನಾಂಗದ ರಾಯಭಾರಿಗಳಿಗೆ ಏನುತ್ತರ ಕೊಡಬೇಕಂದರೆ ಯೆಹೋವನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ದೀನದರಿದ್ರರು ಅದನ್ನೇ ಆಶ್ರಯಿಸಿಕೊಳ್ಳುವರು ಎಂಬದೇ.


ಕುಗ್ಗಿದವಳೇ, ಗಾಳಿಯ ಬಡಿತಕ್ಕೆ ಗುರಿಯಾದವಳೇ, ಯಾರೂ ಸಂತೈಸದವಳೇ, ಇಗೋ, ಇಂದ್ರನೀಲಮಣಿಗಳಿಂದ ನಿನಗೆ ಅಸ್ತಿವಾರವನ್ನು ಹಾಕಿ ನಿನ್ನ ಕಲ್ಲುಗಳನ್ನು ನೀಲಾಂಜನದ ಗಾರೆಯಿಂದ ಕಟ್ಟುವೆನು.


ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಅವರು ಹೊರಡುವಾಗ ಯೆಹೋಷಾಫಾಟನು ನಿಂತು ಅವರಿಗೆ - ಯೆಹೂದ್ಯರೇ, ಯೆರೂಸಲೇವಿುನವರೇ, ನನ್ನ ಮಾತನ್ನು ಕೇಳಿರಿ. ಯೆಹೋವನಲ್ಲಿ ಭರವಸವಿಡಿರಿ, ಆಗ ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ಸಾರ್ಥಕರಾಗುವಿರಿ ಎಂದು ಹೇಳಿದನು.


[ಬೆಟ್ಟದೊಳಗಿಂದ] ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು ಕಬ್ಬಿಣ ತಾಮ್ರ ಮಣ್ಣು ಬೆಳ್ಳಿ ಬಂಗಾರಗಳನ್ನು ಚೂರುಚೂರುಮಾಡಿದ್ದು ನಿನ್ನ ಕಣ್ಣಿಗೆ ಬಿತ್ತಲ್ಲಾ; ಇದರಿಂದ ಪರಲೋಕದೇವರು ಮುಂದೆ ನಡೆಯುವ ವಿಷಯಗಳನ್ನು ರಾಜನಿಗೆ ತಿಳಿಯಪಡಿಸಿದ್ದಾನೆ; ಕನಸು ನಿಜ, ಅದರ ಅರ್ಥವು ನಂಬತಕ್ಕದು ಎಂದು ಹೇಳಿದನು.


ಆ ವಂಶದಿಂದ ಮೂಲೆಗಲ್ಲು, ಆ ವಂಶದಿಂದ ಮೊಳೆ, ಆ ವಂಶದಿಂದ ಯುದ್ಧದ ಬಿಲ್ಲು, ಅಂತು ಆ ವಂಶದೊಳಗಿಂದ ಸಕಲ ಅಧಿಕಾರಿಗಳು ಉಂಟಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು