ಯೆಶಾಯ 28:21 - ಕನ್ನಡ ಸತ್ಯವೇದವು J.V. (BSI)21 ಯೆಹೋವನು ಈಗ ಅಪರೂಪವಾದ ತನ್ನ ಕೆಲಸವನ್ನು ನಡಿಸಬೇಕೆಂತಲೂ ಅಪೂರ್ವವಾದ ತನ್ನ ಕಾರ್ಯವನ್ನು ನೆರವೇರಿಸಬೇಕೆಂತಲೂ ಪೆರಾಚೀಮ್ ಬೆಟ್ಟದಲ್ಲಿ ಎದ್ದಂತೆ ಏಳುವನು, ಗಿಬ್ಯೋನ್ ತಗ್ಗಿನಲ್ಲಿ ರೋಷಗೊಂಡಂತೆ ರೋಷಗೊಳ್ಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಯೆಹೋವನು ಈಗ ಅಪರೂಪವಾದ ತನ್ನ ಕೆಲಸವನ್ನು ನಡೆಸಬೇಕೆಂತಲೂ, ಅಪೂರ್ವವಾದ ತನ್ನ ಕಾರ್ಯವನ್ನು ನೆರವೇರಿಸಬೇಕೆಂತಲೂ ಪೆರಾಚೀಮ್ ಬೆಟ್ಟದಲ್ಲಿ ಎದ್ದಂತೆ ಏಳುವನು, ಗಿಬ್ಯೋನ್ ಕಣಿವೆಯಲ್ಲಿ ರೋಷಗೊಂಡಂತೆ ರೋಷಗೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಒಮ್ಮೆ ಸರ್ವೇಶ್ವರ ಪೆರಾಚೀಮ್ ಬೆಟ್ಟದ ಮೇಲೆ ಎದ್ದಂತೆ ಏಳುವರು; ಗೊಬ್ಯೋನ್ ಕಣಿವೆಯಲ್ಲಿ ರೋಷಗೊಂಡಂತೆ ರೋಷಗೊಳ್ಳುವರು. ಆಗ ಅಸಾಧಾರಣ ಕಾರ್ಯವೊಂದನ್ನು ನಡೆಸುವರು; ಅಪೂರ್ವವಾದ ತಮ್ಮ ಕೆಲಸವನ್ನು ನೆರವೇರಿಸುವರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಪೆರಾಚೀಮ್ ಬೆಟ್ಟದ ಮೇಲೆ ಯೆಹೋವನು ಯುದ್ಧ ಮಾಡಿದಂತೆಯೇ ಆತನು ಯುದ್ಧಮಾಡುವನು. ಗಿಬ್ಯೋನ್ ಕಣಿವೆಯಲ್ಲಿ ಯೆಹೋವನು ಕೋಪಗೊಂಡಿದ್ದಂತೆಯೇ ಕೋಪಗೊಳ್ಳುವನು. ಆಗ ಆತನು ಮಾಡಬೇಕಾದ ಕಾರ್ಯಗಳನ್ನು ಮಾಡುವನು. ಯೆಹೋವನು ಕೆಲವು ಅಪರಿಚಿತವಾದ ಸಂಗತಿಗಳನ್ನು ಮಾಡುವನು. ಆದರೆ ಆತನು ತನ್ನ ಕಾರ್ಯವನ್ನು ಮಾಡಿಮುಗಿಸುವನು. ಆ ಕೆಲಸವು ಒಬ್ಬ ಪರಿಚಯವಿಲ್ಲದವನ ಕೆಲಸವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಯೆಹೋವ ದೇವರು ಪೆರಾಚೀಮ್ ಪರ್ವತದಲ್ಲಿ ಎದ್ದಂತೆ ಏಳುವರು. ಹಾಗೆ ಎದ್ದು ಗಿಬ್ಯೋನ್ ತಗ್ಗಿನಲ್ಲಿ ಆದ ಹಾಗೆ ಕೋಪಿಸಿ, ಅಪರೂಪವಾದ ತಮ್ಮ ಕೆಲಸವನ್ನು ನಡಿಸಿ, ಅಪೂರ್ವವಾದ ತಮ್ಮ ಕಾರ್ಯವನ್ನು ನೆರವೇರಿಸುವನು. ಅಧ್ಯಾಯವನ್ನು ನೋಡಿ |