ಯೆಶಾಯ 28:22 - ಕನ್ನಡ ಸತ್ಯವೇದವು J.V. (BSI)22 ಆದಕಾರಣ ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಡಿರಿ; ಭೂಮಂಡಲದಲ್ಲೆಲ್ಲಾ ನಿಶ್ಚಿತಪ್ರಲಯವಾಗಲಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ನುಡಿಯುವದನ್ನು ಕೇಳಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆದುದರಿಂದ, ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಡಿರಿ; ಭೂಮಂಡಲದಲ್ಲೆಲ್ಲಾ ನಿಶ್ಚಿತಪ್ರಳಯವಾಗಲಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ನುಡಿಯುವುದನ್ನು ಕೇಳಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆದಕಾರಣ, ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಟ್ಟುಬಿಡಿ. ‘ಇಡೀ ನಾಡೇ ನಾಶವಾಗಲಿ’ ಎಂಬ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ತೀರ್ಪನ್ನು ನಾನು ಕೇಳಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಈಗ ನೀವು ಆ ವಿಷಯಗಳೊಂದಿಗೆ ಯುದ್ಧ ಮಾಡಬಾರದು. ನೀವು ಹಾಗೆ ಮಾಡಿದ್ದಲ್ಲಿ ನಿಮ್ಮ ಸುತ್ತಲಿರುವ ಹಗ್ಗವು ಇನ್ನೂ ಬಿಗಿಯಾಗುವದು. ನಾನು ಕೇಳಿರುವ ಮಾತುಗಳು ಬದಲಾಗವು. ಯಾಕೆಂದರೆ ಅವು ಸರ್ವಶಕ್ತನಾದ ಯೆಹೋವನ ಮಾತುಗಳು. ಆತನು ಪ್ರಪಂಚವನ್ನು ಆಳುವಾತನು. ಆ ಸಂಗತಿಗಳೆಲ್ಲವೂ ಸಂಭವಿಸುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಹೀಗಿರುವುದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗಬೇಡಿರಿ. ಸರ್ವಶಕ್ತ ಆಗಿರುವ ಕರ್ತ ಯೆಹೋವ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರ ತರಲು ನಿರ್ಣಯಿಸಿದೆ, ಎಂಬ ತೀರ್ಪನ್ನು ನಾನು ಕೇಳಿದ್ದೇನೆ. ಅಧ್ಯಾಯವನ್ನು ನೋಡಿ |