ಯೆಶಾಯ 28:28 - ಕನ್ನಡ ಸತ್ಯವೇದವು J.V. (BSI)28 ಗೋದಿಯ ಕಾಳನ್ನು ನುಚ್ಚು ನುಚ್ಚು ಮಾಡುವನೋ? ತನ್ನ ಕುದುರೆಗಳನ್ನು ಹೊಡೆಯುತ್ತಾ ಗುಂಡನ್ನು ಗಿರ್ರನೆ ಉರುಳಿಸುತ್ತಾ ಯಾವಾಗಲೂ ಒಕ್ಕುತ್ತಿರುವದಿಲ್ಲ; ನುಚ್ಚು ನುಚ್ಚು ಮಾಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಗೋದಿಯ ಕಾಳನ್ನು ನುಚ್ಚು ಮಾಡುವನೋ? ತನ್ನ ಕುದುರೆಗಳ ಗಾಡಿಯ ಚಕ್ರವನ್ನು ಹೊಡೆಯುತ್ತಾ ಗುಂಡನ್ನು ಉರುಳಿಸುತ್ತಾ ಯಾವಾಗಲೂ ಒಕ್ಕುತ್ತಿರುವುದಿಲ್ಲ, ನುಚ್ಚು ಮಾಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಗೋದಿಯನ್ನು ಒಕ್ಕುವಾಗ ಕುದುರೆಗಳನ್ನು ಹೊಡೆದು ಗುಂಡನ್ನು ಉರುಳಿಸಿ ಕಾಳನ್ನು ಪುಡಿಪುಡಿಮಾಡುವನೋ? ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಸ್ತ್ರೀಯು ರೊಟ್ಟಿಯನ್ನು ತಯಾರಿಸುವಾಗ ಹಿಟ್ಟನ್ನು ಕೈಯಲ್ಲಿ ನಾದಿ ಅದನ್ನು ಚೆನ್ನಾಗಿ ಹದಗೊಳಿಸುವಳು. ಆದರೆ ಆಕೆ ಹಾಗೆಯೇ ಮಾಡುತ್ತಾ ಇರುವದಿಲ್ಲ. ಅದೇ ರೀತಿಯಲ್ಲಿ ಯೆಹೋವನು ಜನರನ್ನು ಶಿಕ್ಷಿಸುವನು. ಆತನು ಬಂಡಿಯ ಚಕ್ರದಿಂದ ಬೆದರಿಸುವನು. ಆದರೆ ಅವರನ್ನು ಸಂಪೂರ್ಣವಾಗಿ ಪುಡಿಪುಡಿ ಮಾಡುವದಿಲ್ಲ. ಅವರನ್ನು ತುಳಿದುಬಿಡಲು ಅನೇಕ ಕುದುರೆಗಳನ್ನು ಉಪಯೋಗಿಸುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ರೊಟ್ಟಿಗಾಗಿ ಗೋಧಿಯ ಕಾಳನ್ನು ಪುಡಿಮಾಡಬೇಕು; ಯಾವಾಗಲೂ ಅದನ್ನು ಒಕ್ಕುತ್ತಿರುವುದಿಲ್ಲ. ಅವನ ಬಂಡಿಯ ಚಕ್ರದಿಂದ ಅದರ ಮೇಲೆ ಒಡೆಯುವುದಿಲ್ಲ ಅವನ ಕುದುರೆ ಸವಾರದಿಂದ ಒಕ್ಕುತ್ತಿರುವುದಿಲ್ಲ. ಅಧ್ಯಾಯವನ್ನು ನೋಡಿ |