Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 29:10 - ಕನ್ನಡ ಸತ್ಯವೇದವು J.V. (BSI)

10 ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ ಪ್ರವಾದಿಗಳೆಂಬ ಕಣ್ಣುಗಳನ್ನು ಮುಚ್ಚಿ ದಿವ್ಯದರ್ಶಿಗಳೆಂಬ ತಲೆಗಳಿಗೆ ಮುಸುಕು ಹಾಕಿದ್ದಾನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ, ಪ್ರವಾದಿಗಳ ಕಣ್ಣುಗಳನ್ನು ಮುಚ್ಚಿ, ದಿವ್ಯದರ್ಶಿಗಳ ತಲೆಗಳಿಗೆ ಮುಸುಕು ಹಾಕಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರ ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ ಪ್ರವಾದಿಗಳೆಂಬ ಕಣ್ಣುಗಳನ್ನು ಕಟ್ಟಿಬಿಟ್ಟಿದ್ದಾರೆ. ದಿವ್ಯದರ್ಶನಗಳೆಂಬ ಕಲೆಗಳಿಗೆ ಮುಸುಕು ಹಾಕಿಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನು ನಿಮಗೆ ತೂಕಡಿಕೆ ಬರಮಾಡುವನು. ಆತನು ನಿಮ್ಮ ಕಣ್ಣುಗಳನ್ನು ಮುಚ್ಚುವನು. (ಪ್ರವಾದಿಗಳು ನಿಮ್ಮ ಕಣ್ಣುಗಳಾಗಿದ್ದಾರೆ.) ಯೆಹೋವನು ನಿಮ್ಮ ತಲೆಗಳನ್ನು ಮುಚ್ಚುವನು. (ಪ್ರವಾದಿಗಳು ನಿಮ್ಮ ತಲೆಗಳಾಗಿದ್ದಾರೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೆಹೋವ ದೇವರು ನಿಮ್ಮ ಮೇಲೆ ಗಾಢನಿದ್ರೆಯ ಆತ್ಮವನ್ನು ಹೊಯ್ದು, ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾರೆ. ಪ್ರವಾದಿಗಳನ್ನೂ, ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನು ಮುಚ್ಚಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 29:10
21 ತಿಳಿವುಗಳ ಹೋಲಿಕೆ  

ದೇವರು ಅವರಿಗೆ ಜಡಭಾವವನ್ನು ಅಂದರೆ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟನು; ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಅದೆ ಎಂದು ಬರೆದ ಪ್ರಕಾರ ಅವರಿಗೆ ಆಯಿತು.


ಇಂಥವರು ಏನೂ ತಿಳಿಯದವರು, ಏನೂ ಗ್ರಹಿಸಲಾರದವರು; ಅವರ ಕಣ್ಣು ಕಾಣದಂತೆಯೂ ಹೃದಯ ಗ್ರಹಿಸದಂತೆಯೂ ಯೆಹೋವನು ಅಂಟು ಬಳಿದಿದ್ದಾನಲ್ಲಾ.


ಇವರು ದಿವ್ಯದರ್ಶಿಗಳನ್ನು ಕುರಿತು - ನಿಮಗೆ ದರ್ಶನವಾಗದಿರಲಿ ಅನ್ನುತ್ತಾರೆ; ಮತ್ತು ಸಾಕ್ಷಾತ್ಕಾರಿಗಳಿಗೆ - ನಮಗಾಗಿ ನ್ಯಾಯವಾದವುಗಳನ್ನು ಸಾಕ್ಷಾತ್ಕರಿಸಬೇಡಿರಿ, ನಯವಾದವುಗಳನ್ನು ನಮಗೆ ನುಡಿಯಿರಿ, ಮಾಯವಾದವುಗಳನ್ನೇ ಸಾಕ್ಷಾತ್ಕರಿಸಿರಿ;


(ಪೂರ್ವಕಾಲದಲ್ಲಿ ಇಸ್ರಾಯೇಲ್ಯರಲ್ಲಿ ಯಾವನಾದರೂ ದೈವೋತ್ತರಕೇಳಬೇಕಾದರೆ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ ಎನ್ನುವನು; ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು ಆ ಕಾಲದಲ್ಲಿ ದರ್ಶಿಗಳೆಂದು ಕರೆಯುತ್ತಿದ್ದರು.)


ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಸುವಾರ್ತೆಯ ಪ್ರಕಾಶವು ಉದಯವಾಗಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದನು.


ನೀವು ಇಂಥವರಾದಕಾರಣ ನಿಮಗೆ ರಾತ್ರಿಯಾಗುವದು, ದಿವ್ಯದರ್ಶನವಾಗದು; ನಿಮಗೆ ಕತ್ತಲುಕವಿಯುವದು, ಕಣಿಹೇಳಲಾಗದು; ಸೂರ್ಯನು ಪ್ರವಾದಿಗಳಿಗೆ ಮುಣುಗುವನು, ಹಗಲು ಅವರಿಗೆ ಕಾರ್ಗತ್ತಲಾಗುವದು;


ಒಬ್ಬ ಪ್ರವಾದಿಯು ಮರುಳುಗೊಂಡು ದೈವೋಕ್ತಿಯನ್ನು ನುಡಿದರೆ ಆ ಪ್ರವಾದಿಯನ್ನು ಮರುಳುಗೊಳಿಸಿದವನು ಯೆಹೋವನಾದ ನಾನೇ; ನಾನು ಅವನ ಮೇಲೆ ಕೈಯೆತ್ತಿ ಇಸ್ರಾಯೇಲ್ಯರಾದ ನನ್ನ ಜನರೊಳಗಿಂದ ಅವನನ್ನು ಕಿತ್ತು ನಿರ್ನಾಮಮಾಡುವೆನು.


ಅವರ ಕಣ್ಣು ಮೊಬ್ಬಾಗಿ ಕಾಣದೆಹೋಗಲಿ; ಅವರ ನಡುವು ಯಾವಾಗಲೂ ಬಳುಕುತ್ತಿರಲಿ.


ಸೌಲನ ತಲೆಗಿಂಬಿನ ಬಳಿಯಲ್ಲಿದ್ದ ಬರ್ಜಿ ತಂಬಿಗೆಗಳನ್ನು ತೆಗೆದುಕೊಂಡು ಹೋದನು. ಯಾರೂ ಕಾಣಲಿಲ್ಲ, ಯಾರಿಗೂ ಗೊತ್ತಾಗಲಿಲ್ಲ; ಯಾರೂ ಎಚ್ಚರವಾಗಲಿಲ್ಲ. ಯಾಕಂದರೆ ಯೆಹೋವನು ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದನು; ಒಬ್ಬರಿಗೂ ಎಚ್ಚರವಿಲ್ಲದೆ ಎಲ್ಲರೂ ನಿದ್ರೆಮಾಡುತ್ತಿದ್ದರು.


ನಾನು ಹೀಗೆ ಸಾರಿದೆನು - ಯಾಕೋಬಿನ ಮುಖಂಡರೇ, ಇಸ್ರಾಯೇಲ್ ವಂಶದ ಅಧ್ಯಕ್ಷರೇ, ಕೇಳಿರಿ, ಕೇಳಿರಿ! ನ್ಯಾಯವನ್ನು ಮಂದಟ್ಟುಮಾಡಿಕೊಳ್ಳುವದು ನಿಮ್ಮ ಧರ್ಮವಲ್ಲವೆ.


ಹೀಗಿರುವದರಿಂದ ನಾನು ಈ ಜನರ ಮಧ್ಯದಲ್ಲಿ ಅಧಿಕಾಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು; ಇವರ ಜ್ಞಾನಿಗಳ ಜ್ಞಾನವು ಅಳಿಯುವದು, ವಿವೇಕಿಗಳ ವಿವೇಕವು ಅಡಗುವದು ಎಂದು ಹೇಳಿದನು.


ನಿನ್ನ ಮೂಲಪಿತೃವು ಪಾಪಿಷ್ಠನು, ನಿನ್ನ ಮಧ್ಯಸ್ಥರು ನನಗೆ ದ್ರೋಹಮಾಡಿದವರು.


ಆ ಕಾಲದಲ್ಲಿ ಅರಸನ ಎದೆಯು ಕುಂದುವದು, ಅಧಿಪತಿಗಳ ಹೃದಯವು ಕುಗ್ಗುವದು, ಯಾಜಕರು ಸ್ತಬ್ಧರಾಗುವರು, ಪ್ರವಾದಿಗಳು ಬೆರಗಾಗುವರು ಎಂದು ಯೆಹೋವನು ಅನ್ನುತ್ತಾನೆ.


ಆಹಾ, ಆ ಯಾಜಕಪ್ರವಾದಿಗಳು ಕುರುಡರಂತೆ ಬೀದಿಗಳಲ್ಲಿ ಅಲೆಯುತ್ತಾರೆ; ರಕ್ತದಿಂದ ಹೊಲಸಾಗಿ ಹೋಗಿದ್ದಾರೆ, ಅವರ ಬಟ್ಟೆಯನ್ನು ಯಾರೂ ಮುಟ್ಟರು.


[ಆಹಾ, ಆ ಕೆಡುಕರು] ಪ್ರವಾದನೆ ಮಾಡಬೇಡಿರಿ; ಇಂಥ ವಿಷಯಗಳಲ್ಲಿ ಪ್ರವಾದನೆಯನ್ನೆತ್ತ ಕೂಡದು; ದೂಷಣೆಗಳು ತೊಲಗುವದೇ ಇಲ್ಲ ಎಂದು ಪ್ರವಾದನೆಮಾಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು