Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 29:12 - ಕನ್ನಡ ಸತ್ಯವೇದವು J.V. (BSI)

12 ಅಕ್ಷರವಿಲ್ಲದವನಿಗೆ - ದಯವಿಟ್ಟು ಓದೆಂದು ಒಪ್ಪಿಸಿದರೆ ಅವನು - ನನಗೆ ವಿದ್ಯೆಯಿಲ್ಲ ಅನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅಕ್ಷರವಿಲ್ಲದವನಿಗೆ, “ಇದನ್ನು ಓದು” ಎಂದು ಹೇಳಿದರೆ ಅವನು, “ನನಗೆ ಓದಲು ಬರುವುದಿಲ್ಲ” ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅಕ್ಷರವಿಲ್ಲದವನಿಗೆ, “ದಯವಿಟ್ಟು ಇದನ್ನು ಓದು,” ಎಂದು ಒಪ್ಪಿಸಿದರೆ, ಅವನು : “ನನಗೆ ಅಕ್ಷರವಿದ್ಯೆ ಇಲ್ಲ,” ಎನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಓದುಬರುವವನಿಗೆ ಇದನ್ನು ಓದು ಎಂದು ಹೇಳಿದರೆ ಅವನು, “ಈ ಪುಸ್ತಕ ಮುಚ್ಚಲ್ಪಟ್ಟಿದೆ, ನನಗೆ ತೆರೆಯಲು ಸಾಧ್ಯವಿಲ್ಲ” ಎಂದು ಹೇಳುವನು. ಓದುಬಾರದ ಒಬ್ಬನಿಗೆ ಕೊಟ್ಟರೆ ಅವನು, “ನನಗೆ ಓದಲು ಬರುವದಿಲ್ಲ” ಎಂದು ಹೇಳಿ ಪುಸ್ತಕವನ್ನು ಹಿಂದಕ್ಕೆ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅಕ್ಷರವಿಲ್ಲದವನಿಗೆ ಆ ಪುಸ್ತಕವನ್ನು ಒಪ್ಪಿಸಿದರೆ ಅವನು ನನಗೆ ಓದಲು ಬರುವುದಿಲ್ಲ ಅನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 29:12
8 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ಕಿವುಡರು ಶಾಸ್ತ್ರದ ಮಾತುಗಳನ್ನು ಕೇಳುವರು, ಮೊಬ್ಬುಕತ್ತಲುಗಳಲ್ಲಿಯೂ ಕುರುಡರ ಕಣ್ಣು ಕಾಣುವದು.


ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟದರಿಂದ ಇನ್ನು ನನಗೆ ಯಾಜಕ ಸೇವೆಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು; ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ ನಾನು ನಿಮ್ಮ ಸಂತತಿಯವರನ್ನು ಮರೆಯುವೆನು.


ಹೀಗಿರುವಲ್ಲಿ ನಾನು - ಇವರು ಬಡವರು, ಮೂಢರು, ಯೆಹೋವನ ಮಾರ್ಗವನ್ನೂ ತಮ್ಮ ದೇವರ ನ್ಯಾಯವಿಧಿಗಳನ್ನೂ ತಿಳಿಯದವರು;


ಬೋಧನೆಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ಉಪದೇಶವನ್ನು ಮುಚ್ಚಿ ಮುದ್ರಿಸು.


ದೈವದರ್ಶನವೆಲ್ಲಾ ಮುದ್ರೆಹಾಕಿದ ಶಾಸ್ತ್ರದ ಮಾತಿನ ಹಾಗಿದೆ; ಅದನ್ನು ಅಕ್ಷರಬಲ್ಲವನಿಗೆ - ದಯಮಾಡಿ ಓದೆಂದು ಒಪ್ಪಿಸಿದರೆ ಅವನು - ಮುದ್ರೆಹಾಕಿದೆಯಲ್ಲಾ, ಆಗುವದಿಲ್ಲ ಅನ್ನುವನು;


ಮತ್ತು ಯೆಹೋವನು - ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು