Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 29:13 - ಕನ್ನಡ ಸತ್ಯವೇದವು J.V. (BSI)

13 ಮತ್ತು ಯೆಹೋವನು - ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರ ಹೀಗೆಂದರು : “ಈ ಜನರು ನನ್ನನ್ನು ಸಮೀಪಿಸುವುದು ಬರೀ ಮಾತಿನ ಮರ್ಯಾದೆಯಿಂದ, ಇವರು ನನ್ನನ್ನು ಸನ್ಮಾನಿಸುವುದು ಬರೀ ಮಾತಿನ ಮಾಲೆಯಿಂದ, ಇವರ ಹೃದಯವಾದರೋ ಬಲು ದೂರವಿದೆ ನನ್ನಿಂದ, ಇವರು ನನಗೆ ಸಲ್ಲಿಸುವ ಭಕ್ತಿ ಕೂಡಿದೆ ಕೇವಲ ಭಯದಿಂದ, ಕಲಿತಿಹರಿವರು ಮಾನವಕಲ್ಪಿತ ಕಟ್ಟಳೆಯನು ಬಾಯಿಪಾಠದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನನ್ನ ಒಡೆಯನು ಹೇಳುವುದೇನೆಂದರೆ, “ನನ್ನನ್ನು ಪ್ರೀತಿಸುವದಾಗಿ ಇವರು ಹೇಳುತ್ತಾರೆ. ಅವರು ತಮ್ಮ ಮಾತುಗಳಿಂದ ನನ್ನನ್ನು ಗೌರವಿಸುತ್ತಾರೆ. ಆದರೆ ಅವರ ಹೃದಯಗಳು ನನ್ನಿಂದ ದೂರವಾಗಿವೆ. ಅವರು ನನಗೆ ತೋರಿಸುವ ಗೌರವವು ಅವರು ಬಾಯಿಪಾಠ ಮಾಡಿದ ಮಾನವ ನಿರ್ಮಿತವಾದ ನಿಯಮಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಕರ್ತರು ಹೇಳುವುದೇನೆಂದರೆ: “ಈ ಜನರು ಬಾಯಿಂದ ನನ್ನನ್ನು ಸಮೀಪಿಸಿ, ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 29:13
25 ತಿಳಿವುಗಳ ಹೋಲಿಕೆ  

ನೀನು ಅವರನ್ನು ನಾಟಿದ್ದೀ, ಅವರು ಬೇರೂರಿ ಬೆಳೆದು ಹಣ್ಣುಬಿಟ್ಟಿದ್ದಾರೆ; ನೀನು ಅವರ ಬಾಯಿಗೆ ಸಮೀಪ, ಅಂತರಿಂದ್ರಿಯಕ್ಕೆ ದೂರ.


ಇಸ್ರಾಯೇಲಿಗೆ ಇಷ್ಟು ದಂಡನೆ ಆದರೂ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನನ್ನ ಕಡೆಗೆ ಪೂರ್ಣಮನದಿಂದಲ್ಲ, ಕಪಟದಿಂದಲೇ ತಿರುಗಿಕೊಂಡಿದ್ದಾಳೆ ಎಂಬದು ಯೆಹೋವನಾದ ನನ್ನ ನುಡಿ.


ಆತನ ಮಾತುಗಳಿಗೆ ಯಾವದನ್ನೂ ಸೇರಿಸಬೇಡ; ಆತನು ನಿನ್ನನ್ನು ಖಂಡಿಸುವಾಗ ನೀನು ಸುಳ್ಳುಗಾರನೆಂದು ತೋರಿಬಂದೀಯೆ.


ಅದನ್ನು ಮುಟ್ಟಬೇಡ ಎನ್ನುವ ನಿಬಂಧನೆಗಳಿಗೆ ನಿಮ್ಮನ್ನು ಒಳಗಾಗಮಾಡಿಕೊಳ್ಳುವದೇಕೆ? ಆ ಪದಾರ್ಥಗಳೆಲ್ಲವೂ ಬಳಸುವದರಲ್ಲಿ ನಾಶವಾಗುತ್ತವೆ.


ಜನರು ಯೆಹೋವನ ಜೀವದಾಣೆ ಎಂದರೂ ಆ ಆಣೆಯು ಸುಳ್ಳೇ ಸುಳ್ಳು [ಎಂದು ಯೆಹೋವನು ಅನ್ನುತ್ತಾನೆ].


ನಿಮ್ಮನ್ನು ನೀವೇ ಮೋಸಪಡಿಸಿಕೊಂಡಿದ್ದೀರಿ; ನೀವು ನನ್ನ ಬಳಿಗೆ ಬಂದು - ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು; ನಮ್ಮ ದೇವರಾದ ಯೆಹೋವನು ಯಾವ ಅಪ್ಪಣೆಕೊಡುತ್ತಾನೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು ಎಂಬದಾಗಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವದಕ್ಕೆ ನನ್ನನ್ನು ಕಳುಹಿಸಿದಿರಲ್ಲಾ.


ಯೆಹೋವನೇ, ನ್ಯಾಯವಾದದ್ದನ್ನು ಆಲೈಸು; ನನ್ನ ಮೊರೆಗೆ ಲಕ್ಷ್ಯವಿಡು. ನನ್ನ ಪ್ರಾರ್ಥನೆಗೆ ಕಿವಿಗೊಡು, ಅದು ಕಪಟವಾದ ಬಾಯಿಂದ ಬಂದದ್ದಲ್ಲ.


ನಾನು ಅದನ್ನು ಭ್ರಷ್ಟ ಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ [ನನ್ನ] ಪ್ರಜೆಯನ್ನು ಸೂರೆಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದುಹಾಕಬೇಕೆಂದು ಅದಕ್ಕೆ ಅಪ್ಪಣೆಕೊಡುವೆನು.


ಅದಕ್ಕೆ ಸೌಲನು - ನಾನು ಪಾಪ ಮಾಡಿದ್ದೇನೆ; ದಯವಿಟ್ಟು ಇಸ್ರಾಯೇಲ್ಯರ ಮುಂದೆಯೂ ಜನರ ಹಿರಿಯರ ಮುಂದೆಯೂ ನನ್ನ ಮಾನವನ್ನುಳಿಸು; ನಾನು ನಿನ್ನ ದೇವರಾದ ಯೆಹೋವನನ್ನು ಆರಾಧಿಸುವದಕ್ಕಾಗುವಂತೆ ಹಿಂದಿರುಗಿ ನನ್ನ ಜೊತೆಯಲ್ಲಿ ಬಾ ಎಂದು ಬೇಡಿಕೊಳ್ಳಲು ಅವನು ಹಿಂದಿರುಗಿ ಸೌಲನ ಜೊತೆಯಲ್ಲಿ ಹೋದನು.


ದುಷ್ಟರಿಗಾದರೋ ದೇವರು ಹೇಳುವದೇನಂದರೆ - ನನ್ನ ವಿಧಿಗಳನ್ನು ಪಠಿಸುವದಕ್ಕೆ ನಿಮಗೇನು ಬಾಧ್ಯತೆ ಉಂಟು? ನನ್ನ ನಿಬಂಧನೆಯನ್ನು ಉಚ್ಚರಿಸುವದು ನಿಮಗೇನು ಕೆಲಸ?


ಅಯ್ಯೋ, ಅರೀಯೇಲೇ, ಅರೀಯೇಲೇ, ದಾವೀದನು ಸೈನ್ಯಸಮೇತನಾಗಿ ವಾಸಿಸಿದ ಪಟ್ಟಣವೇ, ನಿನ್ನ ಗತಿಯನ್ನು ಏನು ಹೇಳಲಿ! ಈ ವರುಷಕ್ಕೆ ಮುಂದಿನ ವರುಷವನ್ನು ಸೇರಿಸಿರಿ; ಹಬ್ಬಗಳು ಸುತ್ತಿಬರಲಿ; ಆಮೇಲೆ ನಾನು ಅರೀಯೇಲನ್ನು ಬಾಧಿಸುವೆನು; ಅರಿಚಾಟ ಕಿರಿಚಾಟವಾಗುವದು;


ಅಕ್ಷರವಿಲ್ಲದವನಿಗೆ - ದಯವಿಟ್ಟು ಓದೆಂದು ಒಪ್ಪಿಸಿದರೆ ಅವನು - ನನಗೆ ವಿದ್ಯೆಯಿಲ್ಲ ಅನ್ನುವನು.


ಆಗ ಆತನು ಅವರ ಮೇಲೆ ತನ್ನ ರೋಷಾಗ್ನಿಯನ್ನೂ ಯುದ್ಧದ ರೌದ್ರವನ್ನೂ ಸುರಿಸಿದನು. ಎಲ್ಲಾ ಕಡೆಯಿಂದಲೂ ಅವರಿಗೆ ಉರಿಹತ್ತಿತು, ಆದರೆ ಅವರು ತಿಳಿಯಲಿಲ್ಲ; ದಹಿಸಿತು, ಲಕ್ಷ್ಯಕ್ಕೆ ತರಲಿಲ್ಲ.


ಯೆಹೋವನೇ, ನಾವು ನಿನ್ನ ಮಾರ್ಗದಿಂದ ತಪ್ಪಿ ಅಲೆಯುವಂತೆ ಏಕೆ ಮಾಡುತ್ತೀ? ನಾವು ನಿನಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿನ ಪಡಿಸುವದೇಕೆ? ನಿನ್ನ ಸೇವಕರ ನಿವಿುತ್ತ ನಿನ್ನ ಬಾಧ್ಯವಾದ ಕುಲಗಳಿಗಾಗಿ ತಿರುಗಿ ಪ್ರಸನ್ನನಾಗು,


ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಬಂದು ನನ್ನ ಮುಂದೆ ಕೂತುಕೊಂಡಿರುವಾಗ


ನರಪುತ್ರನೇ, ನಿನ್ನ ಜನರು ಗೋಡೆಗಳ ನೆರಳಿನಲ್ಲಿಯೂ ಮನೆಯ ಬಾಗಿಲುಗಳಲ್ಲಿಯೂ ನಿನ್ನ ಪ್ರಸ್ತಾಪವನ್ನೆತ್ತಿ ಪರಸ್ಪರವಾಗಿ ಒಬ್ಬರಿಗೊಬ್ಬರು - ಯೆಹೋವನ ಬಾಯಿಂದ ಹೊರಟ ಮಾತೇನು ಕೇಳೋಣ ಬನ್ನಿರಿ ಎಂದು ಹೇಳಿಕೊಳ್ಳುತ್ತಿದ್ದಾರೆ.


[ನೀವು ಹಿಡಿದಿರುವ] ಮಾರ್ಗದಿಂದ ತೊಲಗಿರಿ; ನಿಮ್ಮ ದಾರಿಗೆ ಓರೆಯಾಗಿರಿ; ಇಸ್ರಾಯೇಲ್ಯರ ಸದಮಲಸ್ವಾವಿುಯನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ ಎಂದು ಹೇಳುತ್ತಾರೆ.


ಅವರು ಹಾಸಿಗೆಯ ಮೇಲೆ ಬಿದ್ದುಕೊಂಡು ಧಾನ್ಯದ್ರಾಕ್ಷಾರಸಗಳಿಗೆ ಅರಚಿಕೊಳ್ಳುತ್ತಾರೆಯೇ ಹೊರತು ನನ್ನನ್ನು ಮನಃಪೂರ್ವಕವಾಗಿ ಎಂದೂ ಪ್ರಾರ್ಥಿಸಲಿಲ್ಲ; ನನ್ನನ್ನು ತೊರೆದುಬಿಟ್ಟು ತಮ್ಮ ದೇಹಗಳನ್ನು ಗಾಯಮಾಡಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು