ಯೆಶಾಯ 29:14 - ಕನ್ನಡ ಸತ್ಯವೇದವು J.V. (BSI)14 ಹೀಗಿರುವದರಿಂದ ನಾನು ಈ ಜನರ ಮಧ್ಯದಲ್ಲಿ ಅಧಿಕಾಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು; ಇವರ ಜ್ಞಾನಿಗಳ ಜ್ಞಾನವು ಅಳಿಯುವದು, ವಿವೇಕಿಗಳ ವಿವೇಕವು ಅಡಗುವದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಹೀಗಿರುವುದರಿಂದ ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ, ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು; ಇವರ ಜ್ಞಾನಿಗಳ ಜ್ಞಾನವು ಅಳಿಯುವುದು, ವಿವೇಕಿಗಳ ವಿವೇಕವು ಅಡಗುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇಂತಿರಲು ಇವರ ಮಧ್ಯೆ ಎಸಗುವೆನು ಅಧಿಕಾಶ್ಚರ್ಯವಾದ ಅದ್ಭುತಕಾರ್ಯಗಳನು, ಅಳಿವುದು ಇವರ ಜ್ಞಾನಿಗಳ ಜ್ಞಾನವು, ಅಡಗುವುದು ವಿವೇಕಿಗಳ ವಿವೇಕವು". ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಾನು ಅದ್ಭುತಕಾರ್ಯಗಳಿಂದ ಅವರನ್ನು ಆಶ್ಚರ್ಯಗೊಳಿಸುತ್ತಾ ಇರುವೆನು. ಅವರ ಜ್ಞಾನಿಗಳು ತಮ್ಮ ಜ್ಞಾನವನ್ನು ಕಳೆದುಕೊಳ್ಳುವರು. ಅವರು ಅರ್ಥಮಾಡಿಕೊಳ್ಳಲಾರರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಹೀಗಿರುವುದರಿಂದ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಇನ್ನೂ ಮಾಡುವೆನು. ಅವರ ಜ್ಞಾನಿಗಳ ಜ್ಞಾನವು ಅಳಿಯುವುದು. ಅವರ ವಿವೇಕಿಗಳ ವಿವೇಕವು ಅಡಗಿಕೊಳ್ಳುವುದು.” ಅಧ್ಯಾಯವನ್ನು ನೋಡಿ |