ಯೆಶಾಯ 29:15 - ಕನ್ನಡ ಸತ್ಯವೇದವು J.V. (BSI)15 ತಮ್ಮ ಆಲೋಚನೆಯನ್ನು ಯೆಹೋವನಿಗೆ ಮರೆಮಾಜುವದಕ್ಕೆ ಅಗಾಧೋಪಾಯ ಮಾಡಿ ನಮ್ಮನ್ನು ಯಾರು ನೋಡಿಯಾರು, ಯಾರು ತಿಳಿದಾರು ಅಂದುಕೊಂಡು ಕತ್ತಲಲ್ಲೇ ತಮ್ಮ ಕೆಲಸಗಳನ್ನು ನಡಿಸುವವರ ಗತಿಯನ್ನು ಏನು ಹೇಳಲಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ತಮ್ಮ ಆಲೋಚನೆಯನ್ನು ಯೆಹೋವನಿಗೆ ಮರೆಮಾಡುವುದಕ್ಕೆ, ಅಗಾಧಕ್ಕೆ ಹೋಗಿ, “ನಮ್ಮನ್ನು ಯಾರು ನೋಡುವರು? ಯಾರು ತಿಳಿದಾರು?” ಅಂದುಕೊಂಡು ಕತ್ತಲಲ್ಲೇ ತಮ್ಮ ಕೆಲಸಗಳನ್ನು ನಡೆಸುವವರ ಗತಿಯನ್ನು ಏನು ಹೇಳಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ತಮ್ಮ ಆಲೋಚನೆಯನ್ನು ಸರ್ವೇಶ್ವರ ಸ್ವಾಮಿಯಿಂದ ಬಚ್ಚಿಡುವುದಕ್ಕಾಗಿ ಒಳಸಂಚುಮಾಡುವವರಿಗೆ ಧಿಕ್ಕಾರ ! ಇವರು, “ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ಗಮನಿಸಿಯಾರು?” ಎಂದುಕೊಂಡು ಕತ್ತಲಲ್ಲೇ ತಮ್ಮ ಕೃತ್ಯಗಳನ್ನು ನಡೆಸುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೆಹೋವನಿಗೆ ತಮ್ಮ ಆಲೋಚನೆಗಳು ತಿಳಿಯಬಾರದೆಂದು ಕುತಂತ್ರೋಪಾಯಗಳನ್ನು ಮಾಡಿ, ಕತ್ತಲೆಯಲ್ಲಿ ದುಷ್ಕೃತ್ಯಗಳನ್ನು ಮಾಡುತ್ತಾ, “ನಮ್ಮನ್ನು ಯಾರು ನೋಡಬಲ್ಲರು, ನಮ್ಮನ್ನು ಯಾರು ಗುರುತಿಸಬಲ್ಲರು?” ಎಂದುಕೊಳ್ಳುವವರ ಗತಿಯನ್ನು ಏನು ಹೇಳಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ತಮ್ಮ ಆಲೋಚನೆಗಳನ್ನು ಯೆಹೋವ ದೇವರಿಗೆ ಮರೆಮಾಡುವುದಕ್ಕೆ ಅಗಾಧದಲ್ಲಿ ಹೋಗಿ, ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ತಿಳಿದಾರು? ಎಂದುಕೊಂಡು, ಕತ್ತಲೆಯಲ್ಲೇ ತಮ್ಮ ಕೆಲಸವನ್ನು ನಡಿಸುವವರಿಗೆ ಕಷ್ಟ! ಅಧ್ಯಾಯವನ್ನು ನೋಡಿ |