Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 29:18 - ಕನ್ನಡ ಸತ್ಯವೇದವು J.V. (BSI)

18 ಆ ದಿನದಲ್ಲಿ ಕಿವುಡರು ಶಾಸ್ತ್ರದ ಮಾತುಗಳನ್ನು ಕೇಳುವರು, ಮೊಬ್ಬುಕತ್ತಲುಗಳಲ್ಲಿಯೂ ಕುರುಡರ ಕಣ್ಣು ಕಾಣುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ದಿನದಲ್ಲಿ ಕಿವುಡರು ಶಾಸ್ತ್ರದ ಮಾತುಗಳನ್ನು ಕೇಳುವರು ಮತ್ತು ಕುರುಡರ ಕಣ್ಣುಗಳು ಕತ್ತಲೆಯೊಳಗೂ ಕಾಣುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆ ದಿನದಂದು ಕಿವುಡರು ಗ್ರಂಥವಾಕ್ಯಗಳನ್ನು ಓದುವುದನ್ನು ಕೇಳುವರು. ಕುರುಡರಿಗೆ ಮಬ್ಬಿನಲ್ಲೂ ಕತ್ತಲಲ್ಲೂ ಕಣ್ಣು ಕಾಣಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಪುಸ್ತಕದಲ್ಲಿರುವ ಮಾತುಗಳನ್ನು ಕಿವುಡನು ಕೇಳಿಸಿಕೊಳ್ಳುವನು. ಕುರುಡನು ಕತ್ತಲೆಯಲ್ಲಿಯೂ ಮಂಜು ತುಂಬಿದ್ದಾಗಲೂ ನೋಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆ ದಿನದಲ್ಲಿ ಕಿವುಡರು ಗ್ರಂಥದ ಮಾತುಗಳನ್ನು ಕೇಳುವರು ಮತ್ತು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ, ಅಂಧಕಾರದೊಳಗಿಂದಲೂ ಕಾಣುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 29:18
28 ತಿಳಿವುಗಳ ಹೋಲಿಕೆ  

ಆಗ ಕುರುಡರ ಕಣ್ಣು ಕಾಣುವದು, ಕಿವುಡರ ಕಿವಿ ಕೇಳುವದು, ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯು ಹರ್ಷಧ್ವನಿಗೈಯುವದು;


ಅವರು ಅತ್ಯಂತಾಶ್ಚರ್ಯಪಟ್ಟು - ಎಲ್ಲಾ ಚೆನ್ನಾಗಿ ಮಾಡಿದ್ದಾನೆ; ಕಿವುಡರಾದರೂ ಕೇಳುವಂತೆ ಮಾಡುತ್ತಾನೆ, ಮೂಕರಾದರೂ ಮಾತಾಡುವಂತೆ ಮಾಡುತ್ತಾನೆ ಅಂದುಕೊಂಡರು.


ಆಗ ನೋಡುವವರ ಕಣ್ಣು ಮೊಬ್ಬಾಗದು, ಕೇಳುವವರ ಕಿವಿ ಮಂದವಾಗದು.


ಕೇಳುವ ಕಿವಿ, ನೋಡುವ ಕಣ್ಣು, ಇವೆರಡನ್ನೂ ಯೆಹೋವನು ನಿರ್ಮಿಸಿದ್ದಾನೆ.


ನನ್ನ ಕಣ್ಣು ತೆರೆ; ಆಗ ನಿನ್ನ ಧರ್ಮಶಾಸ್ತ್ರದ ಅದ್ಭುತಗಳನ್ನು ಕಂಡುಕೊಳ್ಳುವೆನು.


ಅವರು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು ನನ್ನಲ್ಲಿ ನಂಬಿಕೆಯಿಡುವದರಿಂದ ಪಾಪಪರಿಹಾರವನ್ನೂ ಪವಿತ್ರರಾದವರಲ್ಲಿ ಹಕ್ಕನ್ನೂ ಹೊಂದುವಂತೆ ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಅಂದನು.


ಹೀಗಿರಲು ಆತನು ಅವರಿಗೆ ಪ್ರತ್ಯುತ್ತರವಾಗಿ - ನೀವು ಹೋಗಿ ಕಂಡು ಕೇಳಿದವುಗಳನ್ನು ಯೋಹಾನನಿಗೆ ತಿಳಿಸಿರಿ; ಕುರುಡರಿಗೆ ಕಣ್ಣು ಬರುತ್ತವೆ, ಕುಂಟರಿಗೆ ಕಾಲು ಬರುತ್ತವೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರಿಗೆ ಕಿವಿ ಬರುತ್ತವೆ, ಸತ್ತವರು ಜೀವವನ್ನು ಹೊಂದುತ್ತಾರೆ, ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.


ತಪ್ಪಿದ ಹೃದಯವುಳ್ಳವರೆಲ್ಲರೂ ವಿವೇಕಿಗಳಾಗುವರು, ಗುಣುಗುಟ್ಟುವವರು ಉಪದೇಶವನ್ನು ಗಮನಿಸುವರು ಎಂದು ಹೇಳುತ್ತಾನೆ.


ನೀನು ಐಶ್ವರ್ಯವಂತನಾಗುವಂತೆ ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ, ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದುಕೊಳ್ಳುವದಕ್ಕಾಗಿ ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇನೆ.


ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ.


ಆದದರಿಂದ - ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಕ್ರಿಸ್ತನು ನಿನಗೆ ಪ್ರಕಾಶ ಕೊಡುವನು ಎಂದು ಹೇಳಿಯದೆ.


ಅವರೆಲ್ಲರು ದೇವರಿಂದ ಶಿಕ್ಷಿತರಾಗಿರುವರು ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದದೆ; ತಂದೆಯಿಂದ ಕೇಳಿ ಕಲಿತವರೆಲ್ಲರು ನನ್ನ ಬಳಿಗೆ ಬರುತ್ತಾರೆ.


ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು, ಸೆರೆಯವರಿಗೆ ಬಿಡುಗಡೆಯಾಗುವದನ್ನು ಮತ್ತು ಕುರುಡರಿಗೆ ಕಣ್ಣು ಬರುವದನ್ನು ಪ್ರಸಿದ್ಧಿಪಡಿಸುವದಕ್ಕೂ ಮನಮುರಿದವರನ್ನು ಬಿಡಿಸಿ ಕಳುಹಿಸುವದಕ್ಕೂ


ಅದಕ್ಕೆ ಯೇಸು - ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಈ ಗುಟ್ಟು ನಿನಗೆ ತಿಳಿಸಿದವನು ನರಮನುಷ್ಯನಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ತಿಳಿಸಿದನು.


ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು, ಕೇಳುವ ಕಿವಿ ಇವುಗಳನ್ನು ಯೆಹೋವನು ಇಂದಿನವರೆಗೂ ನಿಮಗೆ ಅನುಗ್ರಹಿಸಲಿಲ್ಲ ಅಯ್ಯೋ.


ನೀನು ಸಿಲೋವ ಕೊಳಕ್ಕೆ ಹೋಗಿ ತೊಳಕೋ ಅಂದನು. (ಸಿಲೋವ ಎಂಬ ಮಾತಿಗೆ ಕಳುಹಿಸಲ್ಪಟ್ಟವನು ಎಂದರ್ಥ.) ಅವನು ಹೋಗಿ ತೊಳಕೊಂಡು ಕಣ್ಣು ಹೊಂದಿದವನಾಗಿ ಬಂದನು.


ಯೆಹೋವನೆಂಬ ನಾನು ನನ್ನ ಧರ್ಮದ ಸಂಕಲ್ಪನುಸಾರವಾಗಿ ನಿನ್ನನ್ನು ಕರೆದು ಕೈಹಿಡಿದು ಕಾಪಾಡಿ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇವಿುಸಿದ್ದೇನೆ.


ನನ್ನ ಸೇವಕನ ಹೊರತು ಯಾರು ಕುರುಡರು? ನಾನು ಕಳುಹಿಸುವ ದೂತನಂತೆ ಯಾರು ಕಿವುಡರು? ನನ್ನ ಭಕ್ತನ ಹಾಗೆ ಯಾರು ಕುರುಡರು? ಯೆಹೋವನ ಸೇವಕನ ಪ್ರಕಾರ ಅಂಧಕರು ಯಾರು?


ಕಣ್ಣಿದ್ದರೂ ಕುರುಡಾದ ಕಿವಿಯಿದ್ದರೂ ಕಿವುಡಾದ ಜನವನ್ನು ಕರೆ.


ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು, ಅವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆಹಾಕು, ಅಂತ್ಯಕಾಲದವರೆಗೆ ಮರೆಯಾಗಿರಲಿ; ಬಹು ಜನರು ಅತ್ತಿತ್ತ ತಿರುಗುವರು, ತಿಳುವಳಿಕೆಯು ಹೆಚ್ಚುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು