ಯೆಶಾಯ 29:22 - ಕನ್ನಡ ಸತ್ಯವೇದವು J.V. (BSI)22 ಹೀಗಿರಲು ಅಬ್ರಹಾಮನನ್ನು ಉದ್ಧರಿಸಿದ ಯೆಹೋವನು ಯಾಕೋಬನ ಮನೆತನದ ವಿಷಯವಾಗಿ - ಯಾಕೋಬ್ಯರು ಇನ್ನು ನಾಚಿಕೆಗೆ ಈಡಾಗರು, ಅವರ ಮುಖವು ಇನ್ನು ಬಾಡದು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಹೀಗಿರಲು ಅಬ್ರಹಾಮನನ್ನು ಉದ್ಧರಿಸಿದ ಯೆಹೋವನು ಯಾಕೋಬನ ಮನೆತನದ ವಿಷಯವಾಗಿ, “ಯಾಕೋಬ್ಯರು, ಇನ್ನು ನಾಚಿಕೆಪಡುವುದಿಲ್ಲ, ಅವರ ಮುಖವು ಇನ್ನು ಕಳೆಗುಂದುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಹೀಗಿರಲು ಅಬ್ರಹಾಮನನ್ನು ಉದ್ಧರಿಸಿದ ಸರ್ವೇಶ್ವರ ಸ್ವಾಮಿ ಯಕೋಬನ ಮನೆತನದ ವಿಷಯವಾಗಿ ಹೀಗೆನ್ನುತ್ತಾರೆ : “ಯಕೋಬ ವಂಶದವರೇ, ಇನ್ನು ಮೇಲೆ ನೀವು ನಾಚಿಕೆಗೀಡಾಗುವುದಿಲ್ಲ, ನಿಮ್ಮ ಮುಖ ಇನ್ನು ಬಾಡುವುದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೆಹೋವನು ಯಾಕೋಬನ ವಂಶಕ್ಕೆ ಹೀಗೆನ್ನುತ್ತಾನೆ: “ಅಬ್ರಹಾಮನನ್ನು ಬಿಡಿಸಿದ ಯೆಹೋವನೇ ನಾನು. ಈಗ ಯಾಕೋಬಿನ ಜನರು ನಾಚಿಕೆಪಡುವದಿಲ್ಲ ಮತ್ತು ಅವಮಾನ ಹೊಂದುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದ್ದರಿಂದ ಅಬ್ರಹಾಮನನ್ನು ವಿಮೋಚಿಸಿದ ಯೆಹೋವ ದೇವರು ಯಾಕೋಬಿನ ಮನೆತನದ ವಿಷಯವಾಗಿ ಹೇಳುವುದೇನೆಂದರೆ, “ಈಗ ಯಾಕೋಬ್ಯರು ನಾಚಿಕೆಪಡುವುದಿಲ್ಲ. ಅವನ ಮುಖವು ಕಳೆಗುಂದುವುದಿಲ್ಲ. ಅಧ್ಯಾಯವನ್ನು ನೋಡಿ |