ಯೆಶಾಯ 29:23 - ಕನ್ನಡ ಸತ್ಯವೇದವು J.V. (BSI)23 ಯಾಕೋಬ ವಂಶದವರು ತಮ್ಮ ಮಧ್ಯದಲ್ಲಿ ನಾನು ನಡಿಸುವ ಕೆಲಸವನ್ನು ನೋಡಿ ನನ್ನ ನಾಮವೇ ಆರಾಧನೆಗೆ ಅರ್ಹವೆಂದು ಪ್ರತಿಷ್ಠಿಸುವರು; ಹೌದು, ಯಾಕೋಬ್ಯರ ಸದಮಲಸ್ವಾವಿುಯನ್ನು ಪ್ರತಿಷ್ಠೆಪಡಿಸಿ ಇಸ್ರಾಯೇಲ್ಯರ ದೇವರಿಗೆ ನಡುಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಯಾಕೋಬ ವಂಶದವರು ತಮ್ಮ ಮಧ್ಯದಲ್ಲಿ ನಾನು ನಡೆಸುವ ಕೆಲಸವನ್ನು ನೋಡಿ, ನನ್ನ ನಾಮವೇ ಆರಾಧನೆಗೆ ಅರ್ಹವೆಂದು ಪ್ರತಿಷ್ಠಿಸುವರು; ಹೌದು, ಯಾಕೋಬ್ಯರ ಸದಮಲಸ್ವಾಮಿಯನ್ನು ಪ್ರತಿಷ್ಠೆಪಡಿಸಿ ಇಸ್ರಾಯೇಲರ ದೇವರಿಗೆ ನಡುಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನಿಮ್ಮ ವಂಶಜರು ತಮ್ಮ ಮಧ್ಯದಲ್ಲಿ ನಾನು ಎಸಗುವ ಕಾರ್ಯಗಳನ್ನು ನೋಡಿ, ನನ್ನ ನಾಮವೇ ಪರಮಪೂಜಿತವೆಂದು ಸ್ಥಿರಪಡಿಸುವರು. ಹೌದು, ಯಕೋಬ ವಂಶದ ಪರಮಪಾವನ ಸ್ವಾಮಿಯಾದ ನನ್ನನ್ನು ಪ್ರತಿಷ್ಠಾಪಿಸುವರು. ಇಸ್ರಯೇಲರ ದೇವರಾದ ನನ್ನಲ್ಲಿ ಭಯಭಕ್ತಿಯಿಂದಿರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಅವನು ತನ್ನ ಎಲ್ಲಾ ಮಕ್ಕಳನ್ನು ನೋಡಿ ‘ಪವಿತ್ರ ಎಂಬುದೇ ನನ್ನ ಹೆಸರು’ ಎಂದು ಹೇಳುವನು. ನನ್ನ ಕೈಗಳಿಂದ ನಾನು ಆ ಮಕ್ಕಳನ್ನು ನಿರ್ಮಿಸಿದೆನು. ಆ ಮಕ್ಕಳು ಯಾಕೋಬನ ಪರಿಶುದ್ಧ ದೇವರು ವಿಶೇಷವಾದವನು ಎಂದು ಹೇಳುವರು. ಆ ಮಕ್ಕಳು ಇಸ್ರೇಲರ ದೇವರನ್ನು ಗೌರವಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದರೆ ನನ್ನ ಕೈಕೆಲಸವಾದ ಅವನ ಮಕ್ಕಳನ್ನು ತನ್ನ ಮಧ್ಯದಲ್ಲಿ ಕಾಣುವಾಗ ನನ್ನ ನಾಮವನ್ನು ಪರಿಶುದ್ಧವೆಂದೆಣಿಸಿ, ಯಾಕೋಬಿನ ಪರಿಶುದ್ಧನನ್ನು ಪ್ರತಿಷ್ಠಿಸುವರು, ಇಸ್ರಾಯೇಲಿನ ದೇವರಿಗೆ ಭಯಪಡುವರು. ಅಧ್ಯಾಯವನ್ನು ನೋಡಿ |