ಯೆಶಾಯ 29:9 - ಕನ್ನಡ ಸತ್ಯವೇದವು J.V. (BSI)9 ನಿಮ್ಮನ್ನು ನೀವೇ ಬೆರಗುಮಾಡಿಕೊಂಡು ಬೆರಗಾಗಿರಿ, ಕುರುಡುಮಾಡಿಕೊಂಡು ಕುರುಡರಾಗಿರಿ; ಇವರು ಅಮಲೇರಿದ್ದಾರೆ, ದ್ರಾಕ್ಷಾರಸದಿಂದಲ್ಲ; ಓಲಾಡುತ್ತಾರೆ, ಮದ್ಯದಿಂದಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಿಮ್ಮನ್ನು ನೀವೇ ಬೆರಗು ಮಾಡಿಕೊಂಡು ಬೆರಗಾಗಿರಿ, ಕುರುಡು ಮಾಡಿಕೊಂಡು ಕುರುಡರಾಗಿರಿ! ಇವರು ಅಮಲೇರಿದ್ದಾರೆ, ದ್ರಾಕ್ಷಾರಸದಿಂದಲ್ಲ; ಓಲಾಡುತ್ತಾರೆ ಮದ್ಯದಿಂದಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಿಮ್ಮನ್ನು ನೀವೇ ಬೆರಗುಮಾಡಿಕೊಂಡು ನಿಬ್ಬೆರಗಾಗಿರಿ. ಕುರುಡು ಮಾಡಿಕೊಂಡು ಕಡುಕುರುಡರಾಗಿರಿ. ಮದ್ಯಪಾನ ಮಾಡದೆಯೇ ಮತ್ತರಾಗಿರಿ, ಕುಡಿಯದೆಯೇ ಓಲಾಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆಶ್ಚರ್ಯಪಡಿರಿ! ಬೆರಗಾಗಿರಿ! ನೀವು ಮತ್ತರಾಗಿರುವಿರಿ! ಆದರೆ ದ್ರಾಕ್ಷಾರಸದಿಂದಲ್ಲ. ನೋಡಿ, ಆಶ್ಚರ್ಯಪಡಿರಿ! ನೀವು ಮುಗ್ಗರಿಸಿಬೀಳುವಿರಿ, ಆದರೆ ಮದ್ಯಪಾನದಿಂದಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ತಾಮಸ ಮಾಡಿ ಆಶ್ಚರ್ಯಪಡಿರಿ. ಕುರುಡು ಮಾಡಿಕೊಂಡು ದೃಷ್ಟಿಯಿಲ್ಲದವರಾಗಿರಿ ಇವರು ಅಮಲೇರಿದ್ದಾರೆ. ಆದರೆ ದ್ರಾಕ್ಷಾರಸದಿಂದಲ್ಲ. ಅವರು ಕೂಗಾಡುತ್ತಾರೆ, ಆದರೆ ಮದ್ಯದಿಂದಲ್ಲ. ಅಧ್ಯಾಯವನ್ನು ನೋಡಿ |