Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 3:16 - ಕನ್ನಡ ಸತ್ಯವೇದವು J.V. (BSI)

16 ಇದಲ್ಲದೆ ಯೆಹೋವನು ಹೀಗನ್ನುತ್ತಾನೆ - ಚೀಯೋನಿನ ಹೆಂಗಸರು ವಯ್ಯಾರವುಳ್ಳವರಾಗಿ ಕತ್ತು ತೂಗುತ್ತಾ ಕಡೆಗಣ್ಣುಹಾಕುತ್ತಾ ಕುಲುಕಿ ಹೆಜ್ಜೆಯಿಡುತ್ತಾ ಕಾಲುಗೆಜ್ಜೆ ಜಣಜಣಿಸುತ್ತಾ ನಡೆಯುವವರಾಗಿರುವದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇದಲ್ಲದೆ ಯೆಹೋವನು ಹೀಗನ್ನುತ್ತಾನೆ, ಚೀಯೋನಿನ ಹೆಂಗಸರು ಅಹಂಕಾರವುಳ್ಳವರಾಗಿ, ಕತ್ತು ತೂಗುತ್ತಾ, ಕಣ್ಣುಗಳನ್ನು ತಿರುಗಿಸುತ್ತಾ, ವಯ್ಯಾರವಾಗಿ ಹೆಜ್ಜೆ ಇಡುತ್ತಾ, ಕಾಲು ಗೆಜ್ಜೆ ಜಣಜಣಿಸುತ್ತಾ ನಡೆಯುವವರಾಗಿರುವುದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸ್ವಾಮಿ ಇಂತೆನ್ನುತ್ತಾರೆ: ಸಿಯೋನಿನ ಮಹಿಳೆಯರ ಒನಪು ಒಯ್ಯಾರಗಳನ್ನು ನೋಡಿರಿ. ಅವರು ಕತ್ತುತೂಗುತ್ತಾ, ಕಡೆಗಣ್ಣು ಹಾಕುತ್ತಾ, ಕುಲುಕಿ ಹೆಜ್ಜೆಯಿಡುತ್ತಾ, ಕಾಲುಗೆಜ್ಜೆ ಜಣಜಣಿಸುತ್ತಾ ನಡೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನು ಹೇಳುವುದೇನೆಂದರೆ: “ಚೀಯೋನಿನ ಸ್ತ್ರೀಯರು ವಯ್ಯಾರದಿಂದ ತಲೆಯಾಡಿಸುತ್ತಾ, ಕುಡಿನೋಟ ಬೀರುತ್ತಾ, ಕುಲುಕಿ ಹೆಜ್ಜೆಯಿಡುತ್ತಾ, ಕಾಲುಗೆಜ್ಜೆಯನ್ನು ಝಣಝಣಿಸುತ್ತಾ ನಡೆಯುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇದಲ್ಲದೆ ಯೆಹೋವ ದೇವರು ಇಂತೆನ್ನುತ್ತಾರೆ: “ಚೀಯೋನ್ ಪುತ್ರಿಯರು ಅಹಂಕಾರಿಗಳಾಗಿದ್ದು, ಕತ್ತು ತೂಗುತ್ತಾ, ಕಣ್ಣುಗಳನ್ನು ತಿರುಗಿಸುತ್ತಾ, ನಾಜೂಕಿನಿಂದ ಹೆಜ್ಜೆ ಇಡುತ್ತಾ, ಕಾಲುಗೆಜ್ಜೆ ಜಣಜಣಿಸುತ್ತಾ ನಡೆಯುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 3:16
16 ತಿಳಿವುಗಳ ಹೋಲಿಕೆ  

ಆಗ ಕರ್ತನಾದ ಯೆಹೋವನು ನ್ಯಾಯತೀರ್ಪಿನ ಆತ್ಮದಿಂದಲೂ ದಹಿಸುವ ಆತ್ಮದಿಂದಲೂ ಚೀಯೋನಿನ ಸ್ತ್ರೀಯರ ಕಲ್ಮಷವನ್ನೂ ಯೆರೂಸಲೇವಿುನ ಮಧ್ಯದಲ್ಲಿನ ರಕ್ತವನ್ನೂ ತೊಳೆದುಬಿಟ್ಟ ಮೇಲೆ


ಚೀಯೋನ್ ನಗರಿಗೆ - ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆಂದು ಹೇಳಿರಿ ಎಂಬದು.


ಚೀಯೋನಿನ ನಾರಿಯರೇ, ಹೊರಟು ಹೋಗಿ ರಾಜನಾದ ಸೊಲೊಮೋನನನ್ನು ನೋಡಿರಿ. ಅವನು ವಿವಾಹವಾಗಿ ಉಲ್ಲಾಸಪಟ್ಟ ದಿನದಲ್ಲಿ ತಾಯಿಯು ಅವನ ತಲೆಗಿಟ್ಟ ಕಿರೀಟವನ್ನು ಧರಿಸಿಕೊಂಡಿದ್ದಾನೆ.


ಕಣ್ಣು ರೆಪ್ಪೆಗಳನ್ನೆತ್ತಿಕೊಂಡು ಎಷ್ಟೋ ಮೇಲೆ ಮೇಲೆಯೇ ನೋಡುತ್ತಿರುವ ಇನ್ನೊಂದು ತರದವರುಂಟು.


ಯೇಸು ಅವರ ಕಡೆಗೆ ತಿರುಗಿಕೊಂಡು - ಯೆರೂಸಲೇವಿುನ ಸ್ತ್ರೀಯರೇ, ನನಗೋಸ್ಕರ ಅಳಬೇಡಿರಿ, ನಿಮಗೋಸ್ಕರವೂ ನಿಮ್ಮ ಮಕ್ಕಳಿಗೋಸ್ಕರವೂ ಅಳಿರಿ.


ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೀಡಾಗವು; ಆಗ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ.


ಭೂವಿುಯು ಪ್ರಲಾಪಿಸುತ್ತಾ ಬಳಲಿದೆ, ಲೋಕವು ಕುಗ್ಗಿ ಹೋಗಿದೆ, ಲೋಕೋನ್ನತರು ಕಂಗೆಟ್ಟಿದ್ದಾರೆ.


ಆ ದಿನದಲ್ಲಿ ಕರ್ತನು ಅವರ ಅಂದುಗೆ, ತುರುಬು ಬಲೆ, ಅರ್ಧಚಂದ್ರ,


ಚೀಯೋನ್ ನಗರಿಯೊಂದೇ ಉಳಿದು ದ್ರಾಕ್ಷೇತೋಟದ ಮಂಚಿಕೆಯಂತೆಯೂ ಸವುತೆಯ ಹೊಲದ ಗುಡಸಲಿನ ಹಾಗೂ ಮುತ್ತಿದ ಪಟ್ಟಣದೋಪಾದಿಯಲ್ಲಿಯೂ ಇದೆ.


ಗರ್ವದಿಂದ ಭಂಗ; ಉಬ್ಬಿನಿಂದ ದೊಬ್ಬು.


ಇಗೋ, ಕರ್ತನೂ ಸೇನಾಧೀಶ್ವರನೂ ಆಗಿರುವ ಯೆಹೋವನೆಂಬ ನಾನು ಜೀವನಕ್ಕೆ ಆಧಾರಕೋದ್ಧಾರಕವಾದ ಅನ್ನಪಾನಗಳನ್ನೆಲ್ಲಾ ಯೆರೂಸಲೇವಿುನಿಂದಲೂ ಯೆಹೂದದಿಂದಲೂ ತೆಗೆದುಬಿಡುವೆನು.


ಬಾಲಕರನ್ನು ಪ್ರಭುಗಳನ್ನಾಗಿ ಆ ದೇಶಕ್ಕೆ ನೇವಿುಸುವೆನು, ಬಾಲಚೇಷ್ಟೆಯು ಅದನ್ನಾಳುವದು.


ಕರ್ತನಾದ ಯೆಹೋವನು ಅವರ ನಡುನೆತ್ತಿಯನ್ನು ಹುಣ್ಣಿನಿಂದ ಬಾಧಿಸಿ ಅವರ ಮಾನವನ್ನು ಬೈಲುಮಾಡುವನು.


ಗರ್ವದ ದೃಷ್ಟಿ ಕೊಬ್ಬಿದ ಹೃದಯ, ದುಷ್ಟರ ಭಾಗ್ಯ, ಇವು ಧರ್ಮವಿರುದ್ಧ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು