Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 3:23 - ಕನ್ನಡ ಸತ್ಯವೇದವು J.V. (BSI)

23 ಶಾಲು, ಚೀಲ, ಕೈಗನ್ನಡಿ, ನಾರುಮಡಿ, ಶಿರೋವೇಷ್ಟನ, ಮೇಲ್ಹೊದಿಕೆ, ಈ ಭೂಷಣಗಳನ್ನೆಲ್ಲಾ ತೆಗೆದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಕೈಗನ್ನಡಿ, ನಾರುಮಡಿ, ಮುಡಿ ಮುಕುಟ, ಮೇಲ್ಹೊದಿಕೆ ಈ ಸೊಗಸಾದ ಭೂಷಣಗಳನ್ನೆಲ್ಲಾ ತೆಗೆದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನವಿರು ಜಾಲರಿ, ನಾರುಮಡಿ, ಮುಡಿ ಮುಕುಟ, ಮೇಲ್ವಸ್ತ್ರ ಈ ಸೊಗಸು ಭೂಷಣಗಳನ್ನೆಲ್ಲಾ ತೆಗೆದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಕೈಗನ್ನಡಿಗಳನ್ನು, ಪೋಷಾಕುಗಳನ್ನು, ಮುಂಡಾಸಗಳನ್ನು ಮತ್ತು ಉದ್ದವಾದ ಶಾಲುಗಳನ್ನು ಅವರಿಂದ ತೆಗೆದುಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಕೈಗನ್ನಡಿ, ನಾರುಮಡಿ, ಮುಡಿ ಮುಕುಟ, ಮೇಲ್ವಸ್ತ್ರ ಈ ಸೊಗಸು ಭೂಷಣಗಳನ್ನೆಲ್ಲಾ ತೆಗೆದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 3:23
14 ತಿಳಿವುಗಳ ಹೋಲಿಕೆ  

ಪರಲೋಕದಲ್ಲಿರುವ ಸೈನ್ಯದವರು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಹತ್ತಿದವರಾಗಿ ಆತನ ಹಿಂದೆ ಬರುತ್ತಿದ್ದರು.


ಪ್ರಕಾಶಮಾನವೂ ನಿರ್ಮಲವೂ ಆದ ನಯವಾದ ನಾರುಮಡಿಯನ್ನು ಧರಿಸಿಕೊಳ್ಳುವದಕ್ಕೆ ಆಕೆಗೆ ಅನುಗ್ರಹಿಸೋಣವಾಗಿತ್ತು. ಆ ನಾರುಮಡಿ ಅಂದರೆ ದೇವಜನರ ಸತ್ಕಾರ್ಯಗಳೇ.


ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಸಕಲಾತಿ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು ಪ್ರತಿದಿನವೂ ವೈಭವದೊಡನೆ ಸುಖಸಂತೋಷಪಡುತ್ತಿದ್ದನು.


ಇದಲ್ಲದೆ ನಾನು ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ ಕಡಲುಹಂದಿಯ ತೊಗಲಿನ ಕೆರಗಳನ್ನು ನಿನ್ನ ಕಾಲಿಗೆ ಮೆಟ್ಟಿಸಿ ನಯವಾದ ನಾರುಮಡಿಯನ್ನು ನಿನಗೆ ಉಡಿಸಿ ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು.


ಊರಲ್ಲಿ ಸುತ್ತುತ್ತಿರುವ ಕಾವಲುಗಾರರು ನನ್ನನ್ನು ಕಂಡು ಹಿಡಿದು ಹೊಡೆದು ಗಾಯಪಡಿಸಿದರು; ಪವುಳಿಯ ಕಾವಲುಗಾರರು ಮೇಲುಹೊದಿಕೆಯನ್ನು ನನ್ನಿಂದ ಕಿತ್ತುಕೊಂಡರು.


ದಾವೀದನೂ ಮಂಜೂಷವನ್ನು ಹೊತ್ತ ಮತ್ತು ವಾದ್ಯಮಾಡುವ ಎಲ್ಲಾ ಲೇವಿಯರೂ ಹೊರುವವರ ಮುಖ್ಯಸ್ಥನಾದ ಕೆನನ್ಯನೂ ನೂಲಿನ ನಿಲುವಂಗಿಗಳನ್ನು ಧರಿಸಿಕೊಂಡಿದ್ದರು. ದಾವೀದನು ಇದರ ಹೊರತಾಗಿ ನಾರಿನ ಏಫೋದನ್ನೂ ಧರಿಸಿಕೊಂಡಿದ್ದನು.


ಆಗ ಅವನು ಆಕೆಗೆ - ನಿನ್ನ ಕಂಬಳಿಯನ್ನು ಹಾಸು ಎಂದು ಹೇಳಿ ಆಕೆ ಹಾಸಲು ಅದರಲ್ಲಿ ಆರು ಪಡಿ ಜವೆಗೋದಿಯನ್ನು ಹಾಕಿ ಹೊರಿಸಿದನು. ಆಕೆಯು ಊರೊಳಕ್ಕೆ ಹೋಗಿ ಅತ್ತೆಯ ಬಳಿಗೆ ಬಂದಾಗ


ದೇವದರ್ಶನದ ಗುಡಾರದ ಬಾಗಲಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರು ಕೊಟ್ಟ ತಾಮ್ರದ ದರ್ಪಣಗಳಿಂದ ಗಂಗಾಳವನ್ನೂ ಅದರ ಪೀಠವನ್ನೂ ಮಾಡಿದನು.


ತನ್ನ ಕೈಯಿಂದ ಮುದ್ರಿಕೆಯನ್ನು ತೆಗೆದು ಯೋಸೇಫನ ಕೈಗೆ ಇಟ್ಟು ಅವನಿಗೆ ನಾರುಮಡಿಯನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಸರಪಣಿಯನ್ನು ಹಾಕಿಸಿ


ನಮ್ಮನ್ನು ಎದುರುಗೊಳ್ಳುವದಕ್ಕೆ ಅಡವಿಯಲ್ಲಿ ನಡೆದು ಬರುವ ಆ ಮನುಷ್ಯನು ಯಾರೆಂದು ಆ ಸೇವಕನನ್ನು ಕೇಳಿದಳು. ಅವನೇ ನನ್ನ ದಣಿಯೆಂದು ಅವನು ಹೇಳಿದಾಗ ಆಕೆ ಮುಸುಕುಹಾಕಿಕೊಂಡಳು.


ಮತ್ತು ಸುಗಂಧಕ್ಕೆ ಬದಲಾಗಿ ಕೊಳೆ, ನಡುಪಟ್ಟಿಯಿದ್ದಲ್ಲಿ ಹಗ್ಗ, ಅಂದವಾಗಿ ಸೆಕ್ಕಿದ ಜಡೆಯ ಸ್ಥಾನದಲ್ಲಿ ಬೋಡು, ನಡುವಿನ ಶಲ್ಯಕ್ಕೆ ಪ್ರತಿಯಾಗಿ ಗೋಣೀಪಟ್ಟಿ, ಬೆಡಗಿಗೆ ಬದಲಾಗಿ ಬರೆ, ಇವು ಆಗುವವು.


ಬೀಸುವ ಕಲ್ಲನ್ನು ಹಿಡಿದು ಹಿಟ್ಟು ಬೀಸು, ಮುಸುಕನ್ನು ತೆಗೆದುಹಾಕಿ ಈಜಾಡುವ ನೆರಿಗೆಯನ್ನು ಹರಿದುಬಿಟ್ಟು ಬೆತ್ತಲೆಕಾಲಾಗಿ ಹೊಳೆಗಳನ್ನು ಹಾದುಹೋಗು.


ಇವನ ತಲೆಗೆ ಶುಭ್ರವಾದ ಮುಂಡಾಸವನ್ನು ಸುತ್ತಿರಿ ಎಂದು ಅವನು ಅಪ್ಪಣೆಕೊಡಲು ಅವರು ಅವನ ತಲೆಗೆ ಶುಭ್ರವಾದ ಮುಂಡಾಸವನ್ನು ಸುತ್ತಿ ಅವನಿಗೆ ವಸ್ತ್ರಗಳನ್ನು ಹಾಕಿದರು; ಆಗ ಯೆಹೋವನ ದೂತನು ಎದ್ದು ನಿಂತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು