Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 3:25 - ಕನ್ನಡ ಸತ್ಯವೇದವು J.V. (BSI)

25 [ಚೀಯೋನ್ ನಗರಿಯೇ,] ನಿನ್ನ ವೀರರು ಖಡ್ಗದಿಂದ ಬಿದ್ದುಹೋಗುವರು, ನಿನ್ನ ಶೌರ್ಯವು ಯುದ್ಧದಲ್ಲಿ ಅಡಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಚೀಯೋನ್ ನಗರಿಯೇ, ನಿನ್ನ ವೀರರು ಖಡ್ಗದಿಂದ ಬಿದ್ದುಹೋಗುವರು. ನಿನ್ನ ಶೌರ್ಯವು ಯುದ್ಧದಲ್ಲಿ ಅಡಗಿ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಎಲೌ, ಸಿಯೋನ್ ನಗರಿಯೇ, ನಿನ್ನ ವೀರರು ಖಡ್ಗಕ್ಕೆ ತುತ್ತಾಗುವರು; ನಿನ್ನ ಯೋಧರು ಯುದ್ಧದಲ್ಲಿ ಮಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆ ಸಮಯದಲ್ಲಿ ನಿಮ್ಮ ಗಂಡಸರೆಲ್ಲಾ ಖಡ್ಗದಿಂದ ಹತರಾಗುವರು. ನಿಮ್ಮ ವೀರರೆಲ್ಲರೂ ಯುದ್ಧದಲ್ಲಿ ಮಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಿನ್ನ ಗಂಡಸರು ಖಡ್ಗಕ್ಕೆ ತುತ್ತಾಗುವರು. ನಿನ್ನ ಶೂರರು ಯುದ್ಧದಲ್ಲಿ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 3:25
12 ತಿಳಿವುಗಳ ಹೋಲಿಕೆ  

ನಮ್ಮನ್ನು ಆಪತ್ತು ಹಿಂದಟ್ಟಿ ಹಿಡಿಯದು, ಎದುರುಬಿದ್ದು ಮುತ್ತದು ಅಂದುಕೊಂಡ ನನ್ನ ಜನರಲ್ಲಿನ ಸಮಸ್ತ ಪಾಪಿಗಳು ಖಡ್ಗ ಹತರಾಗುವರು.


ಯುವಕವೃದ್ಧರು ಬೀದಿಗಳಲ್ಲಿ ನೆಲದ ಮೇಲೆ ಬಿದ್ದಿರುತ್ತಾರೆ, ನನ್ನ ತರುಣೀ ತರುಣರು ಖಡ್ಗದಿಂದ ಹತರಾಗಿದ್ದಾರೆ; ನೀನು ಕೋಪತೀರಿಸಿಕೊಳ್ಳುವ ದಿನದಲ್ಲಿ ಅವರನ್ನು ಕೊಂದುಹಾಕಿದಿ, ಕನಿಕರಿಸದೆ ಹತಿಸಿದಿ.


ಪಟ್ಟಣದಲ್ಲಿ ನಿಲ್ಲುವವನು ಖಡ್ಗಕ್ಷಾಮವ್ಯಾಧಿಗಳಿಂದ ಸಾಯುವನು; ನಿಮ್ಮನ್ನು ಮುತ್ತುವ ಕಸ್ದೀಯರನ್ನು ಮರೆಹೊಗಲು ಪಟ್ಟಣವನ್ನು ಬಿಡುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗುವನು.


ನಾನು ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಯೆರೂಸಲೇವಿುನವರ ಆಲೋಚನೆಯನ್ನು ಚೆಲ್ಲಿ ಮಣ್ಣುಪಾಲುಮಾಡಿ ಅವರ ಪ್ರಾಣವನ್ನು ಹುಡುಕುವ ಶತ್ರುಗಳ ಖಡ್ಗದಿಂದ ಅವರನ್ನು ಬೀಳಿಸಿ ಆ ಹೆಣಗಳನ್ನು ಆಕಾಶಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವನ್ನಾಗಿ ಮಾಡುವೆನು.


ಆದಕಾರಣ ಅವರ ಮಕ್ಕಳನ್ನು ಕ್ಷಾಮಕ್ಕೆ ಗುರಿಮಾಡಿ ಕತ್ತಿಯ ಬಾಯಿಗೆ ಒಪ್ಪಿಸು; ಅವರ ಹೆಂಡಿರು ಮಕ್ಕಳನ್ನು ನೀಗಿಕೊಂಡು ವಿಧವೆಯರಾಗಲಿ; ಮೃತ್ಯುವು ಅವರ ಗಂಡಂದಿರನ್ನು ಸಂಹರಿಸಲಿ;


ನಾನು ಊರಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು; ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ.


ಇಗೋ, ಅವರನ್ನು ದಂಡಿಸುವೆನು, ಯೌವನಸ್ಥರು ಖಡ್ಗದಿಂದ ನಾಶವಾಗುವರು, ಅವರ ಗಂಡು ಹೆಣ್ಣುಮಕ್ಕಳು ಕ್ಷಾಮದಿಂದ ಸಾಯುವರು;


ಒಪ್ಪದೆ ತಿರುಗಿ ಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಈ ಮಾತು ಯೆಹೋವನೇ ನುಡಿದದ್ದು.


ಅದೇ ಕಾರಣದಿಂದ ನಮ್ಮ ಹಿರಿಯರು ಕತ್ತಿಯಿಂದ ಹತರಾದರು; ನಮ್ಮ ಗಂಡು ಹೆಣ್ಣು ಮಕ್ಕಳೂ ಹೆಂಡತಿಯರೂ ಸೆರೆಯವರಾಗಿ ಹೋಗಬೇಕಾಯಿತು.


ನೀವೆಲ್ಲರೂ ಕೊಲೆಗೊಳಗಾಗಿ ಬೀಳುವಿರಿ; ಏಕಂದರೆ ನಾನು ಕೂಗಲು ನೀವು ಉತ್ತರಕೊಡಲಿಲ್ಲ. ನಾನು ಹೇಳಲು ನೀವು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡಿಸಿ ನನಗೆ ಇಷ್ಟವಲ್ಲದ್ದನ್ನು ಆರಿಸಿಕೊಂಡಿರಿ.


ಅವರ ವಿಧವೆಯರು ನನ್ನ ಭಾಗಕ್ಕೆ ಸಮುದ್ರದ ಉಸುಬಿಗಿಂತ ಹೆಚ್ಚಾಗಿರುವರು; ಯುವಕರ ತಾಯಿಗಳ ಮೇಲೆ ಕೊಳ್ಳೆಹೊಡೆಯುವವನನ್ನು ಮಧ್ಯಾಹ್ನದಲ್ಲೇ ಬರಮಾಡುವೆನು; ಅವರ ಮೇಲೆ ಕಳವಳವನ್ನೂ ದಿಗಿಲನ್ನೂ ತಟ್ಟನೆ ಬೀಳಿಸುವೆನು.


ರೆಮಲ್ಯನ ಮಗನಾದ ಪೆಕಹ ಎಂಬವನು ಒಂದೇ ದಿವಸ ಯೆಹೂದ್ಯರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಲ್ಲಿಸಿದನು. ಇವರೆಲ್ಲರೂ ರಣವೀರರು. ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಯೆಹೋವನನ್ನು ಬಿಟ್ಟದ್ದೇ ಇದಕ್ಕೆ ಕಾರಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು